ಧರ್ಮಸ್ಥಳ ಅಸಹಜ ಸಾವು ಪ್ರಕರಣ: ಸೌಜನ್ಯ ತಾಯಿ ಪಿಐಎಲ್, ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

Kannadaprabha News   | Kannada Prabha
Published : Mar 19, 2026, 07:42 AM IST
Karnataka High Court

ಸಾರಾಂಶ

ಧರ್ಮಸ್ಥಳದಲ್ಲಿ 1990 ರಿಂದ 2021ರ ನಡುವೆ ನಡೆದಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌, ಪ್ರಕರಣಗಳಿಗೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಬೆಂಗಳೂರು (ಮಾ.19): ಧರ್ಮಸ್ಥಳ ಗ್ರಾಮದಲ್ಲಿ 1990 ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ ನಿರ್ದೇಶಿಸಿದೆ.

ಧರ್ಮಸ್ಥಳದಲ್ಲಿ 2012ರಲ್ಲಿ ಸಾಮೂಹಿಕ ಅತ್ಯಾ೧ಚಾರಕ್ಕೀಡಾಗಿ ಕೊಲೆಯಾದ ವಿದ್ಯಾರ್ಥಿನಿ ಸೌಜನ್ಯಾ ತಾಯಿ ಕುಸುಮವತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ, ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಸರ್ಕಾರದ ಪರ ಹಾಜರಾದ ರಾಜ್ಯ ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ್‌ ಶೆಟ್ಟಿ, ಅರ್ಜಿದಾರರು ಪ್ರಸ್ತಾಪಿಸಿರುವ ಪ್ರಕರಣಗಳು 2002ರಲ್ಲಿ ನಡೆದಿವೆ. 74 ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲಾಗಿದೆ. ಅಸ್ವಾಭಾವಿಕ ಸಾವು ಪ್ರಕರಣ (ಯುಡಿಆರ್‌) ದಾಖಲಿಸಲಾಗಿದೆ. ಸದ್ಯ ರಚಿಸಲಾಗಿರುವ ವಿಶೇಷ ತನಿಖಾ ದಳಕ್ಕೆ ಪ್ರಕರಣಗಳನ್ನು ವರ್ಗಾಯಿಸುವಂತಹದ್ದು ಏನಿಲ್ಲ ಎಂದು ತಿಳಿಸಿದರು.

ಅಲ್ಲದೆ, ಯುಡಿಆರ್‌ಗಳಿಗೆ ಸಂಬಂಧಿಸಿದಂತೆ ಯಾವುದಾದರೂ ದಾಖಲೆ ಸಲ್ಲಿಸಿದರೆ ಅಥವಾ ದೂರು ದಾಖಲಿಸಿದರೆ, ಅದನ್ನು ತನಿಖೆಗೆ ಒಳಪಡಿಸಲಾಗುವುದು. ಅರ್ಜಿದಾರೆಯ ಸಹೋದರನನ್ನು ಧರ್ಮಸ್ಥಳ ಸಾಮೂಹಿಕ ದಹನ ಪ್ರಕರಣದಲ್ಲಿ ತನಿಖೆಗೆ ಒಳಪಡಿಸಲಾಗಿತ್ತು. ಇದರ ಸಂಬಂಧಿತ ಎಲ್ಲ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಇಡಲಾಗುವುದು. 2002ರ ಮೇ.6ರಂದು ಸಿಕ್ಕಿದ್ದ ಬಾಲಕಿಯ ಶವಕ್ಕೆ ಸಂಬಂಧಿಸಿದಂತೆ ಯುಡಿಆರ್‌ ದಾಖಲಿಸಿ, ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಶವ ಸಂಸ್ಕಾರ ನಡೆಸಿರುವುದು, ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿರುವುದು, ಅಂತಿಮ ವರದಿ, ವೈದ್ಯರ ಅಭಿಪ್ರಾಯ ಎಲ್ಲವೂ ಇದೆ ಎಂದು ಅಡ್ವೋಕೇಟ್‌ ಜನರಲ್‌ ವಿವರಿಸಿದರು.

ಅರ್ಜಿದಾರರ ಪರ ವಕೀಲ ಎಸ್‌.ಬಾಲನ್‌, ನ್ಯಾಯಾಲಯದ ಮುಂದೆ ಅಸಹಜವಾಗಿ ಸಾವನ್ನಪ್ಪಿದವರ ಪಟ್ಟಿ ಇಡಲಾಗಿದೆ. ಅಸಹಜವಾಗಿ ಸಾವನ್ನಪ್ಪಿದವರ 74 ಪ್ರಕರಣಗಳಲ್ಲಿ ಪಂಚನಾಮೆ ಪ್ರಕ್ರಿಯೆ ನಡೆಸಲಾಗಿಲ್ಲ. ಶವಗಳ ಮರಣೋತ್ತರ ಪರೀಕ್ಷೆ ನಡೆಸಿಲ್ಲ. ಪ್ರಕ್ರಿಯೆ ಪಾಲಿಸದೇ ಶವಗಳ ಸಂಸ್ಕಾರ ಮಾಡಲಾಗಿದೆ. ಶವಗಳ ಸಂಸ್ಕಾರಕ್ಕೆ ಸಂಬಂಧಿಸಿದಂತೆ ಪಂಚಾಯಿತಿಗೆ ಪೊಲೀಸರು ಶಿಫಾರಸ್ಸು ಮಾಡಿದ್ದಾರೆ. ಶವ ಸಂಸ್ಕಾರ ಮಾಡಿದ್ದಾರೆಯೇ, ಸುಟ್ಟಿದ್ದಾರೆಯೇ ಎಂಬುದರ ಮಾಹಿತಿ ಇಲ್ಲ. ಹಲವು ಪ್ರಕರಣಗಳಲ್ಲಿ ಮಹಿಳೆಯರು ಲಾಡ್ಜ್‌ನಲ್ಲಿ ಉಳಿದುಕೊಂಡು ನಾಪತ್ತೆಯಾಗಿದ್ದಾರೆ. ಆದರೆ, ಈ ಪ್ರಕರಣದಲ್ಲಿ ತನಿಖೆ ನಡೆಸಲಾಗಿಲ್ಲ. ಯಾವುದೇ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆದಿಲ್ಲ. 74 ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆಸಬೇಕು. ಈ ಕುರಿತು ಸರ್ಕಾರಕ್ಕೆ ಆದೇಶಿಸಬೇಕು ಎಂಬುದು ನಮ್ಮ ಮನವಿಯಾಗಿದೆ ಎಂದು ತಿಳಿಸಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ, 74 ಪ್ರಕರಣಗಳಿಗೆ ಸಂಬಂಧಿಸಿದಂತೆ ನಡೆಸಿರುವ ತನಿಖೆಯ ವರದಿ ಸಲ್ಲಿಸಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆಯನ್ನು ಜು.7ಕ್ಕೆ ಮುಂದೂಡಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮುಡಾ ತನಿಖೆಗೆ ರಾಜ್ಯಪಾಲ ಅಸ್ತು ವಿರುದ್ಧ ಸಿದ್ದರಾಮಯ್ಯರ ಮೇಲ್ಮನವಿ ಅರ್ಜಿ ವಿಚಾರಣೆ 10ನೇ ಬಾರಿಗೆ ಮುಂದೂಡಿಕೆ!
ರಾಜ್ಯದ 15 ಜಿಲ್ಲೆಗಳಲ್ಲಿ ಅಕಾಲಿಕ ಮಳೆ : ಮಾರ್ಚ್ 25 ರವರೆಗೆ ಅಬ್ಬರಿಸಲಿದೆ