ದೀಪಾವಳಿಗೆ ವಿಶೇಷ ರೈಲುಗಳು: ಮಂಗಳೂರು-ಹುಬ್ಬಳ್ಳಿ, ಬೆಂಗಳೂರು-ಚೆನ್ನೈ ನಡುವೆ ಸಂಚಾರ!

By Sathish Kumar KH  |  First Published Oct 21, 2024, 4:56 PM IST

ದೀಪಾವಳಿ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ವಿಶೇಷ ರೈಲುಗಳನ್ನು ಘೋಷಿಸಿದೆ. ಬೆಂಗಳೂರು-ಚೆನ್ನೈ ನಡುವೆ ಅಕ್ಟೋಬರ್ 30 ಮತ್ತು ನವೆಂಬರ್ 3 ರಂದು ಎರಡು ಟ್ರಿಪ್‌ಗಳ (ರೈಲು ಸಂಖ್ಯೆ 06209/06210) ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚರಿಸಲಿದೆ. ಹುಬ್ಬಳ್ಳಿ-ಮಂಗಳೂರು ನಡುವೆಯೂ ನವೆಂಬರ್ 2 ಮತ್ತು 3 ರಂದು ಒಂದು ಟ್ರಿಪ್ (07311/07312) ವಿಶೇಷ ರೈಲು ಓಡಲಿದೆ. ರೈಲುಗಳ ಸಮಯ, ನಿಲುಗಡೆಗಳ ಮಾಹಿತಿಯನ್ನು www.enquiry.indianrail.gov.in, NTES ಆ್ಯಪ್ ಅಥವಾ 139 ಮೂಲಕ ಪಡೆಯಬಹುದು.


ಬೆಂಗಳೂರು (ಅ.21): ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸಲು ಮತ್ತು ಪ್ರಯಾಣಿಕರ ಮನವಿ ಮೇರೆಗೆ ನೈಋತ್ಯ ರೈಲ್ವೆಯು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು - ಚೆನ್ನೈ ಎಗ್ಮೋರ್ ನಿಲ್ದಾಣಗಳ ನಡುವೆ ಎರಡು ಟ್ರಿಪ್ ಮತ್ತು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ - ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ಅವುಗಳ ವಿವರ ಈ ಕೆಳಗಿನಂತಿವೆ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು-ಚೆನ್ನೈ ಎಗ್ಮೋರ್ ನಿಲ್ದಾಣಗಳ ನಡುವೆ ಎರಡು  ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (06209/06210) ರೈಲು ಸಂಚಾರ. ರೈಲು ಸಂಖ್ಯೆ 06209 ಅಕ್ಟೋಬರ್ 30 ಮತ್ತು ನವೆಂಬರ್ 3, 2024 ರಂದು ಬೆಳಿಗ್ಗೆ 8:05 ಕ್ಕೆ ಕೆಎಸ್ಆರ್ ಬೆಂಗಳೂರಿನಿಂದ ಹೊರಟು, ಅದೇ ದಿನ ಮಧ್ಯಾಹ್ನ 2:30 ಕ್ಕೆ ಚೆನ್ನೈ ಎಗ್ಮೋರ್ ನಿಲ್ದಾಣವನ್ನು ತಲುಪಲಿದೆ. ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 06210 ಚೆನ್ನೈ ಎಗ್ಮೋರ್ ನಿಲ್ದಾಣದಿಂದ ಅಕ್ಟೋಬರ್ 30 ಮತ್ತು ನವೆಂಬರ್ 3, 2024 ರಂದು ಮಧ್ಯಾಹ್ನ 3:55 ಕ್ಕೆ ಹೊರಟು, ಅದೇ ದಿನ ರಾತ್ರಿ 10:50 ಕ್ಕೆ ಕೆಎಸ್ಆರ್ ಬೆಂಗಳೂರು ಆಗಮಿಸಲಿದೆ.

Tap to resize

Latest Videos

ಇದನ್ನೂ ಓದಿ: ವೀಲ್‌ಚೇರ್‌ನಲ್ಲಿ ಝೊಮ್ಯಾಟೊ ಡೆಲಿವರಿ ಏಜೆಂಟ್: ಸಲಾಂ ಅಂತಿದ್ದಾರೆ ನೆಟ್ಟಿಗರು!

ಈ ರೈಲು ಎರಡೂ ದಿಕ್ಕುಗಳಲ್ಲಿ ಯಶವಂತಪುರ, ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ ಪೆಟ್ಟೈ, ಕಟ್ಪಾಡಿ, ಅರಕ್ಕೋಣಂ ಮತ್ತು ಪೆರಂಬೂರು ನಿಲ್ದಾಣಗಳಲ್ಲಿ ನಿಲುಗಡೆ ಇರಲಿವೆ. ಈ ರೈಲು 1 ಎಸಿ ಟು ಟೈಯರ್, 1 ಎಸಿ ತ್ರಿ ಟೈಯರ್, 11 ಸ್ಲೀಪರ್ ಕ್ಲಾಸ್, 4 ಸಾಮಾನ್ಯ ದ್ವಿತೀಯ ದರ್ಜೆ ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್ / ಬ್ರೇಕ್ ವ್ಯಾನ್ ಸೇರಿದಂತೆ 19 ಬೋಗಿಗಳನ್ನು ಒಳಗೊಂಡಿರುತ್ತದೆ.

ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (07311/07312) ರೈಲು ಸಂಚಾರ, ರೈಲು ಸಂಖ್ಯೆ 07311 ನವೆಂಬರ್ 2, 2024 ರಂದು ಶ್ರೀ ಸಿದ್ದಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ರೈಲು ನಿಲ್ದಾಣದಿಂದ ಸಂಜೆ 4 ಗಂಟೆಗೆ ಹೊರಟು, ಮರುದಿನ ದಿನ ಬೆಳಗ್ಗೆ 11.25 ಗಂಟೆಗೆ ಮಂಗಳೂರು ಜಂಕ್ಷನ್ ತಲುಪಲಿದೆ. ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 07312 ನವೆಂಬರ್ 3, 2024 ರಂದು ಮಂಗಳೂರು ಜಂಕ್ಷನ್‌ನಿಂದ ಮಧ್ಯಾಹ್ನ 1 ಗಂಟೆಗೆ ಹೊರಟು,  ಮರುದಿನ ಅಂದರೆ ನ.4 ರಂದು ಬೆಳಗ್ಗೆ 7 ಗಂಟೆಗೆ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ತಲುಪಲಿದೆ.

ಇದನ್ನೂ ಓದಿ: Breaking: 545 ಪಿಎಸ್‌ಐಗಳ ತಾತ್ಕಾಲಿಕ ಪಟ್ಟಿ ಪ್ರಕಟ: ದೀಪಾವಳಿಗೆ ಗುಡ್‌ನ್ಯೂಸ್‌!

ಈ ರೈಲು ಎರಡೂ ದಿಕ್ಕುಗಳಲ್ಲಿ ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟವಾಳ ನಿಲ್ದಾಣಗಳಲ್ಲಿ ನಿಲುಗಡೆ ಇರಲಿವೆ. ಈ ರೈಲಿನಲ್ಲಿ 1 ಎಸಿ ಟು ಟೈಯರ್, 2 ಫಸ್ಟ್ ಎಸಿ ಕಮ್ ಎಸಿ ತ್ರಿ ಟೈಯರ್, 3 ಎಸಿ ತ್ರಿ ಟೈಯರ್, 5 ಸ್ಲೀಪರ್ ಕ್ಲಾಸ್, 2 ಸಾಮಾನ್ಯ ದ್ವಿತೀಯ ದರ್ಜೆ ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್ / ಬ್ರೇಕ್ ವ್ಯಾನ್ ಬೋಗಿಗಳು ಸೇರಿದಂತೆ 15 ಬೋಗಿಗಳು ಇರಲಿವೆ. ಈ ವಿಶೇಷ ರೈಲುಗಳು ಹಬ್ಬದ ಋತುವಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ವರ್ಧಿತ ಸಂಪರ್ಕ ಮತ್ತು ಅನುಕೂಲವನ್ನು ಒದಗಿಸುತ್ತವೆ.

ಪ್ರಯಾಣಿಕರು www.enquiry.indianrail.gov.in ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಥವಾ NTES ಅಪ್ಲಿಕೇಶನ್ ಬಳಸಿ ಅಥವಾ 139 ಗೆ ಡಯಲ್ ಮಾಡುವ ಮೂಲಕ ರೈಲುಗಳ ಆಗಮನ/ನಿರ್ಗಮನ ಸಮಯ, ಇತರ ವಿವರಗಳನ್ನು ಪರಿಶೀಲಿಸಬಹುದು.

click me!