ಧರ್ಮಸ್ಥಳದ ವಿರುದ್ಧ ಅಪಪ್ರಚಾರ, ಯೂಟೂಬರ್ ಸಮೀರ್ ವಿರುದ್ಧ ಡಿಜಿ-ಐಜಿಪಿಗೆ ದೂರು!

Published : Aug 20, 2025, 05:01 PM IST
Dharmasthala YouTuber Sameer MD

ಸಾರಾಂಶ

ಯೂಟ್ಯೂಬರ್ ಸಮೀರ್ ಧರ್ಮಸ್ಥಳದ ಬಗ್ಗೆ ಸುಳ್ಳು ವಿಡಿಯೋಗಳನ್ನು ಹರಿಬಿಟ್ಟು ಭಕ್ತರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆಂದು ಆರೋಪಿಸಿ ತೇಜಸ್ ಗೌಡ ಡಿಜಿ-ಐಜಿಪಿಗೆ ದೂರು ನೀಡಿದ್ದಾರೆ. ಧರ್ಮದ್ವೇಷ ಹುಟ್ಟಿಸುವ, ಸಮಾಜದಲ್ಲಿ ಅಶಾಂತಿ ಮೂಡಿಸುವ ಈ ವಿಡಿಯೋಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಬೆಂಗಳೂರು (ಆ.20): ಯೂಟ್ಯೂಬರ್ ಸಮೀರ್ ಎಂಬುವವರು ಧರ್ಮಸ್ಥಳದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮತ್ತು ಅಪ್ರಾಮಾಣಿಕ ವಿಡಿಯೋಗಳನ್ನು ಪ್ರಸಾರ ಮಾಡುವ ಮೂಲಕ ಕೋಟ್ಯಂತರ ಹಿಂದೂ ಭಕ್ತರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಹಿಂದೂಪರ ಹೋರಾಟಗಾರ ತೇಜಸ್ ಗೌಡ ಅವರು ಡಿಜಿ-ಐಜಿಪಿಗೆ ದೂರು ಸಲ್ಲಿಸಿದ್ದಾರೆ.

ದೂರಿನಲ್ಲಿ ತಿಳಿಸಿರುವಂತೆ, ಯೂಟ್ಯೂಬರ್ ಸಮೀರ್ ಧರ್ಮಸ್ಥಳದ ವಿರುದ್ಧ ಅವಮಾನಕರ ಮತ್ತು ಕೃತಕ ಪ್ರಚಾರ ನಡೆಸಿದ್ದಾರೆ. ಈ ವಿಡಿಯೋಗಳು ಧರ್ಮ ಮತ್ತು ಧರ್ಮಗಳ ನಡುವೆ ದ್ವೇಷವನ್ನು ಬಿತ್ತುವ ಮತ್ತು ಸಮಾಜದಲ್ಲಿ ಅಶಾಂತಿ ಮೂಡಿಸುವ ಕೆಲಸ ಮಾಡುತ್ತಿವೆ. ಈ ರೀತಿ ಸುಳ್ಳು ಸುದ್ದಿಗಳನ್ನು ಹರಡುವುದರಿಂದ ಕೇವಲ ಧಾರ್ಮಿಕ ಕೇಂದ್ರಕ್ಕೆ ಮಾತ್ರವಲ್ಲದೆ, ಅಲ್ಲಿನ ಲಕ್ಷಾಂತರ ಭಕ್ತರ ನಂಬಿಕೆಗೂ ಧಕ್ಕೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದೂರುದಾರ ತೇಜಸ್ ಗೌಡ, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಮೀರ್‌‌ನನ್ನು ತಕ್ಷಣವೇ ಬಂಧಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಧಾರ್ಮಿಕ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಪ್ರಚಾರ ನಡೆಯುತ್ತಿರುವುದು ಹೆಚ್ಚಾಗಿದ್ದು, ಈ ರೀತಿಯ ಕೃತ್ಯಗಳನ್ನು ತಡೆಯಲು ಕಠಿಣ ಕ್ರಮಗಳು ಅಗತ್ಯವೆಂದು ಅವರು ಒತ್ತಿ ಹೇಳಿದ್ದಾರೆ. ದೂರು ಸ್ವೀಕರಿಸಿದ ಪೊಲೀಸ್ ಇಲಾಖೆ, ಈ ಕುರಿತು ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದೆ. ಈ ಘಟನೆಯು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುಳ್ಳು ಸುದ್ದಿಗಳ ಕುರಿತು ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ.

ಪತ್ರದಲ್ಲಿ ಉಲ್ಲೇಖಿಸಿರುವ ಪ್ರಮುಖ ಸೆಕ್ಷನ್‌ಗಳು:

  • ಭಾರತೀಯ ನ್ಯಾಯ ಸಂಹಿತೆ 2023
  • ಸುಳ್ಳು ಮಾಹಿತಿ ನೀಡುವುದು - ಸೆಕ್ಷನ್ 192
  • ಧರ್ಮ ಹಾಗೂ ಭಾಷೆಗಳ ನಡುವೆ ದ್ವೇಷ ಬಿತ್ತುವುದು - ಸೆಕ್ಷನ್ 194
  • ಮೋಸ ಮತ್ತಿ ತಪ್ಪು ವಿಷಯಗಳ ಪ್ರಸಾರ - ಸೆಕ್ಷನ್ 240
  • ಧಾರ್ಮಿಕ ಭಾವನೆಗಳಿಗೆ ಅವಮಾನ - ಸೆಕ್ಷನ್ 298
  • ದ್ವೇಷ ಹುಟ್ಟಿಸುವ ಸುಳ್ಳು ಪ್ರಕಟಣೆ - ಸೆಕ್ಷನ್ 353(1/ಬಿ)
  • ಮಾನಹಾನಿ - ಸೆಕ್ಷನ್ 356
  • ಅಪರಾಧ ಮಾಡಲು ಷಡ್ಯಂತ್ರ - ಸೆಕ್ಷನ್ 61
  • ಮೋಸದಿಂದ ಮಾಹಿತಿ ಪ್ರಸಾರ - ಸೆಕ್ಷನ್ 66ಡಿ
  • ಸಾರ್ವಜನಿಕ ಶಾಂತಿಗೆ ಹಾನಿ ಮಾಡುವ ವಿಷಯ ತಡೆಯುವ ಅಧಿಕಾರ - ಸೆಕ್ಷನ್ 66ಎ

ಸಮೀರ್ ಎಂ.ಡಿ. ವಿರುದ್ಧ ಎಫ್‌ಐಆರ್ ದಾಖಲಿಸಿ ಸಮಾಜದಲ್ಲಿ ದ್ವೇಷ, ಅಶಾಂತಿ ಮತ್ತು ಅಶ್ರದ್ಧೆ ಉಂಟುಮಾಡುವ ಅವನ ಕೃತ್ಯಗಳಿಗೆ ತಕ್ಕ ಕಾನೂನು ಕ್ರಮ ಕೈಗೊಂಡು ಕಠಿಣ ಶಿಕ್ಷೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!