ಬಂಡೀಪುರ ರಾತ್ರಿ ಸಂಚಾರ ಬಗ್ಗೆ ಶೀಘ್ರವೇ ಚರ್ಚೆ: ಸಚಿವ ಈಶ್ವರ ಖಂಡ್ರೆ

By Kannadaprabha News  |  First Published Nov 13, 2024, 11:21 AM IST

ಈಗಾಗಲೇ ಬಂಡೀಪುರ ಅರಣ್ಯ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅನುಮತಿ ನೀಡುವ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ಅಲ್ಲದೇ ರಾತ್ರಿ ವೇಳೆ ವಾಹನ ಸಂಚಾರದ ವಿಷಯ ಕುರಿತು ನ್ಯಾಯಾಲಯದ ತೀರ್ಪು ಇದೆ. ಆದ್ದರಿಂದ ಈ ಎಲ್ಲ ಅಂಶಗಳ ಬಗ್ಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು ಎಂದ ಅರಣ್ಯ ಸಚಿವ ಈಶ್ವರ ಖಂಡ್ರೆ


ಬೆಂಗಳೂರು(ನ.13):  ಬಂಡೀಪುರ ಅರಣ್ಯ ಮಾರ್ಗವಾಗಿ ಕೇರಳಕ್ಕೆ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅನುಮತಿ ನೀಡುವ ಕುರಿತಂತೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು. 

ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗಾಗಲೇ ಬಂಡೀಪುರ ಅರಣ್ಯ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅನುಮತಿ ನೀಡುವ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ಅಲ್ಲದೇ ರಾತ್ರಿ ವೇಳೆ ವಾಹನ ಸಂಚಾರದ ವಿಷಯ ಕುರಿತು ನ್ಯಾಯಾಲಯದ ತೀರ್ಪು ಇದೆ. ಆದ್ದರಿಂದ ಈ ಎಲ್ಲ ಅಂಶಗಳ ಬಗ್ಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು ಎಂದರು.

Latest Videos

undefined

ಟಾಕ್ಸಿಕ್ ಚಿತ್ರತಂಡ ಸೇರಿ 3 ಸಂಸ್ಥೆಗಳ ಮೇಲೆ ಎಫ್‌ಐಆರ್ ದಾಖಲಿಸಿದ ಅರಣ್ಯ ಇಲಾಖೆ!

ಒಪ್ಪಿದರೆ ವಿವಾದ ಸಾಧ್ಯತೆ 

ರಾತ್ರಿ ವೇಳೆ ವಾಹನಗಳ ಸಂಚಾರದಿಂದ ವನ್ಯ ಜೀವಿಗಳು ಅಪಘಾತಕ್ಕೀ ಡಾಗಿ ಸಾವಿಗೀಡಾಗುವುದನ್ನು ತಪ್ಪಿಸುವ ಉದ್ದೇಶದಿಂದ ಕಳೆದ 15 ವರ್ಷಗಳಿಂದ ಬಂಡೀಪುರ ಅರಣ್ಯ ಮಾರ್ಗವಾಗಿ ಕೇರಳಕ್ಕೆ ರಾತ್ರಿ ವಾಹನ ಸಂಚಾರ ನಿಷೇಧಿಸಲಾಗಿದೆ. ಒಂದು ವೇಳೆ ಸರ್ಕಾರ ಅನುಮತಿ ನೀಡಿದರೆ ವಿವಾದಕ್ಕೆ ಕಾರಣವಾಗಲಿದೆ. 

2004ರಿಂದ 2007 ಅವಧಿಯಲ್ಲಿ ಅಪಾಯದ ಅಂಚಿ ನಲ್ಲಿರುವ ಹುಲಿ, ಆನೆ ಮುಂತಾದ 215 ಪ್ರಾಣಿಗಳು ವಾಹ ನಗಳ ಅಪಘಾತದಿಂದ ಸಾವಿಗೆ ಈಡಾದ ಮಾಹಿತಿ ಆಧರಿಸಿ 2009ರಲ್ಲಿ ಹೈಕೋರ್ಟ್ ರಾತ್ರಿ ಸಂಚಾರ ನಿಷೇಧಿಸಿತ್ತು. ಆದರೆ ಕೇರಳ ರಾಜ್ಯ ರಾತ್ರಿ ವೇಳೆ ವಾಹನಗಳ ಸಂಚಾರಕ್ಕೆ ಅನುಮತಿ ನೀಡುವಂತೆ ಪದೇ ಪದೇ ಮನವಿ ಮಾಡಿದ್ದರೂ ಸರ್ಕಾರ ಇದಕ್ಕೆ ಸಹಮತ ವ್ಯಕ್ತಪಡಿಸಿರಲಿಲ್ಲ. ಹಲವಾರು ಪರಿಸರ, ವನ್ಯಜೀವಿ ಪ್ರೇಮಿಗಳ ಸೇರಿದಂತೆ ವಿವಿಧ ಸಂಘಟನೆಗಳು ವಾಹನ ಸಂಚಾರಕ್ಕೆ ಅನುಮತಿ ನೀಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದವು.

click me!