
ಮಂಗಳೂರು (ಸೆ.14): ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪ ಮಾಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವೆಂಕಪ್ಪ ಕೋಟ್ಯಾನ್ ಎಂಬವರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ದೂರು ನೀಡಿದ್ದಾರೆ.
ಸ್ನೇಹಮಯಿ ಕೃಷ್ಣ ವಿರುದ್ಧ ದೂರು ನೀಡಿದ್ದು ಯಾಕೆ?
2012ರಲ್ಲಿ ನಡೆದ ಸೌಜನ್ಯ ಕೊಲೆಯ ಹಳೆಯ ಘಟನೆ ಸ್ನೇಹಮಯಿ ಕೃಷ್ಣ ಅವರು ಸೌಜನ್ಯನ ಮಾವ ವಿಠಲ ಗೌಡ ಅವರನ್ನು ಕೊಲೆಗಾರ ಎಂದು ಆರೋಪಿಸಿ ನೀಡಿದ ಹೇಳಿಕೆಯು ದುರುದ್ದೇಶಪೂರಿತವಾಗಿದೆ ಎಂದು ಆರೋಪಿಸಲಾಗಿದೆ. ವೆಂಕಪ್ಪ ಕೋಟ್ಯಾನ್ ಅವರು ತಮ್ಮ ದೂರಿನಲ್ಲಿ, 'ಸೌಜನ್ಯಳಿಗೆ ನ್ಯಾಯ ಒದಗಿಸುವ ಹೋರಾಟದ ದಾರಿಯನ್ನು ತಪ್ಪಿಸುವ ಉದ್ದೇಶವನ್ನು ಸ್ನೇಹಮಯಿ ಕೃಷ್ಣ ಹೊಂದಿದ್ದಾರೆ. ಮೈಸೂರಿನಿಂದ ಕರೆಯಿಸಿ ಈ ರೀತಿಯ ಸ್ಫೋಟಕ ಹೇಳಿಕೆ ನೀಡಿರುವ ಹಿಂದೆ ಯಾರು ಇದ್ದಾರೆ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸಬೇಕು' ಎಂದು ಒತ್ತಾಯಿಸಿದ್ದಾರೆ. ಅಲ್ಲದೆ, ಸ್ನೇಹಮಯಿ ಕೃಷ್ಣ ಅವರನ್ನು ತಕ್ಷಣ ವಿಚಾರಣೆಗೆ ತೆಗೆದುಕೊಳ್ಳುವಂತೆಯೂ ದೂರು ಪತ್ರದಲ್ಲಿ ಕೋರಲಾಗಿದೆ.
ಸ್ನೇಹಮಯಿ ಕೃಷ್ಣ ಆರೋಪವೇನು?
2012ರಲ್ಲಿ ಧರ್ಮಸ್ಥಳದಲ್ಲಿ ಪಿಯು ವಿದ್ಯಾರ್ಥಿನಿ ಸೌಜನ್ಯನ ಮೇಲೆ ಅತ್ಯಾ೧ಚಾರ ನಡೆಸಿ ಕೊಲೆ ಮಾಡಲಾಯಿತು ಎಂದು ಆರೋಪವಿದ್ದ ಈ ಪ್ರಕರಣವು ಇಂದಿಗೂ ಕೋರ್ಟ್‌ಗಳಲ್ಲಿ ಮತ್ತು ಸಾರ್ವಜನಿಕರಲ್ಲಿ ಚರ್ಚೆಯಲ್ಲಿದೆ. ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಇತ್ತೀಚೆಗೆ (ಸೆಪ್ಟೆಂಬರ್ 8, 2025) ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಮಹಾನಿರೀಕ್ಷಕ (ಎಸ್‌ಪಿ) ಅವರಿಗೆ ದೂರು ಸಲ್ಲಿಸಿ, ಸೌಜನ್ಯನ ಮಾವ ವಿಠಲ ಗೌಡ ಅವರೇ ಈ ಕೊಲೆಯನ್ನು ಮಾಡಿರಬಹುದು. ಅವರ ಮೇಲೆ ನಾರ್ಕೊ ಟೆಸ್ಟ್ ನಡೆಸಿ ಮರು ತನಿಖೆ ಮಾಡಬೇಕು ಎಂದು ಗಂಭೀರ ಆರೋಪ ಮಾಡಿದ್ದರು. ಇದೀಗ ಅವರ ಆರೋಪಗಳ ವಿರುದ್ಧ ವೆಂಕಪ್ಪ ಕೋಟ್ಯಾನ್ ಅವರ ದೂರು ಸಲ್ಲಿಸಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ