Dharmasthala Case: 19 ದಿನದಲ್ಲಿ 17 ಸ್ಥಳಗಳಲ್ಲಿ ಅಗೆದ್ರೂ ಸಿಕ್ಕಿಲ್ಲ ಸಾಕ್ಷ್ಯ, ಇಂದು ಮತ್ತೆ ಇಂದು ಮತ್ತೆ ಉತ್ಖನನ?

Kannadaprabha News, Ravi Janekal |   | Kannada Prabha
Published : Aug 16, 2025, 07:30 AM IST
SIT Urged to Use GPR in Dharmasthala Mass Burials Case

ಸಾರಾಂಶ

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಸಮಾಧಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 19 ದಿನಗಳಿಂದ ನಡೆಯುತ್ತಿರುವ ಶೋಧ ಕಾರ್ಯಕ್ಕೆ ಶುಕ್ರವಾರ ಬಿಡುವು ನೀಡಲಾಗಿದೆ. ಇಂದು ಮತ್ತೆ ಮುಂದುವರಿಯುತ್ತಾ ಉತ್ಖನನ?

ಬೆಳ್ತಂಗಡಿ (ಆ.16): ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಸಮಾಧಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 19 ದಿನಗಳಿಂದ ನಡೆಯುತ್ತಿರುವ ಶೋಧ ಕಾರ್ಯಾಚರಣೆಗೆ ಶುಕ್ರವಾರ ಬಿಡುವು ನೀಡಿದ್ದು, ಶನಿವಾರ ಮುಂದುವರಿಯುವ ಸಾಧ್ಯತೆ ಇದೆ.

ಅನಾಮಿಕ ದೂರುದಾರ ನೀಡಿದ ದೂರಿನಂತೆ ಎಸ್‌ಐಟಿ ತನಿಖಾ ತಂಡದಿಂದ ಜು.28ರಂದು ಆರಂಭಿಸಿದ ಶೋಧ ಕಾರ್ಯ ಸ್ವಾತಂತ್ರೋತ್ಸವ ದಿನಾಚರಣೆಯಲ್ಲಿ ಅಧಿಕಾರಿಗಳು ಭಾಗವಹಿಸಬೇಕಾಗಿದ್ದ ಕಾರಣ ಆ.15ರಂದು ನಡೆದಿರಲಿಲ್ಲ. ಉಳಿದ 15 ದಿನಗಳಲ್ಲಿ ನಾನಾ ಭಾಗಗಳಲ್ಲಿ ಶೋಧ ಕಾರ್ಯಾಚರಣೆ ನಡೆದಿದೆ.

ಶೋಧ ಕಾರ್ಯಕ್ಕೆ ವಿರಾಮ?:

ಗೃಹ ಸಚಿವರು ಸೋಮವಾರ ಈ ಪ್ರಕರಣದ ಕುರಿತು ಉತ್ತರ ನೀಡಲಿದ್ದಾರೆ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದು, ಇದರಿಂದ ಎಸ್‌ಐಟಿಯ ಒಂದು ಹಂತದ ತನಿಖೆ, ಶೋಧ ಕಾರ್ಯಕ್ಕೆ ವಿರಾಮ ಬೀಳಲಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ.

ಇದುವರೆಗಿನ ಕಾರ್ಯಾಚರಣೆಯಲ್ಲಿ ದೂರುದಾರ ತಿಳಿಸಿದಂತಹ ಯಾವುದೇ ಕುರುಹುಗಳು ಕಂಡು ಬಾರದ ಹಿನ್ನೆಲೆಯಲ್ಲಿ ಈ ಪ್ರಕರಣ ಅನೇಕರ ಕೆಂಗಣ್ಣಿಗೂ ಗುರಿಯಾಗಿದೆ. ಈ ನಿಟ್ಟಿನಲ್ಲಿ ಶನಿವಾರದ ಕಾರ್ಯಾಚರಣೆ ಯಾವ ರೀತಿ ಇರಬಹುದು ಎಂಬ ಕುತೂಹಲವು ಹೆಚ್ಚಿದೆ.

ಇದುವರೆಗೆ ಒಟ್ಟು 17 ಸ್ಥಳಗಳಲ್ಲಿ ಶೋಧ ಕಾರ್ಯ ನಡೆದಿದ್ದು, ಸ್ಥಳ ಸಂಖ್ಯೆ 6ರಲ್ಲಿ ಹಾಗೂ ಬಂಗ್ಲೆಗುಡ್ಡೆ ಪರಿಸರದಲ್ಲಿ ಶೋಧ ಕಾರ್ಯಕ್ಕೆ ತೆರಳುವ ವೇಳೆ ಭೂಮಿಯ ಮೇಲ್ಭಾಗದಲ್ಲಿ ಕಳೇಬರದ ಅವಶೇಷಗಳು ಸಿಕ್ಕಿದ್ದು ಬಿಟ್ಟರೆ ಉಳಿದ ಕಡೆಗಳಲ್ಲಿ ದೂರುದಾರನ ದೂರಿಗೆ ಯಾವುದೇ ಫಲ ಸಿಕ್ಕಿಲ್ಲ. ಇದರಿಂದ ಈ ಪ್ರಕರಣ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೂ ಗ್ರಾಸವಾಗಿದೆ.

ಮಾಹಿತಿ ಬಿಟ್ಟುಕೊಡದ ಎಸ್‌ಐಟಿ

ಪ್ರಕರಣದ ಕುರಿತು ಇದುವರೆಗೂ ಎಸ್‌ಐಟಿ ಯಾವ ಒಂದು ಮಾಹಿತಿಯನ್ನೂ ಬಿಟ್ಟು ಕೊಟ್ಟಿಲ್ಲ. ಇದರಿಂದ ಸಾರ್ವಜನಿಕ ವಲಯದಲ್ಲಿ ಗೊಂದಲ, ಅನಗತ್ಯ ಚರ್ಚೆಗಳು ನಡೆಯುವಂತಾಗಿದೆ. ಶೋಧ ಕಾರ್ಯ ಆರಂಭದ ವೇಳೆ ಕಂಡುಬರುತ್ತಿದ್ದ ಕುತೂಹಲಿಗರ ಸಂಖ್ಯೆ ದಿನ ಕಳೆದಂತೆ ಕಡಿಮೆಯಾಗಿದೆ. ಹೆಚ್ಚಿನ ಅಧಿಕಾರಿ ವರ್ಗದವರು ಶೋಧ ಕಾರ್ಯಾಚರಣೆ ತಂಡದ ಭಾಗವಾಗಿರುವ ಕಾರಣ ಜನಸಾಮಾನ್ಯರ ಕಚೇರಿ ಕೆಲಸಗಳು ವಿಳಂಬವಾಗುತ್ತಿವೆ ಎಂಬ ದೂರು ಕೇಳಿಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ