
ಬೆಂಗಳೂರು (ಆ.03) ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾದ ಬಳಿಕ ಸಚಿವ ಸಂಪುಟ ವಿಸ್ತರಣೆ ನಡೆಯುತ್ತಿದೆ. 20 ಶಾಸಕರಿಗೆ ಮಂತ್ರಿಗಿ ಸಿಕ್ಕಿದೆ. ಹಲವು ಸುತ್ತಿನ ಸಭೆಗಳ ಬಳಿಕ ಇಂದು ಬೆಳಗ್ಗೆ ಕಾಂಗ್ರೆಸ್ ಹೈಕಮಾಂಡ್ ಡಿಕೆ ಶಿವಕುಮಾರ್‌ಗೆ 20 ಶಾಸಕರ ಪಟ್ಟಿ ಕಳುಹಿಸಿದ್ದಾರೆ. ಕೆಲ ಅಚ್ಚರಿ ಹೆಸರುಗಳು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಇದೇ ವೇಳೆ ಸಿದ್ದರಾಮಯ್ಯ ಸಂಪುಟದಲ್ಲಿದ್ದ ಕೆಲ ಪ್ರಮುಖರಿಗೆ ಕೊಕ್ ನೀಡಲಾಗಿದೆ. ಈ ರೀತಿ ಸಚಿವ ಸ್ಥಾನ ವಂಚಿತರಾದ ಘಟಾನುಘಟಿಗಳ ಪಟ್ಟಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಪ್ರಮುಖರಿದ್ದಾರೆ.
ಮಂತ್ರಿ ಖಚಿತ ಎಂದೇ ಗುರುತಿಸಿಕೊಂಡಿದ್ದ ಈ ಘಟಾನುಘಟಿಗಳು ಸಚಿವ ಸ್ಥಾನ ವಂಚಿತರಾಗಿದ್ದಾರೆ. ಡಿಕೆ ಶಿವಕುಮಾರ್ ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಇತ್ತ ಮಂತ್ರಿಗಿರಿ ಸಿಗದ ಹಲವು ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಪೈಕಿ ಪ್ರಮುಖ ನಾಯಕ ತನ್ವೀರ್ ಸೇಠ್ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಉದಯಗಿರಿ ಎಂ.ಜಿ ರಸ್ತೆಯಲ್ಲಿ ಕೈ ಕಾರ್ಯಕರ್ತರಿಂದ ಪ್ರತಿಭಟನೆ ಜೋರಾಗಿದೆ. ತನ್ವೀರ್ ಸೇಠ್ ಮನೆ ಮುಂಭಾಗದ ರಸ್ತೆಯಲ್ಲಿ ಬೆಂಬಲಿಗರು ನ್ಯಾಯ ಬೇಕು ಎಂದು ಘೋಷಣೆ ಕೂಗುತ್ತಾ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ಪ್ರಮಾಣವಚನ ಸ್ವೀಕಾರ ಸಮಾರಂಭ ಸಂಜೆ 4.05ಗಂಟೆಗೆ ನಡೆಯಲಿದೆ. ಈ ಹಿನ್ನಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಮಧ್ಯಾಹ್ನ 2.50ಕ್ಕೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ನೂತನ ಸಚಿವರ ಪಟ್ಟಿಯೊಂದಿಗೆ ಸುರ್ಜೆವಾಲ ರಾಜ್ಯಕ್ಕೆ ಆಗಮಿಸಲಿದ್ದಾರೆ. ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಸಿದ್ದತೆಗಳು ಆರಂಭಗೊಂಡಿದೆ. ಲೋಕಭವನದ ಮುಂಭಾಗದಲ್ಲಿ ಬ್ಯಾರಿಕೇಟ್ ಅಳವಡಿಕೆ ಮಾಡಲಾಗಿದೆ. ಭದ್ರತೆಗೆ ಪೊಲೀಸ್ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ. ಲೋಕಭವನ ಸುತ್ತಲಿನ ಕೆಲ ರಸ್ತೆಗಳಿಗೆ ಬ್ಯಾರಿಕೇಟ್ ಅಳವಡಿಕೆ ಮಾಡಲಾಗಿದೆ. ಇತ್ತ ಪೊಲೀಸ್ ಹಿರಿಯ ಅಧಿಕಾರಿಗಳಿಂದ ಭದ್ರತೆ ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ