ADR Report: ಡಿಕೆ ಶಿವಕುಮಾರ್‌ ದೇಶದ ನಂ.2 ಶ್ರೀಮಂತ ಶಾಸಕ; ಟಾಪ್‌ - 10 ರಲ್ಲಿ ರಾಜ್ಯದ ನಾಲ್ವರು ಶಾಸಕರು!

Published : Mar 20, 2025, 04:37 AM ISTUpdated : Mar 20, 2025, 07:07 AM IST
ADR Report: ಡಿಕೆ ಶಿವಕುಮಾರ್‌ ದೇಶದ ನಂ.2 ಶ್ರೀಮಂತ ಶಾಸಕ;  ಟಾಪ್‌ - 10 ರಲ್ಲಿ ರಾಜ್ಯದ ನಾಲ್ವರು ಶಾಸಕರು!

ಸಾರಾಂಶ

ಭಾರತದ ಶಾಸಕರ ಆಸ್ತಿ ವರದಿ ಬಿಡುಗಡೆಯಾಗಿದ್ದು, ಪರಾಗ್‌ ಶಾ ಮೊದಲ ಸ್ಥಾನದಲ್ಲಿದ್ದಾರೆ. ಡಿ.ಕೆ.ಶಿವಕುಮಾರ್‌ 2ನೇ ಸ್ಥಾನದಲ್ಲಿದ್ದು, ನಿರ್ಮಲ್‌ ಕುಮಾರ್‌ ಧಾರಾ ಅತ್ಯಂತ ಬಡ ಶಾಸಕರಾಗಿದ್ದಾರೆ.

ನವದೆಹಲಿ (ಮಾ.20): ಭಾರತದ ಎಲ್ಲಾ ರಾಜ್ಯಗಳ ಶಾಸಕರ ಸಂಪತ್ತಿನ ಕುರಿತ ವರದಿಯೊಂದು ಬಿಡುಗಡೆಯಾಗಿದ್ದು, ಮುಂಬೈನ ಘಾಟ್ಕೋಪರ್‌ ಕ್ಷೇತ್ರ ಪ್ರತಿನಿಧಿಸುವ ಬಿಜೆಪಿಯ ಪರಾಗ್‌ ಶಾ 3383 ಕೋಟಿ ರು. ಆಸ್ತಿಯೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಕೆಪಿಸಿಸಿ ಅಧ್ಯಕ್ಷ, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ 1413 ಕೋಟಿ ರು. ಆಸ್ತಿಯೊಂದಿಗೆ 2ನೇ ಸ್ಥಾನ ಪಡೆದಿದ್ದಾರೆ. ಇನ್ನು ಕರ್ನಾಟಕದವರೇ ಆದ ಗೌರಿಬಿದನೂರು ಕ್ಷೇತ್ರದ ಪಕ್ಷೇತರ ಶಾಸಕ ಕೆ.ಎಚ್‌.ಪುಟ್ಟಸ್ವಾಮಿ ಗೌಡ 1,267 ಕೋಟಿ ಆಸ್ತಿಯೊಂದಿಗೆ 3ನೇ ಸ್ಥಾನ ಪಡೆದಿದ್ದಾರೆ.

ಟಾಪ್‌- 10 ಪಟ್ಟಿಯಲ್ಲಿ ರಾಜ್ಯದ ನಾಲ್ವರು ।

ವಿಶೇಷವೆಂದರೆ ಟಾಪ್‌ 10 ಶ್ರೀಮಂತರಲ್ಲಿ ಕರ್ನಾಟಕದ ನಾಲ್ವರು ಸ್ಥಾನ ಪಡೆದಿದ್ದಾರೆ. ಕಾಂಗ್ರೆಸ್‌ನ ಪ್ರಿಯಾಕೃಷ್ಣ 1156 ಕೋಟಿ ರು.ನೊಂದಿಗೆ 4ನೇ ಸ್ಥಾನದಲ್ಲಿ ಮತ್ತು ಹೆಬ್ಬಾಳ ಕ್ಷೇತ್ರದ ಕಾಂಗ್ರೆಸ್‌ನ ಬೈರತಿ ಸುರೇಶ್‌ 648 ಕೋಟಿ ರು.ನೊಂದಿಗೆ 10ನೇ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: ADR analysis: ದೇಶದ 4092 ಶಾಸಕರ ಪೈಕಿ ಶೇ. 45ರಷ್ಟು ಕ್ರಿಮಿನಲ್ಸ್, ಶೇ.29ರಷ್ಟು ಗಂಭೀರ ಪ್ರಕರಣ!

ಇನ್ನು ಪಶ್ಚಿಮ ಬಂಗಾಳ ರಾಜ್ಯದ ಇಂಡಸ್‌ ಕ್ಷೇತ್ರದ ಬಿಜೆಪಿ ಶಾಸಕ ನಿರ್ಮಲ್‌ ಕುಮಾರ್‌ ಧಾರಾ ಅವರು ಅತ್ಯಂತ ಬಡ ಶಾಸಕರಾಗಿದ್ದಾರೆ. ಇವರ ಒಟ್ಟು ಆಸ್ತಿ ಕೇವಲ 1,700 ರು.

ಅಸೋಸಿಯೇಷನ್‌ ಫಾರ್‌ ಡೆಮೊಕ್ರಟಿಕ್‌ ರಿಫಾರ್ಮ್ಸ್‌ (ಎಡಿಆರ್‌) 28 ರಾಜ್ಯ, 3 ಕೇಂದ್ರಾಡಳಿತ ಪ್ರದೇಶದಲ್ಲಿನ ಒಟ್ಟು 4092 ಶಾಸಕರ ಆಸ್ತಿ ಅಧ್ಯಯನದ ಮಾಡಿ ಈ ವರದಿ ಬಿಡುಗಡೆ ಮಾಡಿದೆ.

ಕರ್ನಾಟಕ ನಂ.1:

ಕರ್ನಾಟಕದ 223 ಶಾಸಕರ ಒಟ್ಟು ಆಸ್ತಿ 14,179 ಕೋಟಿ ರು.ನಷ್ಟಿದೆ. ಈ ಮೂಲಕ ದೇಶದಲ್ಲಿ ಶಾಸಕರ ಒಟ್ಟಾರೆ ಆಸ್ತಿ ಮೌಲ್ಯದ ಪಟ್ಟಿಯಲ್ಲಿ ಕರ್ನಾಟಕ ನಂ.1 ಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿರುವ ಮಹಾರಾಷ್ಟ್ರ (286 ಶಾಸಕರು)12,424 ಕೋಟಿ ರು., ಆಂಧ್ರಪ್ರದೇಶದ (174 ಶಾಸಕರು) ಶಾಸಕರು 11, 323 ಕೋಟಿ ರು. ಒಟ್ಟಾರೆ ಆಸ್ತಿಯೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

ಕರ್ನಾಟಕ ನಂ.2:

ಇನ್ನು ಶಾಸಕರ ಸರಾಸರಿ ಆಸ್ತಿಯಲ್ಲಿ ಕರ್ನಾಟಕ ದೇಶದಲ್ಲಿ 2ನೇ ಸ್ಥಾನದಲ್ಲಿದೆ. ಆಂಧ್ರಪ್ರದೇಶದ ಶಾಸಕರು 65.07 ಕೋಟಿ ರು. ಆಸ್ತಿ ಮೂಲಕ ನಂ.1 ಸ್ಥಾನದಲ್ಲಿದ್ದಾರೆ. 63.58 ಕೋಟಿ ರು. ಸರಾಸರಿ ಆಸ್ತಿಯೊಂದಿಗೆ ಕರ್ನಾಟಕದ ಶಾಸಕರು 2ನೇ ಸ್ಥಾನದಲ್ಲಿದ್ದಾರೆ. 3ನೇ ಸ್ಥಾನದಲ್ಲಿರುವ ಮಹಾರಾಷ್ಟ್ರದ ಶಾಸಕರ ಸರಾಸರಿ ಆಸ್ತಿ 43.44 ಕೋಟಿ ರು. ಆಗಿದೆ.

ನಂ.1 ಬಿಲಿಯನೇರ್‌ ಶಾಸಕರು:

100 ಕೋಟಿ ರು.ಗಿಂತಲೂ ಹೆಚ್ಚಿನ ಆಸ್ತಿ ಹೊಂದಿದ ಅತಿ ಹೆಚ್ಚು ಶಾಸಕರು ಕರ್ನಾಟಕದಲ್ಲಿ ಇದ್ದಾರೆ. ಕರ್ನಾಟಕದ 31 ಶಾಸಕರ ಆಸ್ತಿ 100 ಕೋಟಿ ರು.ಗಿಂತಲೂ ಹೆಚ್ಚಿದೆ. ನಂತರದ ಸ್ಥಾನದಲ್ಲಿ ಆಂಧ್ರಪ್ರದೇಶ (27), ಮಹಾರಾಷ್ಟ್ರ (18 ಶಾಸಕರು) ರಾಜ್ಯಗಳಿವೆ.

ಅತಿ ಹೆಚ್ಚು ಸಾಲ:

ಅತಿ ಹೆಚ್ಚು ಸಾಲ ಹೊಂದಿರುವ ಟಾಪ್‌ 10 ಶಾಸಕರ ಪೈಕಿ ಕರ್ನಾಟಕದ ಮೂವರು ಸ್ಥಾನ ಪಡೆದಿದ್ದಾರೆ. ಪ್ರಿಯಾಕೃಷ್ಣ 881 ಕೋಟಿ ರು.ನೊಂದಿಗೆ ಮೊದಲ ಸ್ಥಾನದಲ್ಲಿ, ಡಿ.ಕೆ.ಶಿವಕುಮಾರ್‌ 245 ಕೋಟಿ ರು.ನೊಂದಿಗೆ 3ನೇ ಸ್ಥಾನ ಮತ್ತು ಬೈರತಿ ಸುರೇಶ್‌ 114 ಕೋಟಿ ರು.ಸಾಲದೊಂದಿಗೆ 10ನೇ ಸ್ಥಾನದಲ್ಲಿದ್ದಾರೆ.

ಬಿಜೆಪಿ ಶಾಸಕರ ಒಟ್ಟು ಆಸ್ತಿ3 ರಾಜ್ಯ ಬಜೆಟ್‌ಗಿಂತ ಹೆಚ್ಚು

ಬಿಜೆಪಿ ಒಟ್ಟು 1653 ಶಾಸಕರನ್ನು ಹೊಂದಿದ್ದು ಒಟ್ಟಾರೆ ಈ ಶಾಸಕರ ಆಸ್ತಿ 26,270 ಕೋಟಿ ರುಪಾಯಿ. ಇದು ಸಿಕ್ಕಿಂ, ನಾಗಾಲ್ಯಾಂಡ್‌ (23,086 ಕೋಟಿ) ಮತ್ತು ಮೇಘಾಲಯ ರಾಜ್ಯಗಳ ಒಟ್ಟಾರೆ ವಾರ್ಷಿಕ ಬಜೆಟ್‌ಗಿಂತಲೂ ಹೆಚ್ಚು. ಕಾಂಗ್ರೆಸ್‌ ಶಾಸಕರು (646 ಶಾಸಕರು) 17,357 ಕೋಟಿ ರು, ಟಿಡಿಪಿ ಶಾಸಕರು (134 ಶಾಸಕರು) 9,108 ಕೋಟಿ ರು. ಒಟ್ಟಾರೆ ಆಸ್ತಿ ಹೊಂದಿದ್ದಾರೆ.

ಇದನ್ನೂ ಓದಿ: 'ದೇಶಕ್ಕಾಗಿ ಅತ್ತೆ, ಪತಿಯನ್ನ ಕಳೆದುಕೊಂಡರು..' ಮಹಿಳಾ ದಿನಾ ಕಾರ್ಯಕ್ರಮದಲ್ಲಿ ಸೋನಿಯಾ ತ್ಯಾಗದ ಬಗ್ಗೆ ಡಿಕೆಶಿ ಭಾವುಕ ಮಾತು!

ಟಾಪ್‌ 5 ಶ್ರೀಮಂತ ಶಾಸಕರು

ಸ್ಥಾನಹೆಸರುಆಸ್ತಿ1ಪರಾಗ್ ಶಾ3383 ಕೋಟಿ ರು.2ಡಿ.ಕೆ.ಶಿವಕುಮಾರ್‌1413 ಕೋಟಿ ರು.3ಪುಟ್ಟಸ್ವಾಮಿಗೌಡ1267 ಕೋಟಿ ರು.4ಪ್ರಿಯಾಕೃಷ್ಣ1156 ಕೋಟಿ ರು.10ಬೈರತಿ ಸುರೇಶ್‌648 ಕೋಟಿ ರು.

ಅತಿ ಬಡ ಶಾಸಕಸ್ಥಾನಹೆಸರುಆಸ್ತಿ4092ನಿರ್ಮಲ್‌ ಕುಮಾರ್‌1700 ರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತನಿಗೆ ಪರಿಹಾರ ನೀಡದ ಶಿವಮೊಗ್ಗ ಡಿಸಿ ಕಚೇರಿ, ಕಾರು ಜಪ್ತಿಗೆ ಕೋರ್ಟ್ ಆದೇಶ! ಏನಿದು ಪ್ರಕರಣ?
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!