ಬಿಜೆಪಿ ಕಾಲದಲ್ಲಿ ರೇಪ್ ಆಗಿರಲಿಲ್ವಾ? ಪ್ರಶ್ನೆ ಮಾಡಿದ ಸಿಎಂ ಸಿದ್ದರಾಮಯ್ಯ!

Published : Jan 21, 2025, 11:48 AM IST
ಬಿಜೆಪಿ ಕಾಲದಲ್ಲಿ ರೇಪ್ ಆಗಿರಲಿಲ್ವಾ? ಪ್ರಶ್ನೆ ಮಾಡಿದ ಸಿಎಂ ಸಿದ್ದರಾಮಯ್ಯ!

ಸಾರಾಂಶ

ಬೆಂಗಳೂರಿನ ಕೆ.ಆರ್. ಮಾರ್ಕೆಟ್ ಬಳಿ ನಡೆದ ಘಟನೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ಆಡಳಿತದಲ್ಲೂ ಇಂತಹ ಘಟನೆಗಳು ನಡೆದಿವೆ ಎಂದು ಪ್ರಶ್ನಿಸಿದ್ದಾರೆ. ಸಚಿವ ಸಂತೋಷ್ ಲಾಡ್ ಕೂಡ ಘಟನೆಯನ್ನು ಖಂಡಿಸಿ ಸರ್ಕಾರ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಬೆಳಗಾವಿ (ಜ.21): ಬೆಂಗಳೂರಿನ ಹೃದಯಭಾಗವಾಗಿರುವ ಕೆಆರ್‌ ಮಾರ್ಕೆಟ್‌ ಬಳಿ ಬಸ್‌ಗಾಗಿ ಕಾಯುತ್ತಿದ್ದ ಮಹಿಳೆಯ ಮೇಲೆ ಗ್ಯಾಂಗ್‌ರೇಪ್‌ ಆಗಿರುವುದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮೇಲೆ ಪ್ರಶ್ನಾರ್ಥಕ ಚಿಹ್ನೆ ಮೂಡುವಂತೆ ಮಾಡಿದೆ. ವಿಪಕ್ಷ ಬಿಜೆಪಿ, ರಾಜ್ಯದ ಜನರು ಸರ್ಕಾರದ ಮೇಲೆ ಪ್ರಶ್ನೆ ಮಾಡುತ್ತಿರುವ ಹೊತ್ತಿನಲ್ಲಿ ಬೆಳಗಾವಿ ಸಮಾವೇಶದಲ್ಲಿ ಘಟನೆಯ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ ಕಾಲದಲ್ಲಿ ರಾಜ್ಯದಲ್ಲಿ ರೇಪ್‌ ಆಗಿರಲಿಲ್ವಾ? ಎಂದುಸ ಪ್ರಶ್ನೆ ಮಾಡಿದ್ದಾರೆ. ಬೆಂಗಳೂರಲ್ಲಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣವಾಗಿದೆ ಈ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಮಹಿಳೆಗೆ ರಕ್ಷಣೆ ಸಿಗಬೇಕು. ಹಾಗಂತ ಆ ವಿಚಾರದಲ್ಲಿ ಆರೋಪ ಸರಿಯಲ್ಲ' ಎಂದು ಹೇಳಿದ್ದಾರೆ.

ಕಾನೂನು ಸುವ್ಯವಸ್ಥೆ ಸರಿಯಿಲ್ಲ ಎಂಬ ಟೀಕೆಗೆ ಸಿಟ್ಟಾದ ಸಿಎಂ, 'ಬಿಜೆಪಿ ಕಾಲದಲ್ಲಿ ರೇಪ್ ಆಗಿರಲಿಲ್ವಾ..? ಅನಗತ್ಯ ಟೀಕೆ ಬೇಡ. ಮಹಿಳೆಗೆ ಸೂಕ್ತ ರಕ್ಷಣೆ ಸಿಗಬೇಕು. ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ' ಎಂದು ಹೇಳಿದೆ. ಬೆಳಗಾವಿ ಸಮಾವೇಶಕ್ಕೆ ರಾಹುಲ್ ಗಾಂಧಿ ಬರುತ್ತಿಲ್ಲ. ಅವರಿಗೆ ಆರೋಗ್ಯ ಸರಿಯಲ್ಲ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಡಿ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟ ವಿಚಾರದಲ್ಲಿ ಮಾತನಾಡಿದ ಕಾರ್ಮಿಕ ಸಚಿವ ಸಂತೊಷ್‌ ಲಾಡ್‌,' ಕ್ರೈಂ ಆಗಬಾರದು. ಇದನ್ನು ಖಂಡಿಸಬೇಕು. ಇದನ್ನು ತಡೆಯಲು ಇಲಾಖೆ ಇದೆ.ಕ್ರಮ ತೆಗೆದುಕೊಳ್ಳಲಿದೆ' ಎಂದು ಹೇಳಿದರು
ಈ ಥರದ ಕೃತ್ಯಗಳನ್ನ ಖಂಡಿಸಬೇಕು. ಕ್ರೈಂ ಆಗಬಾರದು ಎಂದರೂ ಆಗುತ್ತೆ. ಸರಕಾರ ಇಲಾಖೆ ತಪ್ಪಿತಸ್ಥರನ್ನ ಹಿಡಿಯಬೇಕು. ಮುಂದೆ ಈ ರೀತಿ ಕೃತ್ಯಗಳು ಆಗಬಾರದು. ತಡೆಗಟ್ಟುವ ಕೆಲಸ ಸರಕಾರ ಮಾಡುತ್ತದೆ ಎಂದರು.

ಬೆಂಗಳೂರಿನಲ್ಲಿ ಬಸ್​ಗಾಗಿ ಕಾಯುತ್ತಿದ್ದ ಮಹಿಳೆಯನ್ನ ಕರೆದೊಯ್ದು ಸಾಮೂಹಿಕ ಬಲಾತ್ಕಾರ!

 

ಬೆಳಗಾವಿಯಲ್ಲಿ ನಕಲಿ ಗಾಂಧಿಗಳ ಸಮಾವೇಶ ಎಂಬ ಬಿಜೆಪಿ ಟೀಕೆಯ ಬಗ್ಗೆ ಮಾತನಾಡಿದ ಅವರು, ಬಿಜೆಪಿ ಅವರಿಗೆ ಟೀಕೆ ಮಾಡೋದು ಬಿಟ್ಟು ಏನೂ ಬರಲ್ಲ. ಬಿಜೆಪಿ ಅವರು ಗಾಂಧಿನ‌ ಒಪ್ಪೋದಿಲ್ಲ. ಸರಕಾರದ ಕಾರ್ಯಕ್ರಮ ಟೀಕೆ ಮಾಡೋದು ಅವರಿಗೆ ಕಾಮನ್.ದೇವರು ಅವರಿಗೆ ಒಳ್ಳೆಯದು ಮಾಡಲಿ ಎಂದರು.

6 ವರ್ಷದ ಬಾಲಕಿಯ ರೇಪ್‌ & ಮರ್ಡರ್‌, ದಾರುಣ ಘಟನೆಗೆ ಸಾಕ್ಷಿಯಾದ ರಾಜಧಾನಿ!

ಸರಕಾರ ದುಡ್ಡಲ್ಲಿ ಸಮಾವೇಶ ಜೋಶಿ ಆರೋಪದ ಬಗ್ಗೆ ಮಾತನಾಡಿದ ಸಂತೋಷ್‌ ಲಾಡ್‌, '6500 ಕೋಟಿ  ಮೋದಿ ಹೆಸರಲ್ಲಿ ಜಾಹೀರಾತಿಗೆ ಖರ್ಚು ಮಾಡಿದೆ. ಖೇಲೋ ಇಂಡಿಯಾಗೆ 1500 ಕೋಟಿ ನೀಡಿದ್ದಾರೆ. ಸ್ವಂತಕ್ಕಾಗಿ ಮೋದಿ ಖರ್ಚು ಮಾಡಿದ್ದಾರೆ ಈ ಬಗ್ಗೆ ಪ್ರಲ್ಹಾದ್ ಜೋಶಿ ಕೇಳಬೇಕು' ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!