ಅರಣ್ಯ ಇಲಾಖೇಲಿ ಇನ್ನುಂದೆ ಡಿಜಿಟಲ್ ಎಫ್‌ಐಆ‌ರ್: ಸಚಿವ ಈಶ್ವ‌ರ್ ಖಂಡ್ರೆ

Published : Jan 08, 2025, 09:31 AM IST
ಅರಣ್ಯ ಇಲಾಖೇಲಿ ಇನ್ನುಂದೆ ಡಿಜಿಟಲ್ ಎಫ್‌ಐಆ‌ರ್: ಸಚಿವ ಈಶ್ವ‌ರ್ ಖಂಡ್ರೆ

ಸಾರಾಂಶ

ದಿನೇ ದಿನೇ ಅರಣ್ಯ ಅಪರಾಧಗಳು ಹೆಚ್ಚಾಗುತ್ತಿವೆ. ಅರಣ್ಯ ಅಪರಾಧಗಳನ್ನು ತಡೆಯಲು, ತಪ್ಪಿತಸ್ಥರಿಗೆ ಶಿಕ್ಷೆಯಾಗುವುದನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಅನ್‌ಲೈನ್ ಎಫ್‌ಐಆರ್ ವ್ಯವಸ್ಥೆ ಜಾರಿಗೆ ತರಲಾಗಿದೆ: ಅರಣ್ಯ ಸಚಿವ ಈಶ್ವರ್ ಖಂಡ್ರೆ 

ಬೆಂಗಳೂರು(ಜ.08):  ಆಧುನಿಕತೆಗನುಗುಣವಾಗಿ ಅರಣ್ಯ ಇಲಾಖೆ ಬದಲಾಗುತ್ತಿದ್ದು, ಅರಣ್ಯ ಒತ್ತುವರಿ, ಅಕ್ರಮ ಮರ ಕಡಿತ, ಕಳ್ಳಬೇಟೆ, ಅತಿಕ್ರಮ ಪ್ರವೇಶ ಸೇರಿ ಇತ್ಯಾದಿ ಅರಣ್ಯ ಅಪರಾಧಗಳಿಗೆ ಇನ್ನು ಮುಂದೆ 'ಗರುಡಾಕ್ಷಿ' ಅಸ್ತ ಪ್ರಯೋಗಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. 

ಮಂಗಳವಾರ ವಿಧಾನಸೌಧದಲ್ಲಿ ಡಿಜಿಟಲ್ ಎಫ್‌ಐಆರ್ ವ್ಯವಸ್ಥೆಗೆ ಚಾಲನೆ ನೀಡಿ ಮಾತನಾಡಿದ ಅವರು, ದಿನೇ ದಿನೇ ಅರಣ್ಯ ಅಪರಾಧಗಳು ಹೆಚ್ಚಾಗುತ್ತಿವೆ. ಅರಣ್ಯ ಅಪರಾಧಗಳನ್ನು ತಡೆಯಲು, ತಪ್ಪಿತಸ್ಥರಿಗೆ ಶಿಕ್ಷೆಯಾಗುವುದನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಅನ್‌ಲೈನ್ ಎಫ್‌ಐಆರ್ ವ್ಯವಸ್ಥೆ ಜಾರಿಗೆ ತರಲಾಗಿದೆ. ಅರಣ್ಯ ಸಚಿವರಾದ ಬಳಿಕ ಇಲಾಖೆಯಲ್ಲಿ ಹಂತ ಹಂತವಾಗಿ ಸುಧಾರಣೆ ತರಲಾಗುತ್ತಿದ್ದು, ಪೊಲೀಸ್ ಇಲಾಖೆಯ ಮಾದರಿಯಲ್ಲೇ ಅರಣ್ಯ ಇಲಾಖೆಯಲ್ಲೂ ಗರುಡಾಕ್ಷಿ ಹೆಸರಿನಲ್ಲಿ ಆನ್‌ಲೈನ್ ಎಫ್‌ಐಆ‌ರ್ ವ್ಯವಸ್ಥೆ ಕಾರ್ಯರೂಪಕ್ಕೆ ತರಲಾಗುತ್ತಿದೆ ಎಂದು ಹೇಳಿದರು. 

ಗಣಿಬಾಧಿತ ಪ್ರದೇಶದಲ್ಲಿ ತಾಲೂಕಿಗೊಂದು ವೃಕ್ಷೋದ್ಯಾನ: ಸಚಿವ ಈಶ್ವರ್ ಖಂಡ್ರೆ

ಗರುಡಾಕ್ಷಿ ಆನ್‌ಲೈನ್ ಎಫ್‌ಐಆರ್ ವ್ಯವಸ್ಥೆ ಅರಣ್ಯ ಮತ್ತು ವನ್ಯಜೀವಿ ಅಪರಾಧಗಳ ನಿರ್ವಹಣೆಯಲ್ಲಿ ಅತ್ಯಂತ ಮಹತ್ವದ ಮೈಲಿಗಲ್ಲಾಗಿದ್ದು, ಪಾರದರ್ಶಕ, ಸುವ್ಯವಸ್ಥಿತ, ಪರಿಹಾರವಾಗಿ ಅರಣ್ಯ, ಅಪರಾಧ ತಡೆಯಲು ಇಲಾಖೆಗೆ ಬಲ ತುಂಬುತ್ತದೆ. ಈವರೆಗೆ ಎ-4 ಹಾಳೆಯ ಅರ್ಧಭಾಗದಷ್ಟು ಅಳತೆಯ ಎಫ್ ಐಆರ್‌ನಲ್ಲಿ ಕಾರ್ಬನ್ ಶೀಟ್ ಹಾಕಿಕೈ ಬರಹದಲ್ಲಿ ಪ್ರಕರಣ ದಾಖಲಿಸಲಾಗುತ್ತಿತ್ತು. ಸಾವಿರಾರು ಪ್ರಕರಣಗಳು ದಾಖಲಾದರೂ ಎಷ್ಟು ಪ್ರಕರಣದಲ್ಲಿ ಚಾರ್ಜ್‌ ಶೀಟ್ ಹಾಕಲಾಗುತ್ತಿದೆ ಎಂಬುದನ್ನು ಮೇಲ್ವಿಚಾರಣೆ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಆನ್‌ಲೈನ್ ಎಫ್‌ಐಆರ್ ವ್ಯವಸ್ಥೆಯಿಂದ ಎಷ್ಟು ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಸಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಲಿದೆ. ಅಲ್ಲದೇ, ಇಲಾಖೆಯ ಇಲಾಖೆಯ ಅಧಿಕಾರಿಗಳು ಕುಳಿತ ಜಾಗದಿಂದಲೇ ಎಲ್ಲ ವಲಯಗಳ ಅರಣ್ಯ ಅಪರಾಧ ಪ್ರಕರಣಗಳ ಬಗ್ಗೆ ನಿಗಾವಹಿಸಬಹುದಾಗಿದೆ ಎಂದು ಮಾಹಿತಿ ನೀಡಿದರು. 

ಪ್ರಸ್ತುತ ಗರುಡಾಕ್ಷಿ ತಂತ್ರಾಂಶವನ್ನು ಪ್ರಾಯೋಗಿಕವಾಗಿ ಬೆಂಗಳೂರುನಗರವಿಭಾಗ, ಬೆಂಗಳೂರು ಅರಣ್ಯ ಸಂಚಾರಿ ದಳ ವಿಭಾಗ, ಭದ್ರಾವತಿ ವಿಭಾಗ, ಶಿರಸಿ ವಿಭಾಗ ಮತ್ತು ಮಲೈ ಮಹದೇಶ್ವರ ವನ್ಯ ಜೀವಿ ವಿಭಾಗಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತದೆ. ಈ ತಂತ್ರಾಂಶದ ಕಾರ್ಯನಿರ್ವಹಣೆ ಬಗ್ಗೆ ಕ್ಷೇತ್ರ ಮಟ್ಟದ ಪ್ರತಿಕ್ರಿಯೆ ಆಧಾರದ ಮೇಲೆ ಇನ್ನೂ ಹೆಚ್ಚು ಕ್ರಿಯಾಶೀಲಗೊಳಿಸಿ ಹಂತ ಹಂತವಾಗಿ ರಾಜ್ಯದ ಎಲ್ಲ ವಿಭಾಗಕ್ಕೂ ವಿಸ್ತರಿಸಲಾಗುವುದು ಮತ್ತು ಎಫ್‌ಐಆರ್‌ಅನ್ನು ಗರುಡಾಕ್ಷಿ ತಂತ್ರಾಂಶದ ಮೂಲಕವೇ ದಾಖಲಿಸುವುದನ್ನು ಕಡ್ಡಾಯಗೊಳಿಸಲಾಗುವುದು ಎಂದರು. 

ಆನೆ ಸಾಯಿಸಲು ಅನುಮತಿ ಕೋರಿದ ಶಾಸಕ: ಬೇಸರ ವ್ಯಕ್ತಪಡಿಸಿದ ಸಚಿವ ಈಶ್ವರ್‌ ಖಂಡ್ರೆ

ವಲಯ ಅರಣ್ಯಾಧಿಕಾರಿಗಿಂತ ಕಡಿಮೆ ದರ್ಜೆಯ ಅಧಿಕಾರಿಗಳು ಈ ಮೊದಲು ಎಫ್ ಐಆರ್‌ಹಾಕುತ್ತಿದ್ದರು.ತಾಂತ್ರಿಕಕಾರಣದಿಂದಾಗಿ ಪ್ರಕರಣಗಳು ನ್ಯಾಯಾಲಯದಲ್ಲಿ ವಜಾ ಆಗುತ್ತಿತ್ತು. ಈ ತಂತ್ರಾಂಶ ಜಾರಿ ಕಾರಣ ಇದಕ್ಕೆ ಅಸ್ಪದ ಇರುವುದಿಲ್ಲವಾಗಿದ್ದು, ಡಿಜಿಟಲ್ ಸಹಿ ಇರುತ್ತದೆ. ಅರಣ್ಯ ಭೂಮಿ ತನ್ನ ಸ್ವರೂಪ ಕಳೆದುಕೊಂಡರೆ ಮತ್ತೆ ಅರಣ್ಯ ಬೆಳೆಸಬಹುದು. ಆದರೆ ಅರಣ್ಯಕ್ಕೆ ಭೂಮಿಯೇ ಇಲ್ಲದಿದ್ದರೆ ಅರಣ್ಯ ಬೆಳೆಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಅರಣ್ಯ ಒತ್ತುವರಿಯಾಗದಂತೆ ತಡೆಯಲು ಆನ್‌ಲೈನ್ ಎಫ್‌ಐಆರ್‌ಕ್ರಾಂತಿಕಾರಿ ಹೆಜ್ಜೆಯಾಗಿದೆ ಎಂದು ಅಭಿಪ್ರಾಯಪಟ್ಟರು. 

ಈ ಸಂದರ್ಭದಲ್ಲಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಂ ಪ್ರವೇಜ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ದೀಕ್ಷಿತ್, ವನ್ಯ ಜೀವಿ ವಿಭಾಗದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸುಭಾಷ್ ಮಾಲ್ಗಡೆ ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಜ್ಯದಲ್ಲಿ ಅಂತರ್ಜಾತಿ ವಿವಾಹ ಹೆಚ್ಚಾಗಬೇಕು, ಆದ್ರೆ ಒಂದರಿಂದ 2 ಮಕ್ಕಳನ್ನ ಮಾಡಿಕೊಳ್ಳಿ; ಸಿಎಂ ಸಿದ್ದರಾಮಯ್ಯ
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ