DK Shivakumar Next CM: ನವೆಂಬರ್‌ನಲ್ಲಿ ಡಿಕೆಶಿ ಮುಖ್ಯಮಂತ್ರಿ ಆಗೋದು ಖಚಿತ: ಶಿವರಾಮೇಗೌಡ

Kannadaprabha News, Ravi Janekal |   | Kannada Prabha
Published : Sep 28, 2025, 07:53 AM IST
DK Shivakumar next CM LR Shivaramegowda prediction in mandya

ಸಾರಾಂಶ

DK Shivakumar next CM:: ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರು, ಕಾಂಗ್ರೆಸ್ ಹೈಕಮಾಂಡ್‌ನ ಅಧಿಕಾರ ಹಂಚಿಕೆ ಸೂತ್ರದಂತೆ ಮುಂಬರುವ ನವೆಂಬರ್ ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗುವುದು ಗ್ಯಾರಂಟಿ ಎಂದು ಭವಿಷ್ಯ ನುಡಿದಿದ್ದಾರೆ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.

ನಾಗಮಂಗಲ(ಮಂಡ್ಯ): ಮುಂಬರುವ ನವೆಂಬರ್ ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿ ಆಗುವುದು ಗ್ಯಾರಂಟಿ ಎಂದು ಮಾಜಿ ಸಂಸದ ಹಾಗೂ ಕರ್ನಾಟಕ ಕಾಂಗ್ರೆಸ್‌ ಮಾಧ್ಯಮ ವಕ್ತಾರ ಎಲ್.ಆರ್.ಶಿವರಾಮೇಗೌಡ ಭವಿಷ್ಯ ನುಡಿದಿದ್ದಾರೆ. 

ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಡಿ.ಕೆ.ಶಿವಕುಮಾರ್ ಅವರು ಶ್ರಮಿಸಿದ್ದಾರೆ. ಡಿಕಶಿ ಮಖ್ಯಮಂತ್ರಿಯಾಗಬೇಕು ಎಂಬುದು ರಾಜ್ಯದ ಜನತೆಯ ಆಶಯವಾಗಿದೆ. ಹೈಕಮಾಂಡ್ ಸಮ್ಮುಖದಲ್ಲಿ ಆಗಿರುವ ಅಧಿಕಾರ ಹಂಚಿಕೆ ಸೂತ್ರದಂತೆ ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ಶಿವಕುಮಾರ್ ಮುಖ್ಯಮಂತ್ರಿ ಆಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಏನೇ ಆದರೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.

ಇದನ್ನೂ ಓದಿ: ಕಾವೇರಿ ಆರತಿಗೆ ಯಾರೇ ತೊಂದರೆ ಮಾಡಿದರೂ ಯೋಜನೆ ಮಾತ್ರ ನಿಲ್ಲುವುದಿಲ್ಲ: ಡಿ.ಕೆ.ಶಿವಕುಮಾರ್

ಪರ-ವಿರೋಧ ಸಾಮಾನ್ಯ:

ಕಾವೇರಿ ಆರತಿಯಂತಹ ಒಳ್ಳೆ ಕೆಲಸ ಮಾಡಲು ಸರ್ಕಾರ ಹೊರಟಾಗ ಪರ-ವಿರೋಧ ಇದ್ದೇ ಇರುತ್ತದೆ. ಕಾವೇರಿ ಪೂಜೆಯಿಂದ ರೈತರಿಗೆ ತೊಂದರೆ ಇಲ್ಲ ಎಂದರು.

ಮುಂಬರುವ ನವೆಂಬರ್ ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿ ಆಗುವುದು ಗ್ಯಾರಂಟಿ ಎಂದು ಮಾಜಿ ಸಂಸದ ಹಾಗೂ ಕರ್ನಾಟಕ ಕಾಂಗ್ರೆಸ್‌ ಮಾಧ್ಯಮ ವಕ್ತಾರ ಎಲ್.ಆರ್.ಶಿವರಾಮೇಗೌಡ ಭವಿಷ್ಯ ನುಡಿದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತನಿಗೆ ಪರಿಹಾರ ನೀಡದ ಶಿವಮೊಗ್ಗ ಡಿಸಿ ಕಚೇರಿ, ಕಾರು ಜಪ್ತಿಗೆ ಕೋರ್ಟ್ ಆದೇಶ! ಏನಿದು ಪ್ರಕರಣ?
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!