Vinay Kulkarni: ಯೋಗೇಶ್‌ ಗೌಡ ಹತ್ಯೆ ಕೇಸ್‌; ಇಂದು ವಿನಯ್‌ ಕುಲಕರ್ಣಿ ಬಗ್ಗೆ ತೀರ್ಪು ಪ್ರಕಟ

Kannadaprabha News   | Kannada Prabha
Published : Apr 15, 2026, 05:48 AM IST
Dharwad Yogesh Gowda Murder Case Special Court to Pronounce Verdict on Vinay Kulkarni Today

ಸಾರಾಂಶ

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕಟಿಸಲಿದೆ. ಈ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 21 ಮಂದಿ ಆರೋಪಿಗಳಾಗಿದ್ದು, ಸಿಬಿಐ ತನಿಖೆಯ ಪ್ರಕಾರ ಇದು ರಾಜಕೀಯ ಪ್ರೇರಿತ ಕೊಲೆಯಾಗಿದೆ.

 ಬೆಂಗಳೂರು (ಏ.15): ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ಅಂತಿಮ ತೀರ್ಪು ಪ್ರಕಟಿಸಲಿದೆ. ಪ್ರಕರಣದಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 21 ಮಂದಿ ಆರೋಪಿಗಳ ಭವಿಷ್ಯ ನಿರ್ಧಾರವಾಗಲಿದೆ.

ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಾಲಯ ಏ.9ರಂದು ತೀರ್ಪು ಪ್ರಕಟಿಸುವುದಾಗಿ ತಿಳಿಸಿತ್ತು. ತಾಂತ್ರಿಕ ಕಾರಣಗಳು ಹಾಗೂ ತೀರ್ಪು ಸಿದ್ಧಪಡಿಸುವ ಪ್ರಕ್ರಿಯೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಏ.15ಕ್ಕೆ ಮೂಂದೂಡಿತ್ತು. ಇದೀಗ ನ್ಯಾಯಾಯಲಯವು ತೀರ್ಪು ಪ್ರಕಟಿಸುವುದರಿಂದ ಆರೋಪಿಗಳಲ್ಲಿ ಆತಂಕ ಶುರುವಾಗಿದೆ.

ಪ್ರಕರಣದ ಹಿನ್ನೆಲೆ:

ಧಾರವಾಡದ ಜಿಪಂ ಮಾಜಿ ಸದಸ್ಯ ಯೋಗೇಶ್‌ ಗೌಡ ಅವರನ್ನು 2016ರ ಜೂ.15ರಂದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆಗೈ: ದಿದ್ದರು. ಈ ಸಂಬಂಧ ಧಾರವಾಡದ ಉಪನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಆರು ಜನರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಕೊಲೆಯಾದ ಯೋಗೇಶ್‌ ಗೌಡ ಕುಟುಂಬದ ಸದಸ್ಯರ ಒತ್ತಾಯದ ಮೇರೆಗೆ 2019ರಲ್ಲಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಸಿಬಿಐ ತನಿಖೆಯಲ್ಲಿ ಇದು ರಾಜಕೀಯ ಪ್ರೇರಿತ ಕೊಲೆ ಎಂಬುದು ತಿಳಿದು ಬಂದಿತ್ತು. ಈ ಕೊಲೆಯಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಕೈವಾಡವಿರುವ ಶಂಕೆ ಹಿನ್ನೆಲೆಯಲ್ಲಿ 2020ರ ನ.5ರಂದು ಸಿಬಿಐ ಅಧಿಕಾರಿಗಳು ವಿನಯ್‌ ಕುಲಕರ್ಣಿ ಅವರನ್ನು ಬಂಧಿಸಿದ್ದರು. ಈ ಪ್ರಕರಣದಲ್ಲಿ ವಿನಯ್‌ ಸೇರಿ ಒಟ್ಟು 21 ಮಂದಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿದ್ದರು. ಇತ್ತೀಚೆಗಷ್ಟೇ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದು ಬಿಡುಗಡೆಯಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

PM Modi to visit Karnataka: ಆದಿಚುಂಚನಗಿರಿಗೆ ಇಂದು ಮೋದಿ: ಭೈರವೈಕ್ಯ ಮಂದಿರ ಲೋಕಾರ್ಪಣೆ
ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗೆ 'ಭಾರತ ರತ್ನ' ಕೊಡಿ: ಪ್ರಧಾನಿ ಮೋದಿಗೆ ಶಿಫಾರಸಿಗಾಗಿ ಸರ್ಕಾರಕ್ಕೆ ಪತ್ರ!