ರೌಡಿಶೀಟರ್‌ನ ಮಾನವ ಹಕ್ಕು ಅಧಿಕಾರಿಯೆಂದು ಪರಿಚಯ; ಮಟ್ಟಣ್ಣನವರ್ ವಿರುದ್ಧ ಕೇಸ್ ದಾಖಲಿಸುವಂತೆ ಆಯೋಗ ಸೂಚನೆ!

Kannadaprabha News, Ravi Janekal |   | Kannada Prabha
Published : Aug 29, 2025, 07:54 AM IST
Girish mattannavar

ಸಾರಾಂಶ

ಗಿರೀಶ್ ಮಟ್ಟಣ್ಣವರ್, ಅಪರಾಧ ಹಿನ್ನೆಲೆಯ ವ್ಯಕ್ತಿಯನ್ನು ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಎಂದು ಪರಿಚಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಾನವ ಹಕ್ಕುಗಳ ಆಯೋಗವು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದೆ. 

ಬೆಂಗಳೂರು (ಆ.29): ಇತ್ತೀಚೆಗೆ ಗಿರೀಶ್ ಮಟ್ಟಣ್ಣವರ್ ಮಾಧ್ಯಮಗಳೊಂದಿಗೆ ಮಾತನಾಡುವಾಗ ಮಾನವ ಹಕ್ಕುಗಳ ಆಯೋಗದ ಅಧಿಕಾರಿಯೆಂದು ಅಪರಾಧ ಹಿನ್ನೆಲೆಯ ವ್ಯಕ್ತಿ ಮದನ್‌ ಎಂಬಾತನನ್ನು ಪರಿಚಯಿಸಿದ ಪ್ರಕರಣಕ್ಕೆ ಸಂಬಂಧಿಸಿ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿ ಸೆ.21ರ ಒಳಗೆ ವರದಿ ಸಲ್ಲಿಸುವಂತೆ ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿಗೆ ರಾಜ್ಯ ಮಾನವ ಹಕ್ಕುಗಳ ಆಯೋಗ ಸೂಚನೆ ನೀಡಿದೆ.

ಇದನ್ನೂ ಓದಿ: Dharmasthala case: ತಿಮ್ಮರೋಡಿ ಜೊತೆ ವಸಂತ್ ಗಿಳಿಯಾರ್‌ರ ಎರಡು ವರ್ಷ ಹಳೆಯ ಫೋಟೋ ವೈರಲ್!

ಇತ್ತೀಚೆಗೆ ಮಟ್ಟೆಣ್ಣವರ್‌ ಮಾಧ್ಯಮಗಳೊಂದಿಗೆ ಮಾತನಾಡುವಾಗ ರೌಡಿ ಪಟ್ಟಿಯಲ್ಲಿರುವ ಮದನ್ ಎಂಬಾತನನ್ನು ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಎಂದು ಗಿರೀಶ್ ಪರಿಚಯಿಸಿದ್ದರು. ಪರಿಶೀಲನೆ ವೇಳೆ ಮದನ್ ಎಂಬಾತ ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಅಲ್ಲ ಎಂಬುದು ಬಯಲಾಗಿತ್ತು. ಸ್ವತಃ ಮದನ್ ಕೂಡ ತಾನು ಮಾನವ ಹಕ್ಕು ಆಯೋಗದ ಅಧಿಕಾರಿ ಅಲ್ಲ ಎಂದು ಸ್ಪಷ್ಟಪಡಿಸಿದ್ದರು.

ಈ ಕುರಿತು ಮಾಹಿತಿ ಪಡೆದಿರುವ ಮಾನವ ಹಕ್ಕುಗಳ ಆಯೋಗ, ಗಿರೀಶ್ ಹೇಳಿಕೆ ಸಂಬಂಧಿಸಿ ಕೇಸ್ ದಾಖಲಿಸಿ ತನಿಖೆ ನಡೆಸಿ ಸೆ.21ರ ಒಳಗೆ ವರದಿ ಸಲ್ಲಿಸುವಂತೆ ಸೂಚಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್