ಕಾಂಗ್ರೆಸ್ ಸರ್ಕಾರಕ್ಕೆ ನ್ಯಾಯಾಂಗ ವ್ಯವಸ್ಥೆಯ ಮೇಲೆ ನಂಬಿಕೆ ಇಲ್ಲ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿ

By Ravi Janekal  |  First Published Nov 24, 2023, 12:57 PM IST

ಡಿಕೆ ಶಿವಕುಮಾರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ನಡೆಸುತ್ತಿರುವ ತನಿಖೆಯನ್ನು ರಾಜ್ಯ ಸರ್ಕಾರ ಹಿಂಪಡೆಯಲು ನಿರ್ಧಿಸಿರುವುದು ಸರಿಯಲ್ಲ. ಕಾಂಗ್ರೆಸ್ ಸರ್ಕಾರಕ್ಕೆ ನ್ಯಾಯಾಂಗ ವ್ಯವಸ್ಥೆಯ ಮೇಲೆ ನಂಬಿಕೆ ಇಲ್ಲ ಅನ್ನೋದು ಇದರಿಂದ ಸ್ಪಷ್ಟವಾಗುತ್ತೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು.


ಹುಬ್ಬಳ್ಳಿ (ನ.24): ಡಿಕೆ ಶಿವಕುಮಾರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ನಡೆಸುತ್ತಿರುವ ತನಿಖೆಯನ್ನು ರಾಜ್ಯ ಸರ್ಕಾರ ಹಿಂಪಡೆಯಲು ನಿರ್ಧಿಸಿರುವುದು ಸರಿಯಲ್ಲ. ಕಾಂಗ್ರೆಸ್ ಸರ್ಕಾರಕ್ಕೆ ನ್ಯಾಯಾಂಗ ವ್ಯವಸ್ಥೆಯ ಮೇಲೆ ನಂಬಿಕೆ ಇಲ್ಲ ಅನ್ನೋದು ಇದರಿಂದ ಸ್ಪಷ್ಟವಾಗುತ್ತೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು.

ಡಿಸಿಎಂ ಡಿಕೆ ಶಿವಕುಮಾರ ಅವರ ಸಿಬಿಐ ತನಿಖೆ ಶಿಫಾರಸ್ಸು ವಾಪಸ್ ವಿಚಾರ ಸಂಬಂಧ ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಇದು ನೈತಿಕವಾಗಿ ಹಾಗೂ ಕಾನೂನಾತ್ಮಕವಾಗಿ ಸರಿಯಲ್ಲ. ಸಚಿವ ಸಂಪುಟದ‌ ಈ‌ ನಿರ್ಧಾರವನ್ನ ನ್ಯಾಯಾಲಯ ತಿರಸ್ಕರಿಸಲಿದೆ ಅನ್ನೋ ವಿಶ್ವಾಸವಿದೆ. ಎಂದರು.

Latest Videos

undefined

 

ಸಿದ್ದರಾಮಯ್ಯ ಈಗ ರಾಹುಲ್ ಗಾಂಧಿ ಲೇವಲ್‌ಗೆ ಮಾತನಾಡುತ್ತಿದ್ದಾರೆ: ಪ್ರಲ್ಹಾದ್‌ ಜೋಶಿ

ಡಿಕೆ ಶಿವಕುಮಾರ ವಿರುದ್ಧ ಸೂಕ್ತ ರೀತಿಯಲ್ಲಿ ತನಿಖೆ ನಡೆಯುತ್ತೆ. ದೇಶದಲ್ಲಿ ನಾಯಾಂಗ ವ್ಯವಸ್ಥೆ ಇದೆ. ಸರ್ಕಾರದ ನಿರ್ಣಯಗಳ ವಿರುದ್ಧವಾಗಿಯೂ ನ್ಯಾಯಾಲಯಗಳು ತೀರ್ಪು ನೀಡಿವೆ. ನ್ಯಾಯಾಂಗ ವ್ಯವಸ್ಥೆ ಸಂಪೂರ್ಣವಾಗಿ ಸ್ವತಂತ್ರವಾಗಿವೆ. ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿವೆ. ಹೀಗಿರುವಾಗ ದೋಷಾರೋಪ ಪಟ್ಟಿ ಸಲ್ಲಿಸುವ ಹಂತದಲ್ಲಿ ಶಿಫಾರಸ್ಸು ವಾಪಸ್ ಪಡೆದಿರುವುದು ಸರಿಯಲ್ಲ. ಸಂಬಂಧಿಸಿದ ಏಜೆನ್ಸಿಗಳು ಆರೋಪಪಟ್ಟಿಯನ್ನ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಈಗಾಗಲೇ ರಾಜ್ಯ ಸರ್ಕಾರ ಅನುಮತಿ ಕೊಟ್ಟಿದೆ. ದೋಷಾರೋಪ ಪಟ್ಟಿ ಸಲ್ಲಿಕೆಯ ಹಂತದಲ್ಲಿರುವುದರಿಂದ ಟೆಕ್ನಿಕಲ್ ಗ್ರೌಂಡ್ಸ್ ಮೇಲೆ ಹೋಗೋದಿಲ್ಲ. ಒಂದುವೇಳೆ ಅದು ತಪ್ಪಾಗಿದ್ದರೆ ನ್ಯಾಯಾಲಯಕ್ಕೆ ಹೋಗಲಿ. ಇದರಲ್ಲಿ ಆದ್ರೆ ರಾಜಕೀಯ ಅಧಿಕಾರ ನಡೆಸೋದು ಸರಿಯಲ್ಲ ಎಂದರು.

ಬಿಜೆಪಿ ಟೀಕಿಸಲು ಪ್ರಿಯಾಂಕ್ ಖರ್ಗೆಗೆ ನೈತಿಕತೆ ಇಲ್ಲ: ಎಂ.ಪಿ.ರೇಣುಕಾಚಾರ್ಯ

ಯಾವ ಸಂಪುಟದಲ್ಲಿ ಡಿಕೆ ಶಿವಕುಮಾರ ಉಪಮುಖ್ಯಮಂತ್ರಿಯಾಗಿದ್ದಾರೆ. ಆ ಸಂಪುಟದಿಂದ ಅವರನ್ನ ನಾಮಕೇವಾಸ್ತೇ ಒಂದು‌ ದಿನದ ಮಟ್ಟಿಗೆ ಹೊರಗೆ ಇಟ್ಟು ಶಿಫಾರಸ್ಸು ವಾಪಸ್ ಪಡೆಯುವುದರ ಅರ್ಥವೇನು? ಇದು ಏನನ್ನು ಸೂಚಿಸುತ್ತದೆ? ಮಾತುಮಾತಿಗೂ ಸಂವಿಧಾನದ ಬಗ್ಗೆ ಮಾತಾನಾಡುತ್ತಾರೆ. ವಾಸ್ತವವಾಗಿ ಕಾಂಗ್ರೆಸ್ ಸರ್ಕಾರಕ್ಕೆ ನ್ಯಾಯಾಂಗ ವ್ಯವಸ್ಥೆಯ ಮೇಲೆ ನಂಬಿಕೆ ಇಲ್ಲ ಅನ್ನೋದು ಇದರಿಂದ ಸ್ಪಷ್ಟವಾಗಿದೆ ಎಂದು ಟೀಕಿಸಿದರು.

click me!