2 ಸಾವಿರ ಬೋಧಕ ಹುದ್ದೆಗಳ ನೇರ ನೇಮಕಾತಿ : ಸುಧಾಕರ್‌

Kannadaprabha News   | Kannada Prabha
Published : Mar 17, 2026, 05:55 AM IST
Dr MC Sudhakar

ಸಾರಾಂಶ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್‌ ಹಾಗೂ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಖಾಲಿಯಿರುವ ಎರಡು ಸಾವಿರ ಬೋಧಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ। ಎಂ.ಸಿ.ಸುಧಾಕರ್‌ ತಿಳಿಸಿದರು.

 ವಿಧಾನ ಪರಿಷತ್ತು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್‌ ಹಾಗೂ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಖಾಲಿಯಿರುವ ಎರಡು ಸಾವಿರ ಬೋಧಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ। ಎಂ.ಸಿ.ಸುಧಾಕರ್‌ ತಿಳಿಸಿದರು. 

ಸೋಮವಾರ ನಿಯಮ 330ರಡಿ ಬಿಜೆಪಿ ಸದಸ್ಯ ಡಾ.ತಳವಾರ್‌ ಸಾಬಣ್ಣ ಅವರು ಪ್ರಸ್ತಾಪಿಸಿದ ಸೂಚನೆಗೆ ಉತ್ತರಿಸಿದ ಸಚಿವರು, ಉನ್ನತ ಶಿಕ್ಷಣ ಇಲಾಖೆಯಡಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜುಗಳು, ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜುಗಳು ಹಾಗೂ ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜು ವಿಶ್ವವಿದ್ಯಾಲಯದಲ್ಲಿ ಖಾಲಿಯಿರುವ ಬೋಧಕ ವೃಂದದ ಪೈಕಿ 2 ಸಾವಿರ ಬೋಧಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅನುಮತಿ ನೀಡಿ ಆದೇಶಿಸಲಾಗಿದೆ ಎಂದರು.

ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ 1 ಸಾವಿರ ಬೋಧಕ ಹುದ್ದೆ ಭರ್ತಿ

ಅಂತೆಯೇ ಈ ಸಾಲಿನಲ್ಲಿ ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ 1 ಸಾವಿರ ಬೋಧಕ ಹುದ್ದೆಗಳನ್ನು ತರ್ಕಬದ್ಧಗೊಳಿಸಿ ಹಂತ, ಹಂತವಾಗಿ ಭರ್ತಿ ಮಾಡಲಾಗುವುದು. ಅದರಂತೆ ಉನ್ನತ ಶಿಕ್ಷಣ ಇಲಾಖೆಯಡಿ ಖಾಲಿಯಿರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಜಾರಿಯಲ್ಲಿದೆ. ಶೈಕ್ಷಣಿಕ ಚಟುವಟಿಕೆಗಳನ್ನು ಹಾಗೂ ವಿಶ್ವವಿದ್ಯಾಲಯಗಳನ್ನು ಬಲಪಡಿಸಲು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ವಿಶ್ವವಿದ್ಯಾಲಯಗಳನ್ನು ಹೆಚ್ಚಳ ಮಾಡಿರುವುದರಿಂದ ಆದಾಯ ಕಡಿಮೆ

ಆಳವಾಗಿ ಅಧ್ಯಯನ ಮಾಡದೆ ಸರ್ಕಾರಗಳು ವಿಶ್ವವಿದ್ಯಾಲಯಗಳನ್ನು ಹೆಚ್ಚಳ ಮಾಡಿರುವುದರಿಂದ ಆದಾಯ ಕಡಿಮೆ ಆಗಿದೆ. ವಿಶ್ವವಿದ್ಯಾಲಯಗಳಲ್ಲಿ ನಿವೃತ್ತರಾದವರಿಗೆ ಪಿಂಚಣಿ ಕೊಡಲೂ ಹಣವಿಲ್ಲ ಎಂದ ಸಚಿವರು, ರಾಜ್ಯದ ಸಾರ್ವಜನಿಕ ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿ-ಗತಿ ಪರಾಮರ್ಶಿಸಲು ಸಚಿವ ಸಂಪುಟ ಉಪಸಮಿತಿ ರಚಿಸಲಾಗಿದೆ. ಸದರಿ ಸಮಿತಿ ಆರ್ಥಿಕ ಇಲಾಖೆ ಮತ್ತು ಉನ್ನತ ಶಿಕ್ಷಣ ಇಲಾಖೆ ಸಹಯೋಗದಲ್ಲಿ ವಿಶ್ವವಿದ್ಯಾಲಯಗಳ ಸಂಶೋಧನೆ, ಮೂಲಸೌಲಭ್ಯ, ಅನುದಾನ, ಪಿಂಚಣಿ ಹಾಗೂ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಅನುಕೂಲವಾಗುವಂತೆ ಅಗತ್ಯ ಹುದ್ದೆಗಳ ನೇಮಕಾತಿ ಹಾಗೂ ಇತ್ಯಾದಿ ಅವಶ್ಯಕ ವಿಷಯಗಳ ಕುರಿತು ಹಲವು ಸಭೆ ನಡೆಸಿದ್ದು ಶೀಘ್ರದಲ್ಲೇ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಈ ವರದಿ ಆಧಾರದಲ್ಲಿ ಇನ್ನಷ್ಟು ಸುಧಾರಣೆಗೆ ಕ್ರಮವಹಿಸಲಾಗುವುದು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

3 ತಿಂಗಳಲ್ಲಿ 1715 ಆಂಬ್ಯುಲೆನ್ಸ್‌ ಸರ್ಕಾರ ನಿರ್ವಹಣೆ: ಸಚಿವ ಶರಣ ಪ್ರಕಾಶ್‌ ಪಾಟೀಲ್
ವಿದೇಶಾಂಗ ನೀತಿಯಲ್ಲಿ ಕೇಂದ್ರದ ತಪ್ಪಿನಿಂದ ಆರ್ಥಿಕತೆಗೆ ಹೊಡೆತ, ರಿಜ್ವಾನ್‌ ಹೇಳಿಕೆಗೆ ಸದನದಲ್ಲಿ ಗದ್ದಲ