
ಮೈಸೂರು (ಜ.28): ಮೈಸೂರಿನ ಚಾಮುಂಡಿಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಬಗ್ಗೆ ಸಾಧಕ ಬಾಧಕಗಳನ್ನು ಚರ್ಚಿಸಿದ ನಂತರ ತೀರ್ಮಾನ ಮಾಡುತ್ತೇವೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು. ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡಿಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿದೆ. ರೋಪ್ ವೇ ನಿರ್ಮಾಣ ಕುರಿತು ಪರ ವಿರೋಧ ಅಭಿಪ್ರಾಯವಿದೆ. ಸಾಧಕ ಬಾಧಕಗಳನ್ನು ಚರ್ಚಿಸಿದ ನಂತರ ತೀರ್ಮಾನಿಸುತ್ತೇವೆ ಎಂದರು. ಚಾಮುಂಡೇಶ್ವರಿ ದೇವಾಲಯದ ಅಭಿವೃದ್ಧಿಗಾಗಿ ಪ್ರಾಧಿಕಾರ ಮಾಡಿದ್ದೇವೆ. ಪ್ರಸಾದ ಯೋಜನೆಯಡಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ 40 ಕೋಟಿ ರೂ. ಅನುದಾನದಲ್ಲಿ ಚಾಮುಂಡಿಬೆಟ್ಟದ ಸಮಗ್ರ ಅಭಿವೃದ್ಧಿಗೆ ಮುಂದಾಗಿದ್ದೇವೆ ಎಂದು ಅವರು ಹೇಳಿದರು.
ಸೋಮನಾಥಪುರಕ್ಕೆ ಸೌಲಭ್ಯ: ಸೋಮನಾಥಪುರ ದೇವಾಲಯಕ್ಕೆ ಏಕ ಕಾಲಕ್ಕೆ ಮೂಲಭೂತ ಸೌಕರ್ಯ ಕೊಡಲು ಸಾಧ್ಯವಿಲ್ಲ. ಹಂತ ಹಂತವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸೋಣ. ಸೋಮನಾಥಪುರ ದೇವಾಲಯಕ್ಕೆ ಯಾಕೆ ಬಸ್ ಸೌಲಭ್ಯ ಕಡಿಮೆಯಾಗಿದೆ ಎಂಬುದರ ಮಾಹಿತಿ ಇಲ್ಲ. ನಾನು ಕೆ.ಎಸ್.ಆರ್.ಟಿ.ಸಿ ಎಂಡಿ ಜೊತೆ ಈ ಬಗ್ಗೆ ಮಾತನಾಡುತ್ತೇನೆ. ಸೋಮನಾಥಪುರಕ್ಕೂ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ರೀತಿ ಮಾಡುತ್ತೇವೆ ಎಂದು ಅವರು ತಿಳಿಸಿದರು.
ಜಗದೀಶ್ ಶೆಟ್ಟರ್ ಬಿಜೆಪಿಗೆ ಹೋಗಿದ್ದು ಬಹಳ ನೋವಾಗಿದೆ: ಸಚಿವ ಜಮೀರ್ ಅಹಮದ್ ಖಾನ್
ಸಂವಿಧಾನ ಜಾಗೃತಿ ರಥಕ್ಕೆ ಚಾಲನೆ: ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ೭೫ನೇ ವರ್ಷದ ಸಂವಿಧಾನ ಅಮೃತ ಮಹೋತ್ಸವದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸಂವಿಧಾನದ ಜಾಗೃತಿ ಬಗೆಗೆ ರಾಜ್ಯಾದ್ಯಂತ ಗ್ರಾಪಂ, ಹೋಬಳಿ ಕೇಂದ್ರ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಆಯೋಜಿಸಲಾದ ಸಂವಿಧಾನ ಜಾಗೃತಿ ಜಾಥಾಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಚಾಲನೆ ನೀಡಿದರು.
ತದನಂತರ ಅವರು ಮಾತನಾಡಿ, ಸಂವಿಧಾನ ರಕ್ಷಣೆ ಎಂದರೆ ಅದು ಜನರ ರಕ್ಷಣೆ ಮಾಡಿದಂತೆ. ಸಂವಿಧಾನ ರಕ್ಷಣೆಗೆ ಮುಂದಾಗಬೇಕು. ದೇಶದ ಸಾಮಾಜಿಕ, ರಾಜಕೀಯ, ಆರ್ಥಿಕ ವಿಕಸನಕ್ಕೆ ಸಂವಿಧಾನವನ್ನು ಬಲಪಡಿಸಬೇಕಾಗಿದೆ. ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಪ್ರದರ್ಶಿಸಿಸುವ ಸ್ತಬ್ಧ ಚಿತ್ರವನ್ನು ಜಿಲ್ಲೆಯ ಎಲ್ಲಾ ತಾಲೂಕು ಮತ್ತು ಗ್ರಾಮಪಂಚಾಯತಗಳಲ್ಲಿ ಪ್ರದರ್ಶಿಸಿ ಎಲ್ಲಾ ಸಾರ್ವಜನಿಕರಿಗೆ ಅರಿವು ಮೂಡಿಸುವುದರೊಂದಿಗೆ ಅಂತಿಮವಾಗಿ ಫೆ.೨೪ ಮತ್ತು ೨೫ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಸಮಾವೇಶಕ್ಕೆ ಬಂದು ಸೇರಲಿವೆ ಎಂದರು.
ಬೆಳೆ ಸಾಲ ಎಕರೆಗೆ ಕನಿಷ್ಟ ₹1ಲಕ್ಷ ಏರಿಸಲು ಪ್ರಯತ್ನ: ಸಚಿವ ಈಶ್ವರ ಖಂಡ್ರೆ
ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳಿಂದ ಪ್ರಾರಂಭವಾಗಿ ಫೆ.೨೩ರವರೆಗೆ ಗದಗ ಜಿಲ್ಲೆಯ ಎಲ್ಲ ೧೨೨ ಗ್ರಾಮ ಪಂಚಾಯತಿಗಳಲ್ಲಿ ಮತ್ತು ೯ ಸ್ಥಳಿಯ ನಗರ ಸಂಸ್ಥೆಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಕುರಿತು ಸ್ತಬ್ಧ ಚಿತ್ರದ ಮೆರವಣಿಗೆ ಮತ್ತು ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಕೊನೆಗೆ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮವು ಮುಂಡರಗಿ ತಾಲೂಕಿನಲ್ಲಿ ಅದ್ದೂರಿ ಕಾರ್ಯಕ್ರಮದೊಂದಿಗೆ ಮುಕ್ತಾಯವಾಗುವುದು. ಈ ಕಾರ್ಯಕ್ರಮದಲ್ಲಿ ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹ ಲಕ್ಷ್ಮೀ, ಶಕ್ತಿ ಯೋಜನೆ, ಗೃಹಜ್ಯೋತಿ ಮತ್ತು ಯುವನಿಧಿಯಂತ ಯೋಜನೆಗಳನ್ನು ಶೇಕಡಾ ೧೦೦ ರಷ್ಟು ಸಾರ್ವಜನಿಕರಿಗೆ ತಲುಪಿಸಲು ಕ್ರಮಕೈಗೊಳ್ಳಲಾಗಿದೆ. ಹಾಗೂ ಪ್ರಗತಿಯನ್ನು ಸಾಧಿಸಲಾಗಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ