
ಬೆಂಗಳೂರು (ಮೇ.27): ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ತೀವ್ರ ರಾಜಕೀಯ ತಿರುವುಗಳ ನಡುವೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DCM DK Shivakumar) ಅವರ ಬೆಂಗಳೂರು ಆಗಮನ ಇಡೀ ರಾಜ್ಯದ ಕುತೂಹಲಕ್ಕೆ ಕಾರಣವಾಗಿದೆ. ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆಗಿನ ಮಹತ್ವದ ಮಾತುಕತೆ ಮುಗಿಸಿರುವ ಅವರು, ಇಂದು ರಾತ್ರಿ ವಿಶೇಷ ವಿಮಾನದ ಮೂಲಕ ಸಿಲಿಕಾನ್ ಸಿಟಿಗೆ ಬಂದಿಳಿಯುತ್ತಿದ್ದಾರೆ.
ದೆಹಲಿಯಿಂದ ಹೊರಟಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ರಾತ್ರಿ ಸರಿಯಾಗಿ 09:10 ರ ಇಂಡಿಗೋ 6E811 ವಿಮಾನದ ಮೂಲಕ ಬೆಂಗಳೂರು ಏರ್‌ಪೋರ್ಟ್‌ಗೆ ಆಗಮಿಸಲಿದ್ದಾರೆ. ಅವರ ಈ ಆಗಮನವು ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಅತ್ಯಂತ ಮಹತ್ವದ್ದಾಗಿದ್ದು, ಡಿಕೆ ಶಿವಕುಮಾರ್ ಅವರೇ ಮುಂದಿನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವುದು ಬಹುತೇಕ ಖಚಿತವಾಗಿದೆ.
ಡಿಕೆಶಿ ಅವರನ್ನು ಸ್ವಾಗತಿಸಲು ಬೆಂಗಳೂರು ಗ್ರಾಮಾಂತರ ಹಾಗೂ ದೇವನಹಳ್ಳಿ ಭಾಗದ ನೂರಾರು ಮುಖಂಡರು ಮತ್ತು ಕಟ್ಟಾ ಅಭಿಮಾನಿಗಳು ವಿಮಾನ ನಿಲ್ದಾಣದತ್ತ ಧಾವಿಸಿದ್ದಾರೆ. ನೆಚ್ಚಿನ ನಾಯಕನನ್ನು ಬರಮಾಡಿಕೊಳ್ಳಲು ಭಾರಿ ಗಾತ್ರದ ಹಾರಗಳು ಮತ್ತು ಹೂಗುಚ್ಚಗಳನ್ನು (Bouquets) ಕೈಯಲ್ಲಿ ಹಿಡಿದು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಇದೇ ವೇಳೆ ಏರ್‌ಪೋರ್ಟ್‌ಗೆ ಹಸಿರು ಬಣ್ಣದ ಹೊಚ್ಚ ಹೊಸ ಐಷಾರಾಮಿ ಬೆಂಜ್ ಕಾರು (New Green Benz Car) ಆಗಮಿಸಿದ್ದು, ಇದೇ ಕಾರಿನಲ್ಲಿ ಡಿಕೆಶಿ ಅವರು ನಗರದತ್ತ ಪ್ರಯಾಣಿಸಲಿದ್ದಾರೆ.
ರಾಜ್ಯದಲ್ಲಿ ಸಿಎಂ ರಾಜೀನಾಮೆ ಸುತ್ತ ಗಲಾಟೆ ನಡೆಯುತ್ತಿರುವ ಕಾರಣ, ಡಿಕೆಶಿ ಆಗಮನದ ವೇಳೆ ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂದು ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ. ಭದ್ರತೆಯ ಉಸ್ತುವಾರಿ ವಹಿಸಲು ಹೆಚ್ಚುವರಿ ಪೊಲೀಸ್ ಆಯುಕ್ತರಾದ (Additional Commissioner of Police) ರಮೇಶ್ ಬಾನೂತ್ ಅವರು ಖುದ್ದಾಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಟರ್ಮಿನಲ್ 1 ರ ಅರೈವಲ್ ಗೇಟ್ (Arrival Gate) ಮುಂಭಾಗದಲ್ಲಿ ಸಂಪೂರ್ಣವಾಗಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ಅಭಿಮಾನಿಗಳು ಮತ್ತು ಮುಖಂಡರು ಏಕಾಏಕಿ ನಾಯಕನತ್ತ ನುಗ್ಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ವಿಮಾನ ನಿಲ್ದಾಣದ ಭದ್ರತಾ ಪಡೆ (CISF) ಮತ್ತು ಸ್ಥಳೀಯ ಪೊಲೀಸರ ಜಂಟಿ ನೇತೃತ್ವದಲ್ಲಿ 50ಕ್ಕೂ ಅಧಿಕ ಹಿರಿಯ ಸಿಬ್ಬಂದಿ ತಡೆರಹಿತ ಕಾವಲು ಕಾಯುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ