ಸೌಜನ್ಯಾ ಕೇಸ್‌: ಬೆಳ್ತಂಗಡಿಯ ಕಾಲ್ನಡಿಗೆ ಮೂಲಕ ಇಂದು ಬೆಂಗಳೂರಿಗೆ ಕೆಆರ್‌ಎಸ್ ಪಾರ್ಟಿ

By Kannadaprabha News  |  First Published Sep 7, 2023, 5:57 AM IST

ಧರ್ಮಸ್ಥಳದ ಸೌಜನ್ಯಾ ಹತ್ಯೆ ಪ್ರಕರಣವನ್ನು ಮರು ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ಆ.25ರಂದು ಬೆಳ್ತಂಗಡಿಯಿಂದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ನೇತೃತ್ವದಲ್ಲಿ ಆರಂಭವಾಗಿದ್ದ ಪಾದಯಾತ್ರೆ ಸೆ.8ರಂದು ಮಧ್ಯಾಹ್ನ 12 ಗಂಟೆಗೆ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮುಕ್ತಾಯವಾಗಲಿದೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಮಂಜುನಾಥ್‌ ತಿಳಿಸಿದರು.


ಬೆಂಗಳೂರು (ಸೆ.7) : ಧರ್ಮಸ್ಥಳದ ಸೌಜನ್ಯಾ ಹತ್ಯೆ ಪ್ರಕರಣವನ್ನು ಮರು ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ಆ.25ರಂದು ಬೆಳ್ತಂಗಡಿಯಿಂದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ನೇತೃತ್ವದಲ್ಲಿ ಆರಂಭವಾಗಿದ್ದ ಪಾದಯಾತ್ರೆ ಸೆ.8ರಂದು ಮಧ್ಯಾಹ್ನ 12 ಗಂಟೆಗೆ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮುಕ್ತಾಯವಾಗಲಿದೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಮಂಜುನಾಥ್‌ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೌಜನ್ಯಾ ಹತ್ಯೆ ಪ್ರಕರಣ(Dharmasthal soujanya murder case)ವನ್ನು ಮರು ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ಬೆಳ್ತಂಗಡಿಯಿಂದ ಆ.26ರಂದು ಪಾದಯಾತ್ರೆ ಆರಂಭಿಸಿದ್ದು ಪಕ್ಷದ ನೂರಾರು ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದಾರೆ. ಯಾತ್ರೆಯು ಗುರುವಾರ ನಗರ ಪ್ರವೇಶಿಸಲಿದ್ದು, ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಸ್ವಾತಂತ್ರ್ಯ ಉದ್ಯಾನವನ ತಲುಪಿ ಮುಕ್ತಾಯವಾಗಲಿದೆ. ಅಂದು ಪಾದಯಾತ್ರೆಯಲ್ಲಿ ಸೌಜನ್ಯಾ ಅವರ ತಾಯಿಯವರೂ ಸಹ ಸ್ವಲ್ಪ ದೂರ ನಮ್ಮ ಜೊತೆ ಹೆಜ್ಜೆ ಹಾಕಲಿದ್ದಾರೆ ಎಂದರು.

Tap to resize

Latest Videos

ಸೌಜನ್ಯ ಪರ ಹೋರಾಟಕ್ಕೆ ಸಜ್ಜಾದ ಕೆಆರ್‌ಎಸ್ ಪಕ್ಷ: 26ರಂದು ಬೆಳ್ತಂಗಡಿ-ಬೆಂಗಳೂರು ಪಾದಯಾತ್ರೆ

ಸೌಜನ್ಯಾ ಹತ್ಯೆ ಪ್ರಕರಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ರಾಜ್ಯ ಸರ್ಕಾರವು ಮರು ತನಿಖೆ ನಡೆಸಲು ಕ್ರಮ ಕೈಗೊಳ್ಳಬೇಕು. ವಿಶೇಷ ತನಿಖಾ ತಂಡ ರಚಿಸಿ ತನಿಖೆ ನಡೆಸಬೇಕು. ಈಗಾಗಲೇ ತನಿಖೆ ನಡೆಸಿರುವ ತನಿಖಾಧಿಕಾರಿಗಳನ್ನೂ ತನಿಖೆಗೆ ಒಳಪಡಿಸಬೇಕು. ರಾಜ್ಯದಲ್ಲಿ ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಶೀಘ್ರ ವಿಲೇವಾರಿಗೆ ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಬೇಕು ಎಂದು ಆಗ್ರಹಿಸಿದರು.

click me!