ಬಜೆಟ್ ಮಂಡನೆಗೂ ಮುನ್ನ ಅತೃಪ್ತರ ರಾಜೀನಾಮೆ ?

By Web DeskFirst Published Feb 8, 2019, 8:39 AM IST
Highlights

ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಮುಖ್ಯಮಂತ್ರಿಗಳ ಬಜೆಟ್ ಮಂಡನೆಗೂ ಮೊದಲು ಪತ್ರಿಕಾಗೋಷ್ಠಿ ಕರೆದಿರುವುದು ಕುತೂಹಲ ಮೂಡಿಸಿದೆ.

ಬೆಂಗಳೂರು :  ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಮುಖ್ಯಮಂತ್ರಿಗಳ ಬಜೆಟ್ ಮಂಡನೆಗೂ ಮೊದಲು ಪತ್ರಿಕಾಗೋಷ್ಠಿ ಕರೆದಿರುವುದು ಕುತೂಹಲ ಮೂಡಿಸಿದೆ.

ಬೆಳಗ್ಗೆ 11ಗಂಟೆಗೆ ವಿಧಾನಸೌಧ ದಲ್ಲಿನ ತಮ್ಮ ಕೊಠಡಿಯಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದು, ಇದಕ್ಕೂ ಮೊದಲೇ ಆಡಳಿತಾರೂಢ ಕಾಂಗ್ರೆಸ್ಸಿನ ಕೆಲವು ಅತೃಪ್ತ ಶಾಸಕರು ರಾಜೀನಾಮೆ ನೀಡಬಹುದು. ಈ ಬಗ್ಗೆ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಬಹುದು ಎಂಬ ಮಾತು
ಕೇಳಿಬಂದಿದೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃ ತ್ವದ ಸಮ್ಮಿಶ್ರ ಸರ್ಕಾರಕ್ಕೆ ಬಹುಮತ ಇಲ್ಲ ಎಂದು ಗುರುವಾರವೂ ಬಲವಾಗಿ ಹೇಳಿರುವ ಯಡಿಯೂರಪ್ಪ ಅವರು ಇದನ್ನು ಶುಕ್ರವಾರ ನಿರೂಪಿಸಲು ಪ್ರಯತ್ನಿಸಲಿ ದ್ದಾರೆ. ಅದಕ್ಕೂ ಮೊದಲು ಗುರುವಾರ ತಡರಾತ್ರಿ ಮುಂಬೈನಿಂದ ಬೆಂಗಳೂರಿಗೆ ಆಗಮಿಸಿದ್ದಾರೆ ಎನ್ನಲಾದ ಅತೃಪ್ತ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬಹುದು ಎಂದು ಮೂಲಗಳು ತಿಳಿಸಿವೆ.

ಅಂದರೆ, ಸರ್ಕಾರಕ್ಕೆ ಬಹುಮತವಿಲ್ಲ ಎಂಬುದನ್ನು ಪ್ರತಿಪಾದಿಸುವ ಸಂಬಂಧ ಅತೃಪ್ತ ಶಾಸಕರ ರಾಜೀ ನಾಮೆಯನ್ನೇ ಮುಂದಿಟ್ಟುಕೊಂಡು ಹೋರಾಟ ನಡೆಸುವ ಬಗ್ಗೆಯೂ ಯಡಿಯೂರಪ್ಪ ಅವರು ಪ್ರಕಟಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

click me!