ಮಂತ್ರಿಗಿರಿ ತಪ್ಪಿಸಲು ಡಿಕೆಶಿ ನಿರಾಧಾರ ಆರೋಪ: ಯೋಗೇಶ್ವರ್‌

Kannadaprabha News   | Asianet News
Published : Aug 01, 2020, 11:35 AM ISTUpdated : Aug 01, 2020, 11:45 AM IST
ಮಂತ್ರಿಗಿರಿ ತಪ್ಪಿಸಲು ಡಿಕೆಶಿ ನಿರಾಧಾರ ಆರೋಪ: ಯೋಗೇಶ್ವರ್‌

ಸಾರಾಂಶ

ಇನ್ನು ಕೆಲವೇ ದಿನಗಳಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸಚಿವ ಸಂಪುಟವನ್ನು ವಿಸ್ತರಣೆ ಮಾಡಲಿದ್ದಾರೆ ಎಂಬ ಸುಳಿವನ್ನು ಅರಿತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ನನಗೆ ಸಚಿವ ಪದವಿ ನೀಡುವುದನ್ನು ತಪ್ಪಿಸಲು ದುರುದ್ದೇಶದಿಂದ ನಿರಾಧಾರ ಆರೋಪ ಮಾಡಿದ್ದಾರೆ ಎಂದು ಆಡಳಿತಾರೂಢ ಬಿಜೆಪಿಯ ನೂತನ ವಿಧಾನಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್‌ ಕಿಡಿಕಾರಿದ್ದಾರೆ.

ಬೆಂಗಳೂರು(ಆ.01): ಇನ್ನು ಕೆಲವೇ ದಿನಗಳಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸಚಿವ ಸಂಪುಟವನ್ನು ವಿಸ್ತರಣೆ ಮಾಡಲಿದ್ದಾರೆ ಎಂಬ ಸುಳಿವನ್ನು ಅರಿತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ನನಗೆ ಸಚಿವ ಪದವಿ ನೀಡುವುದನ್ನು ತಪ್ಪಿಸಲು ದುರುದ್ದೇಶದಿಂದ ನಿರಾಧಾರ ಆರೋಪ ಮಾಡಿದ್ದಾರೆ ಎಂದು ಆಡಳಿತಾರೂಢ ಬಿಜೆಪಿಯ ನೂತನ ವಿಧಾನಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್‌ ಕಿಡಿಕಾರಿದ್ದಾರೆ.

ಬಿಜೆಪಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ನನಗೆ ವಿಧಾನಪರಿಷತ್‌ ಸ್ಥಾನ ಹಾಗೂ ಸಚಿವ ಸ್ಥಾನ ನೀಡುವ ಬಗ್ಗೆ ಆರು ತಿಂಗಳ ಹಿಂದೆಯೇ ರಾಷ್ಟ್ರೀಯ ಹಾಗೂ ರಾಜ್ಯ ಘಟಕದ ನಾಯಕರು ಸ್ಪಷ್ಟಭರವಸೆ ನೀಡಿದ್ದರು ಎಂದೂ ಅವರು ಹೇಳಿದ್ದಾರೆ.

ಜೆಎನ್‌ಯು ಕನ್ನಡ ಪೀಠ ರದ್ದಿಲ್ಲ: ಸಚಿವ ರವಿ ಸ್ಪಷ್ಟನೆ

ಇಷ್ಟೆಲ್ಲ ಇರುವಾಗ 30 ತಿಂಗಳ ನಂತರ ಬರಲಿರುವ ವಿಧಾನಸಭೆ ಚುನಾವಣೆಗೆ ಟಿಕೆಟ್‌ ನೀಡುವಂತೆ ನಾನು ಡಿ.ಕೆ.ಶಿವಕುಮಾರ್‌ ಮನೆಗೆ ಹೋಗಿ ಏಕೆ ಟಿಕೆಟ್‌ ಕೇಳಲಿ? ಶಿವಕುಮಾರ್‌ ಅವರ ಹಸಿ ಸುಳ್ಳನ್ನು ಮೂರ್ಖರೂ ನಂಬುವುದಿಲ್ಲ, ಇನ್ನು ಜನಸಾಮಾನ್ಯರು ನಂಬುವ ಪ್ರಶ್ನೆ ಉದ್ಭವಿಸುವುದೇ ಇಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿ.ಕೆ. ಸಹೋದರರು ಬಿಜೆಪಿ, ರಾಜ್ಯ ಸರ್ಕಾರ ಹಾಗೂ ನನ್ನ ನಡುವೆ ವಿಷ ಬೀಜ ಬಿತ್ತುವ ವಿಫಲ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಅವರು ಅದರಲ್ಲಿ ಯಶಸ್ವಿಯಾಗುವುದಿಲ್ಲ. ಒಂದು ವೇಳೆ ಶಿವಕುಮಾರ್‌ ಮಾಧ್ಯಮಗಳ ಎದುರು ಹೇಳಿರುವುದು ನಿಜವಾದರೆ ಅದನ್ನು ಸಾಬೀತು ಮಾಡಲು ಅವರ ಮನೆ ತುಂಬಾ ಹಾಗೂ ರಸ್ತೆಯಲ್ಲಿ ಕ್ಯಾಮರಾಗಳನ್ನು ಹಾಕಲಾಗಿದೆ. ದಯವಿಟ್ಟು ಅವರು ಸಾಕ್ಷಿಯನ್ನು ರಾಜ್ಯದ ಜನತೆ ಮುಂದೆ ಇಡಲಿ ಎಂದು ಯೋಗೇಶ್ವರ್‌ ಒತ್ತಾಯಿಸಿದ್ದಾರೆ.

ರೌಡಿಶೀಟರ್ ಬರ್ಬರ ಹತ್ಯೆ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಇನ್ನು ಮುಂದೆ ಇಂತಹದೇ ಆರೋಪಗಳನ್ನು ಮಾಡುವುದು ಮುಂದುವರಿಸಿದರೆ ಬೆಂಗಳೂರು ಹಾಗೂ ರಾಮನಗರದಲ್ಲಿ ಸುದ್ದಿಗೋಷ್ಠಿ ಕರೆದು ಅವರ ರಾಜಕೀಯ ಜೀವನದ ಬಗ್ಗೆ ರಾಜ್ಯದ ಜನತೆ ಮುಂದೆ ಹೇಳಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ
ಬಿಡಿಎ ಸೈಟ್ ತಗೊಂಡ್ರೆ ಚಿಪ್ಪೇ ಗತಿ; ಕೆಂಪೇಗೌಡ ಲೇಔಟ್ ಸೈಟ್ ತಗೊಂಡು 10 ವರ್ಷವಾದ್ರೂ ಸೈಟೂ ಇಲ್ಲ, ಸಾಲನೂ ಸಿಗ್ತಿಲ್ಲ!