
ಮಂಗಳೂರು (ಜುಲೈ.31): ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವ ಶಂಕೆಯ ತನಿಖೆಯು ಇಂದು ಮೂರನೇ ದಿನಕ್ಕೆ ಕಾಲಿಟ್ಟಿದೆ. ವಿಶೇಷ ತನಿಖಾ ದಳ (ಎಸ್‌ಐಟಿ) ತಂಡವು ಈ ರಹಸ್ಯ ಪ್ರಕರಣದ ಉತ್ಖನನ ಕಾರ್ಯವನ್ನು ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಆರಂಭಿಸಲಿದೆ.
ಈಗಾಗಲೇ ಐದು ಪಾಯಿಂಟ್‌ಗಳಲ್ಲಿ ಉತ್ಖನನ ಕಾರ್ಯ ಮುಕ್ತಾಯಗೊಂಡಿದ್ದು, ಇಂದಿನಿಂದ 6ನೇ ಪಾಯಿಂಟ್‌ನಲ್ಲಿ ಕಾರ್ಯಾಚರಣೆ ಶುರುವಾಗಲಿದೆ. ಆದರೆ, ಇದುವರೆಗೆ ಯಾವುದೇ ಅಸ್ಥಿಪಂಜರ ಅಥವಾ ಶವಗಳು ಪತ್ತೆಯಾಗಿಲ್ಲ, ಇದು ತನಿಖೆಯನ್ನು ಇನ್ನಷ್ಟು ಗಂಭೀರಗೊಳಿಸಿದೆ.
ಜಿಲ್ಲೆಯಲ್ಲೇ ಪ್ರಣವ್ ಮೊಹಂತಿ ಮುಕ್ಕಾಂ
ಎಸ್‌ಐಟಿ ತಂಡದ ಮುಖ್ಯಸ್ಥ ಪ್ರಣವ್ ಮೊಹಂತಿಯವರು ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಮುಕ್ಕಾಂ ಹೂಡಿದ್ದಾರೆ. ನಿನ್ನೆ ರಾತ್ರಿ 7 ರಿಂದ 9:30ರವರೆಗೆ ಬೆಳ್ತಂಗಡಿಯ ಕಚೇರಿಯಲ್ಲಿ ಎಸ್‌ಐಟಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಅವರು, ಬಳಿಕ ಮಂಗಳೂರಿನಲ್ಲಿ ವಾಸ್ತವ್ಯ ಹೂಡಿದ್ದಾರೆ. ಇಂದು ಮೊಹಂತಿಯವರು ಉತ್ಖನನ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುವ ಸಾಧ್ಯತೆ ಇದೆ.
ಈ ಪ್ರಕರಣದ ಬಗ್ಗೆ ಸ್ಥಳೀಯರಲ್ಲಿ ಆತಂಕ ಮತ್ತು ಕುತೂಹಲ ಮಿಶ್ರಿತ ವಾತಾವರಣವಿದೆ. ಇಂದಿನ ಕಾರ್ಯಾಚರಣೆಯಲ್ಲಿ ಅಸ್ಥಿಪಂಜರ ಅಥವಾ ಬೇರೆ ಏನಾದರೂ ಸುಳಿವು ಸಿಗಲಿದೆಯಾ? ಒಂದು ವೇಳೆ ಅಸ್ತಿಪಂಜರ ಪತ್ತೆಯಾದರೆ ಮುಂದಿನ ತನಿಖೆ ಏನು?.. ತನಿಖೆಯ ಫಲಿತಾಂಶದ ಬಗ್ಗೆ ಎಲ್ಲರ ಕಣ್ಣು ನೆಟ್ಟಿದೆ. ಈ ಉತ್ಖನನವು ಯಾವ ರಹಸ್ಯವನ್ನು ಬಯಲಿಗೆಳೆಯಲಿದೆ ಎಂಬುದು ಇನ್ನೂ ಅನಿಶ್ಚಿತವಾಗಿದೆ. ಎಸ್‌ಐಟಿ ತಂಡವು ಎಲ್ಲ ಕಾನೂನು ಕ್ರಮಗಳನ್ನು ಅನುಸರಿಸಿ, ಈ ಗಂಭೀರ ವಿಷಯದ ಸತ್ಯಾಸತ್ಯತೆಯನ್ನು ಕಂಡುಹಿಡಿಯಲು ಶ್ರಮಿಸುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ