ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ ವೀರೇಂದ್ರ ಹೆಗ್ಗಡೆ ಪಟ್ಟಾಭಿಷೇಕ 58ನೇ ವರ್ಧಂತಿ

Published : Oct 22, 2025, 01:28 PM IST
Veerendra Heggades 58th Coronation Anniversary on Oct 24

ಸಾರಾಂಶ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 58ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವವು ಅಕ್ಟೋಬರ್ 24 ರಂದು ನಡೆಯಲಿದೆ. ಈ ಸಂದರ್ಭದಲ್ಲಿ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಡಾ. ಹೆಗ್ಗಡೆಯವರು ಹೊಸ ಯೋಜನೆಗಳನ್ನು ಪ್ರಕಟಿಸಲಿದ್ದಾರೆ.

ಬೆಳ್ತಂಗಡಿ (ಅ.22): ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಪಟ್ಟಾಭಿಷೇಕದ ೫೮ನೇ ವರ್ಧಂತ್ಯುತ್ಸವ ೨೪ರಂದು ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರಿಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ.

ಅಂದು ಭಗವಾನ್ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯಲಿವೆ. ಊರಿನ ನಾಗರಿಕರು, ಭಕ್ತರು ಹಾಗೂ ಅಭಿಮಾನಿಗಳು ಪೂಜ್ಯ ಹೆಗ್ಗಡೆ ಅವರಿಗೆ ಶ್ರದ್ಧಾ-ಭಕ್ತಿಯಿಂದ ಗೌರವಾರ್ಪಣೆ ಮಾಡುವರು.

ಸಭಾ ಕಾರ್ಯಕ್ರಮ:

ಅಪರಾಹ್ನ ನಾಲ್ಕು ಗಂಟೆಯಿಂದ ನಡೆಯುವ ಸಮಾರಂಭದಲ್ಲಿ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಶಾಸಕರಾದ ಹರೀಶ್ ಪೂಂಜ, ಕೆ. ಪ್ರತಾಪಸಿಂಹ ನಾಯಕ್ ಮತ್ತು ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಶುಭಾಶಂಸನೆ ಮಾಡುವರು. ಈ ಸಂದರ್ಭ ಕ್ಷೇತ್ರದ ಹಿರಿಯ ನೌಕರರ ಸನ್ಮಾನ ನಡೆಯಲಿದೆ. ಧರ್ಮಾಧಿಕಾರಿ ಡಾ. ಹೆಗ್ಗಡೆ ಅವರು ಹೊಸ ಯೋಜನೆಗಳನ್ನು ಪ್ರಕಟಿಸುವರು.1968 ರ .24 ರಂದು ಧರ್ಮಸ್ಥಳದ 21ನೇ ಧರ್ಮಾಧಿಕಾರಿಯಾಗಿ ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾದ ಹೆಗ್ಗಡೆ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ರುಡ್‌ಸೆಟ್ ಸಂಸ್ಥೆಗಳು, ಕೆರೆಗಳಿಗೆ ಕಾಯಕಲ್ಪ, ಉಚಿತ ಸಾಮೂಹಿಕ ವಿವಾಹ ಸಮಾರಂಭ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಹಾಗೂ ಆಯುರ್ವೇದಕ್ಕೆ ಪ್ರೋತ್ಸಾಹ, ಶ್ರದ್ಧಾಕೇಂದ್ರಗಳ ಸ್ವಚ್ಛತಾ ಅಭಿಯಾನ, ರುದ್ರಭೂಮಿ ಮೊದಲಾದ ವಿನೂತನ ಕಾರ್ಯಕ್ರಮಗಳ ಯಶಸ್ವಿ ಅನುಷ್ಠಾನದ ಮೂಲಕ ಉನ್ನತ ಸೇವೆ-ಸಾಧನೆ ಮಾಡಿ ಎಲ್ಲರ ಪ್ರೀತಿ-ವಿಶ್ವಾಸ ಮತ್ತು ಗೌರವಕ್ಕೆ ಪಾತ್ರರಾಗಿದ್ದಾರೆ.

ಹಬ್ಬದ ವಾತಾವರಣ:

ದೀಪಾವಳಿ ಹಬ್ಬದ ಜೊತೆಗೆ ಧರ್ಮಸ್ಥಳದಲ್ಲಿ ಪಟ್ಟಾಭಿಷೇಕದ ವರ್ಧಂತ್ಯುತ್ಸವದ ಅಂಗವಾಗಿ ಎಲ್ಲೆಲ್ಲೂ ಸಂಭ್ರಮ- ಸಡಗರದ ವಾತಾವರಣವಿದೆ. ಬಸದಿ, ದೇವಸ್ಥಾನ, ಬೀಡು (ಹೆಗ್ಗಡೆಯವರ ನಿವಾಸ) ಅನ್ನಪೂರ್ಣ ಹಾಗೂ ವಸತಿಛತ್ರಗಳನ್ನು ಆಕರ್ಷಕ ವಿನ್ಯಾಸದ ವಿದ್ಯುದ್ದೀಪಗಳು ಮತ್ತು ಪ್ರಾಕೃತಿಕ ಪರಿಕರಗಳಿಂದ ಅಲಂಕರಿಸಿದ್ದು, ಕಣ್ಮನ ಸೆಳೆಯುತ್ತಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್
ರೈತನಿಗೆ ಪರಿಹಾರ ನೀಡದ ಶಿವಮೊಗ್ಗ ಡಿಸಿ ಕಚೇರಿ, ಕಾರು ಜಪ್ತಿಗೆ ಕೋರ್ಟ್ ಆದೇಶ! ಏನಿದು ಪ್ರಕರಣ?