
ಬೆಂಗಳೂರು (ಜು.21) ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜ್ವರದಿಂದ ಬಳಲಿದ್ದಾರೆ. ತೀವ್ರ ಜ್ವರದಿಂದ ಬಳಲಿದ ಡಿಕೆ ಶಿವಕುಮಾರ್‌ಗೆ ವೈದ್ಯರು ಕನಿಷ್ಠ ಮೂರು ದಿನಗಳ ವಿಶ್ರಾಂತಿ ಸೂಚಿಸಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್ ಎಲ್ಲಾ ಕಾರ್ಯಕ್ರಮ ರದ್ದುಗೊಳಿಸಿದ್ದಾರೆ. ಈ ಕುರಿತು ಅಧಿಕೃತ ಮಾಹಿತಿ ನೀಡಿದ್ದಾರೆ. ಇತ್ತ ಡಿಕೆ ಶಿವಕುಮಾರ್‌ಗೆ ಕರೆ ಮಾಡಿದ ಕಾಂಗ್ರೆಸ್ ಉಸ್ತವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆರರೋಗ್ಯ ವಿಚಾರಿಸಿದ್ದಾರೆ. ಶೀಘ್ರ ಚೇತರಿಕೆಗೆ ಪಾರ್ಥಿಸಿದ್ದಾರೆ.
ಯಾರನ್ನೂ ಭೇಟಿಯಾಗಲು ಸಾಧ್ಯವಾಗುತ್ತಿಲ್ಲ
ನಾಳೆಯಿಂದ ಮೂರು ದಿನಗಳ ಕಾಲ ಯಾರನ್ನೂ ಭೇಟಿ ಆಗಲು ಸಾಧ್ಯವಾಗುತ್ತಿಲ್ಲ. ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಯಾರನ್ನೂ ಭೇಟಿ ಆಗಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ವಿಷಾದಿಸುತ್ತೇನೆ. ಯಾರೂ ತಪ್ಪು ತಿಳಿಯಬಾರದು ಎಂದು ಡಿಕೆ ಶಿವಕುಮಾರ್ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಕರೆ ಮಾಡಿ ಆರೋಗ್ಯ ವಿಚಾರಿಸಿದ ಸುರ್ಜೇವಾಲ
ಡಿಕೆ ಶಿವಕುಮಾರ್‌ಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದೇನೆ. ಡಿಕೆ ಶಿವಕುಮಾರ್ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಜ್ವರದಿಂದ ಬಳಲಿದ್ದಾರೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷರು, ಉಪ ಮುಖ್ಯಮಂತ್ರಿಗಳು ಶೀಘ್ರದಲ್ಲೇ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಇಷ್ಟೇ ಅಲ್ಲ ಶೀಘ್ರದಲ್ಲೇ ಸಾರ್ವಜನಿಕ ಸೇವೆಯಲ್ಲಿ ತೊಡಗಿಕೊಳ್ಳುವಂತಾಗಲಿ ಎಂದು ಸುರ್ಜೇವಾಲ ಎಕ್ಸ್ ಮೂಲಕ ಹೇಳಿದ್ದಾರೆ.
ದೆಹಲಿ ಪ್ರವಾಸ ರದ್ದು ಮಾಡುತ್ತಾರಾ ಡಿಕೆಶಿ
ಕಳೆದ ಕೆಲ ದಿನಗಳಿಂದ ಡಿಕೆ ಶಿವಕುಮಾರ್ ಜ್ವರದಿಂದ ಬಳಲಿದ್ದಾರೆ. ಇದೀಗ ಡಿಕೆ ಶಿವಕುಮಾರ್ ಸ್ವತಃ ಮೂರು ದಿನ ಯಾವುದೇ ಸಾರ್ವಜನಕ ಕಾರ್ಯಕ್ರಮ, ಭೇಟಿ, ಪಕ್ಷದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಜುಲೈ 25ರಂದು ದೆಹಲಿಗೆ ತೆರಳುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದರು. ಎಂಎಲ್ ಸಿ ,ಬೋರ್ಡ್ ಚೇರ್ಮನ್ ಆಯ್ಕೆ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚಿಸುತ್ತೇವೆ ಎಂದಿದ್ದರು. ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರೂ ದೆಹಲಿ ಗೆ ತೆರಳಿ ಹೈಕಮಾಂಡ್ ಭೇಟಿಯಾಗವುದಾಗಿ ಹೇಳಿದ್ದರು. ಇದೀಗ ವಿಶ್ರಾಂತಿಗೆ ಜಾರಿರುವ ಕಾರಣ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ರದ್ದಗೊಳಿಸುವ ಸಾಧ್ಯತೆ ಹೆಚ್ಚಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ