ಧರ್ಮಸ್ಥಳ ಗ್ರಾಮ : ಇಂದು ರಾಡಾರ್‌ ಬಳಸಿ ಶೋಧ

Kannadaprabha News   | Kannada Prabha
Published : Aug 12, 2025, 07:36 AM IST
Dharmasthala Drone GPR Found

ಸಾರಾಂಶ

ಧರ್ಮಸ್ಥಳ ಗ್ರಾಮದಲ್ಲಿ ಅನಾಮಿಕ ಸಾಕ್ಷಿದಾರ ಗುರುತಿಸಿರುವ 13ನೇ ಪಾಯಿಂಟ್‌ನಲ್ಲಿ ಸೋಮವಾರ ದೆಹಲಿಯಿಂದ ಆಗಮಿಸಿದ ಡ್ರೋನ್ ಮೌಂಟೆಡ್ ಜಿಪಿಆರ್ (ಗ್ರೌಂಡ್‌ ಪೆನೆಟ್ರೇಟೆಡ್‌ ರಾಡಾರ್‌) ಮೂಲಕ ಪ್ರಾಯೋಗಿಕ ಕಾರ್ಯಾಚರಣೆ ನಡೆಸಲಾಯಿತು.

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಅನಾಮಿಕ ಸಾಕ್ಷಿದಾರ ಗುರುತಿಸಿರುವ 13ನೇ ಪಾಯಿಂಟ್‌ನಲ್ಲಿ ಸೋಮವಾರ ದೆಹಲಿಯಿಂದ ಆಗಮಿಸಿದ ಡ್ರೋನ್ ಮೌಂಟೆಡ್ ಜಿಪಿಆರ್ (ಗ್ರೌಂಡ್‌ ಪೆನೆಟ್ರೇಟೆಡ್‌ ರಾಡಾರ್‌) ಮೂಲಕ ಪ್ರಾಯೋಗಿಕ ಕಾರ್ಯಾಚರಣೆ ನಡೆಸಲಾಯಿತು. ಕ್ಲಿಷ್ಟಕರವಾದ 13ನೇ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಕಳೆದ ಕೆಲವು ದಿನಗಳಿಂದ ಮುಂದೂಡಲ್ಪಡುತ್ತಿದ್ದು, ಮಂಗಳವಾರ ಅಧಿಕೃತವಾಗಿ ಆರಂಭಗೊಳ್ಳುವ ನಿರೀಕ್ಷೆ ಇದೆ.

ನೇತ್ರಾವತಿ-ಅಜೆಕುರಿ ರಸ್ತೆಯಲ್ಲಿ ನೇತ್ರಾವತಿ ನದಿ ಪಕ್ಕದ ಕಿಂಡಿ ಅಣೆಕಟ್ಟಿನ ಸಮೀಪದ 13ನೇ ಪಾಯಿಂಟ್‌ನಲ್ಲಿ ಸೋಮವಾರ ಮಧ್ಯಾಹ್ನ 3 ರಿಂದ 3.30ರ ವರೆಗೆ ಜಿಪಿಆರ್ ಹಾರಾಟ ನಡೆಸಿ, ಪ್ರಾಯೋಗಿಕ ಕಾರ್ಯಾಚರಣೆ ನಡೆಸಿತು. ಬಳಿಕ, ಪೌರ ಕಾರ್ಮಿಕರು ಸುಮಾರು 60 ಅಡಿ ಉದ್ದ, 30 ಅಗಲದ ಈ ಜಾಗದಲ್ಲಿ ಬೆಳೆದಿದ್ದ ಗಿಡ-ಗಂಟಿಗಳನ್ನು ತೆರವುಗೊಳಿಸಿದರು. ಸ್ಥಳದಲ್ಲಿರುವ ವಿದ್ಯುತ್ ಲೈನ್‌ಗೆ ಸಂಬಂಧಿಸಿದ ಕಾಮಗಾರಿಯನ್ನು ಮೆಸ್ಕಾಂ ಸಿಬ್ಬಂದಿ ನಡೆಸಿದರು.

ಇಲ್ಲಿನ ಸ್ಥಳ ಸ್ವಚ್ಛತೆ ಮಾಡಿರುವುದರಿಂದ ಇಲ್ಲಿ ಮಂಗಳವಾರ ಅಧಿಕೃತ ಕಾರ್ಯಾಚರಣೆ ಮುಂದುವರಿಯುವ ಸೂಚನೆ ಸಿಕ್ಕಿದೆ. ಪ್ರಾಯೋಗಿಕ ಕಾರ್ಯಾಚರಣೆಗಳ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ ಇದ್ದು, ನೇತ್ರಾವತಿ-ಅಜೆಕುರಿ ರಸ್ತೆಯಲ್ಲಿ ಜನ, ವಾಹನ ಸಂಚಾರ ನಿಷೇಧಿಸಲಾಗಿತ್ತು. ಕಾರ್ಯಾಚರಣೆ ವೇಳೆ ದೂರುದಾರ ಹಾಜರಿರಲಿಲ್ಲ. ಆತ ಎಸ್ಐಟಿ ಕಚೇರಿಯಲ್ಲಿ ಇದ್ದನೆಂದು ಹೇಳಲಾಗಿದೆ. ಈ ಮಧ್ಯೆ, ಸೋಮವಾರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದವರು ಎಸ್ಐಟಿ ಠಾಣೆಗೆ ಭೇಟಿ ನೀಡಿದ್ದು, ಪ್ರಕರಣ ಕುರಿತು ಮಾಹಿತಿ ಕೋರಿದರು ಎಂದು ತಿಳಿದು ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌