
ಬೆಂಗಳೂರು (ಫೆ.19) : ನಗರದ ಅಭಿವೃದ್ಧಿಯ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೂರದೃಷ್ಟಿ ಹೊಂದಿದ್ದು, ನಗರದ ಬೆಳವಣಿಗೆ ತಮ್ಮದೇ ಆದ ಕೊಡುಗೆ ನೀಡುತ್ತಾರೆ ಎಂಬ ನಂಬಿಕೆ ಇದೆ ಎಂದು ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಹೇಳಿದ್ದಾರೆ.
ಭಾನುವಾರ ಆಯೋಜಿಸಿದ್ದ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನ ಬೆಳವಣಿಗೆಯನ್ನು ತುಂಬಾ ಹತ್ತಿರದಿಂದ ಉಪ ಮುಖ್ಯಮಂತ್ರಿಗಳು ನೋಡಿದ್ದಾರೆ. ಬೆಂಗಳೂರಿನ ಅಭಿವೃದ್ಧಿಗೆ ಡಿಸಿಎಂ ಕೊಡುಗೆ ನೀಡುವುದರಲ್ಲಿ ಅನುಮಾನವಿಲ್ಲ ಎಂದರು.
ಬಿಜೆಪಿಯವ್ರು ಬರ್ತಾ ಬರ್ತಾ ಸಂವಿಧಾನ ವಿರೋಧಿಗಳಾಗುತ್ತಿದ್ದಾರೆ: ಸಚಿವ ಎನ್‌ಎಸ್ ಬೋಸರಾಜು ಕಿಡಿ
ಸಾರ್ವಜನಿಕರ ಮನೆ ಬಾಗಿಲಿನಲ್ಲಿ ಸಮಸ್ಯೆ ಪರಿಹಾರಿಸುವ ಉತ್ತಮವಾದ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಆರ್ ಆರ್ ನಗರ ವಿಧಾನಸಭಾ ಕ್ಷೇತ್ರಕ್ಕೆ ಶಕ್ತಿ ಮೀರಿ ಕೆಲಸ ಮಾಡಿದ್ದೇವೆ. ನಿಮ್ಮ ಸಮಸ್ಯೆಗಳನ್ನು ಉಪ ಮುಖ್ಯಮಂತ್ರಿ ಅವರಿಗೆ ಸಲ್ಲಿಸಿ, ಅವರು ನಿಮ್ಮ ಸಮಸ್ಯೆಗಳನ್ನು ಪರಿಹಾರ ಮಾಡುತ್ತಾರೆಂಬ ವಿಶ್ವಾಸವಿದೆ ಎಂದು ಹೇಳಿದರು.
ದೇವರು ಅಧಿಕಾರಿಗಳ ರೂಪದಲ್ಲಿ ಬಂದು ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಅಧಿಕಾರಿಗಳು ಸರಿಯಾದ ರೀತಿಯಿಂದ ಕಾರ್ಯನಿರ್ವಹಿಸಿದರೆ ಜನಪ್ರತಿನಿದಿಗಳ ಬಳಿ ಸಾರ್ವಜನಿಕರು ಬರುವುದಿಲ್ಲ ಮತ್ತು ನೆನಪಿಸಿಕೊಳ್ಳುವುದಿಲ್ಲ ಎಂದರು.
ಸಿಎಂ ಸಿದ್ದರಾಮಯ್ಯ ವಿಶ್ವಗುರು ಬಸವಣ್ಣರಂತೆ: ಸಚಿವ ಶಿವರಾಜ ತಂಗಡಗಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ