ಶಕ್ತಿ ಯೋಜನೆಗೆ ವೀರೇಂದ್ರ ಹೆಗ್ಗಡೆ ಭಾರಿ ಮೆಚ್ಚುಗೆ: ಧರ್ಮಸ್ಥಳಕ್ಕೆ ಸಿದ್ದರಾಮಯ್ಯಗೆ ಆಹ್ವಾನ

Published : Jul 13, 2023, 09:03 PM ISTUpdated : Jul 13, 2023, 09:39 PM IST
ಶಕ್ತಿ ಯೋಜನೆಗೆ ವೀರೇಂದ್ರ ಹೆಗ್ಗಡೆ ಭಾರಿ ಮೆಚ್ಚುಗೆ: ಧರ್ಮಸ್ಥಳಕ್ಕೆ ಸಿದ್ದರಾಮಯ್ಯಗೆ ಆಹ್ವಾನ

ಸಾರಾಂಶ

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು 'ಶಕ್ತಿ ಯೋಜನೆ' ಜಾರಿಗೊಳಿಸಿದ ಸರ್ಕಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರನ್ನು ಮಂಜುನಾಥ ಸ್ವಾಮಿ ದರ್ಶನಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ.

ಬೆಂಗಳೂರು (ಜು.13): ರಾಜ್ಯದ ಮಹಿಳೆಯರಿಗೆ 'ಶಕ್ತಿ ಯೋಜನೆ' ಜಾರಿಗೊಳಿಸಿದ ಸರ್ಕಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿ, ಧರ್ಮಸ್ಥಳದ ಮಂಜುನಾಥ ಸ್ವಾಮಿ ದರ್ಶನಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಮೊದಲ ಗ್ಯಾರಂಟಿಯಾಗಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಜಾರಿಗೊಳಿಸಲಾದ 'ಶಕ್ತಿ ಯೋಜನೆ' ಯಿಂದ ಧರ್ಮಸ್ಥಳಕ್ಕೆ ಬರುವ ಮಹಿಳೆಯ ಪ್ರಮಾಣ ಹೆಚ್ಚಾಗಿದೆ. ಮಂಜುನಾಥ ಸ್ವಾಮಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರಿನಲ್ಲಿ ಕಾಣಿಕೆ ಹಾಕುತ್ತಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ಅವಕಾಶ ಇದ್ದಾಗ ಧರ್ಮಸ್ಥಳಕ್ಕೆ ಬಂದು ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ಹೋಗಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಂಸದ ಹಾಗೂ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಆಹ್ವಾನ ನೀಡಿದ್ದಾರೆ.

ತಿಂಗಳು ಪೂರೈಸಿದ ಶಕ್ತಿ ಯೋಜನೆ: ಸರ್ಕಾರಿ ಬಸ್‌ಗಳಲ್ಲಿ 16.75 ಕೋಟಿ ಮಹಿಳೆಯರ ಉಚಿತ ಪ್ರಯಾಣ

ಮಹಿಳಾ ಭಕ್ತರಿಂದ ಸಂತಸ ವ್ಯಕ್ತ: ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ವೀರೇಂದ್ರ ಹೆಗ್ಗಡೆರಿಂದ ಸಿಎಂ  ಸಿದ್ದರಾಮಯ್ಯಗೆ ಮೆಚ್ಚುಗೆ ಪತ್ರ ಬರೆದಿದ್ದಾರೆ. ಗ್ಯಾರಂಟಿ ಯೋಜನೆಗಳ ಮೂಲಕ ಉಪಯುಕ್ತ ಕಾರ್ಯಕ್ರಮಗಳನ್ನ ನೀಡುತ್ತಿದ್ದೀರ. ಧರ್ಮಸ್ಥಳಕ್ಕೆ ಬರುತ್ತಿರುವ ಮಹಿಳಾ ಭಕ್ತರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಅನೇಕ ಮಹಿಳೆಯರು ನಿಮ್ಮ ಹೆಸರಿನಲ್ಲಿ ಶ್ರೀಮಂಜುನಾಥ್ ಸ್ವಾಮಿಗೆ ಸೇವೆ ಮತ್ತು ಕಾಣಿಕೆ ಸಲ್ಲಿಸುತ್ತಿದ್ದಾರೆ. ಬಜೆಟ್ ನಲ್ಲಿ ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿದ್ದಕ್ಕೆ ಅಭಿನಂದನೆಗಳ ಎಂದು ತಿಳಿಸಿದ್ದಾರೆ.

ತಿಂಗಳು ಪೂರೈಸಿದ ಶಕ್ತಿ ಯೋಜನೆ: 16 ಕೋಟಿ ಮಹಿಳೆಯರ ಸಂಚಾರ: ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜೂ.11 ರಿಂದ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆಯನ್ನು ಜಾರಿಗೊಳಿಸಿದೆ. ಇನ್ನು ಜೂ.11ರಿಂದ ಜುಲೈ 10ರವರೆಗೆ ಅಂದರೆ ಒಂದು ತಿಂಗಳ ಅವಧಿಯಲ್ಲಿ ಬರೋಬ್ಬರಿ 16,75,77,752 ಮಹಿಳಾ ಪ್ರಯಾಣಿಕರು (16.75 ಕೋಟಿ) ಸಂಚಾರ ಮಾಡಿದ್ದಾರೆ. ಈ ಯೋಜನೆಗೆ ಮಹಿಳೆಯರಿಂದ ಅಭೂತಪೂರ್ವ ಬೆಂಬಲವೂ ವ್ಯಕ್ತವಾಗಿದೆ.

ಸರ್ಕಾರಕ್ಕೆ 399 ಕೋಟಿ ರೂ. ವೆಚ್ಚ: ಕರ್ನಾಟಕ ವಿಧಾನಸಭಾ ಚುನಾವನೆಯಲ್ಲಿ 5 ಪ್ರಮುಖ ಗ್ಯಾರಂಟಿಗಳನ್ನು ಘೋಷಣೆ ಮಾಡಿದ ಕಾಂಗ್ರೆಸ್‌ ಪಕ್ಷ ರಾಜ್ಯದಲ್ಲಿ ಬಹುತಮದ ಸರ್ಕಾರವಾಗಿ ಅಧಿಕಾರಕ್ಕೆ ಬಂದಿದೆ. ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಕಾಂಗ್ರೆಸ್‌ ಸರ್ಕಾರದ ಮೊದಲನೇ ಗ್ಯಾರಂಟಿಯಾಗಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆಯನ್ನು ಜಾರಿಗೊಳಿಸಿದೆ. ಜುಲೈ 11 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಗಿದ್ದು, ಜುಲೈ 10ಕ್ಕೆ ಒಂದು ತಿಂಗಳು ಪೂರ್ಣಗೊಂಡಿದೆ. ಇನ್ನು ಮಹಿಳೆಯರ ಪ್ರಯಾಣದ ವೆಚ್ಚ 399 ಕೋಟಿ ರೂಪಾಯಿ ಆಗಿದೆ ಸರ್ಕಾರ ಮಾಹಿತಿ ನೀಡಿದೆ.

ಯಕ್ಷಗಾನ ತರಬೇತಿ ಪಡೆದ ಮಂಗಳಮುಖಿಯರು: ಭಿಕ್ಷಾಟನೆ ಬಿಟ್ಟು ಕಲಾವಿದರಾಗಿ ಮಾರ್ಪಾಡು

  • ಜೂನ್‌11 ರಿಂದ ಜುಲೈ 10ವರೆಗೆ ಸಂಚಾರ ಮಾಡಿದ ಪ್ರಯಾಣಿಕರ ವಿವರ:
  • ಒಟ್ಟು ಪ್ರಯಾಣಿಕರು = 32,88,60,741
  • ಮಹಿಳಾ ಪ್ರಯಾಣಿಕರು= 16,75,77,752
  • ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್‌ ವೆಚ್ಚ: 399,28,53,933 ರೂ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ