
ಮಂಗಳೂರು (ನ.20): ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣದ ತನಿಖೆಯ ವರದಿಯನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಸಿದ್ಧಪಡಿಸಿದ್ದು, ಗುರುವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಪ್ರಥಮ ವರದಿ ಸಲ್ಲಿಸುವ ಸಾಧ್ಯತೆ ಇದೆ.
ಪ್ರಕರಣದ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಿ ಎಸ್ಐಟಿ ಈ ವರದಿಯನ್ನು ಸಿದ್ಧಪಡಿಸಿದೆ. ಪ್ರಕರಣದ ತನಿಖಾಧಿಕಾರಿ ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಕೋರ್ಟ್‌ಗೆ ವರದಿ ಸಲ್ಲಿಸುವ ಸಾಧ್ಯತೆ ಇದೆ.
ಸುದೀರ್ಘ ತನಿಖೆ ನಂತರ ಇಂದು ಮೊದಲ ವರದಿ:
ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 20 ರಂದು ರಾಜ್ಯ ಸರ್ಕಾರ ತನಿಖೆ ನಡೆಸಲು ಎಸ್ಐಟಿ ರಚನೆ ಮಾಡಿತ್ತು. ಸುದೀರ್ಘ ತನಿಖೆ ನಡೆಸಿದ ಬಳಿಕ ಈಗ ಮೊದಲ ಹಂತದ ತನಿಖಾ ವರದಿ ಸಿದ್ಧಪಡಿಸಲಾಗಿದೆ.
ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಚಿನ್ನಯ್ಯ ಪ್ರಸಕ್ತ ಶಿವಮೊಗ್ಗ ಜೈಲಿನಲ್ಲಿ ಬಂಧನದಲ್ಲಿದ್ದಾನೆ. ಸೌಜನ್ಯ ಪರ ಹೋರಾಟಗಾರರಾದ ಮಹೇಶ ಶೆಟ್ಟಿ ತಿಮರೋಡಿ ಸೇರಿದಂತೆ ಐವರ ವಿಚಾರಣೆಗೆ ಎಸ್ಐಟಿ ನೋಟಿಸ್ ನೀಡಿತ್ತು. ಈ ನೋಟಿಸ್‌ಗೆ ಕೋರ್ಟ್ ಮೂಲಕ ತಿಮರೋಡಿ ತಂಡ ತಡೆ ತಂದಿತ್ತು. ಈ ಎಲ್ಲ ಬೆಳವಣಿಗೆಗಳ ನಡುವೆ ಮೊದಲ ಹಂತದ ವರದಿ ಸಲ್ಲಿಕೆಯಾಗುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ