
ಬೆಂಗಳೂರು (ಅ.11): ಉತ್ತರ ಪ್ರದೇಶ (Uttara pradesh) ಲಖೀಂಪುರದಲ್ಲಿ ರೈತರ ಮಾರಣಹೋಮ ನಡೆಸಿದ ಅಪರಾಧಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರು ಇಂದು ಮೌನ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ರೈತರ (farmers) ಮೇಲೆ ವಾಹನ ಚಲಾಯಿಸಿ ಸಾಯಿಸಿದರೂ ಈವರೆಗೂ ಕ್ರಮ ಆಗಿಲ್ಲ. ಇದಕ್ಕೆ ಪ್ರಚೋದನೆ ನೀಡಿದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ (Ajay Mishra) ಅವರನ್ನು ಸಂಪುಟದಿಂದ ವಜಾಗೊಳಿಸಿಲ್ಲ. ಹೀಗಾಗಿ ಕೂಡಲೇ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಹಾಗೂ ಹತ್ಯಾಕಾಂಡಕ್ಕೆ ಸಂಬಂಧಪಟ್ಟವರನ್ನೆಲ್ಲ ಬಂಧಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ (Congress) ಮೌನ ಪ್ರತಿಭಟನೆ ಹಮ್ಮಿಕೊಂಡಿದೆ.
ಡಿಕೆಶಿ- ರಮೇಶ್ ಜಾರಕಿಹೊಳಿ ಆಪ್ತರ ಭೇಟಿ : ಕುತೂಹಲದ ನಡೆ
ನಗರದ ಕಾಂಗ್ರೆಸ್ ಭವನದ ಬಳಿ ಶಿವಕುಮಾರ್, ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಈ ವೇಳೆ ಕೇಂದ್ರ ಸರ್ಕಾರ (Central govt) ಹಾಗೂ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಮೌನ ಪ್ರತಿಭಟನೆ (Protest) ನಡೆಸಿ, ರೈತರಿಗೆ ನ್ಯಾಯ ಒದಗಿಸಲು ಒತ್ತಾಯಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬಿಎಸ್‌ವೈ ನಿಯಂತ್ರಿಸಲೆಂದೇ ಆದಾಯ ತೆರಿಗೆ ದಾಳಿ: ಡಿಕೆಶಿ
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಅವರನ್ನು ನಿಯಂತ್ರಿಸುವ ಉದ್ದೇಶದಿಂದಲೇ ಅವರ ಆಪ್ತರ ನಿವಾಸದ ಮೇಲೆ ಆದಾಯ ತೆರಿಗೆ (income Tax) ಇಲಾಖೆ ಅಧಿಕಾರಿಗಳ ದಾಳಿ ನಡೆದಿದೆ. ಇದರ ಹಿಂದೆ ಒಳ ರಾಜಕೀಯದ (politics) ಉದ್ದೇಶ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಯಡಿಯೂರಪ್ಪನವರ ಆಪ್ತ ಉಮೇಶ್ ಮನೆ ಮೇಲೆ ಐಟಿ ದಾಳಿ ನಡೆದಿದೆ. ಅಧಿಕಾರಿಗಳು, ಸಂಬಂಧ ಪಟ್ಟವರು ಅಧಿಕೃತವಾಗಿ ಹೇಳಿಕೆ ನೀಡುವವರೆಗೂ ನಾನು ಹೆಚ್ಚು ಮಾತನಾಡುವುದಿಲ್ಲ. ದಾಳಿಯ ಹಿಂದೆ ಒಳ ರಾಜಕೀಯದ ಉದ್ದೇಶ ಇದ್ದೇ ಇದೆ ಎಂದು ಸ್ಪಷ್ಟಪಡಿಸಿದರು.
ಯಡಿಯೂರಪ್ಪ ನಿಯಂತ್ರಿಸಲು ಈ ದಾಳಿ ಮಾಡಲಾಗಿದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾರನ್ನಾದರೂ ಕಂಟ್ರೋಲ…ಗೆ ತರಬೇಕು ಎಂಬ ಉದ್ದೇಶದಿಂದಲೇ ದಾಳಿ ಮಾಡಲಾಗುತ್ತಿದೆ. ಹೀಗಾಗಿ ಐಟಿ ದಾಳಿ ಹಿಂದೆ ಆಂತರಿಕ ರಾಜಕೀಯ ಬೇಕಾದಷ್ಟುಇದೆ. ಕೆಲ ಸಚಿವರು ದೆಹಲಿಗೆ ಹೋಗಿ ನಮ್ಮ ಮನೆಗೆ ಬರಬೇಡಿ ಎಂದು ಹೇಳಿದ್ದಾರೆ. ಕೆಲವರ ರಕ್ಷಣೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ