
ಬೆಂಗಳೂರು (ಏ.03): ಕೊರೋನಾ ಎರಡನೇ ಅಲೆ ಹೆಚ್ಚುತ್ತಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಗಳು ಎಲ್ಲರಿಗೂ ಅನ್ವಯವಾಗಬೇಕು. ಅದನ್ನು ಬಿಟ್ಟು ತಮಗೆ ಬೇಕಾದಾಗ ಮಾರ್ಗಸೂಚಿ ಬಿಡುಗಡೆ ಮಾಡಿ ಬೇಡವಾದಾಗ ಅದನ್ನು ಸಡಿಲ ಮಾಡಬಾರದು. ಆ ರೀತಿ ಮಾಡಿದರೆ ನಾವು ರಾಜಕೀಯ ಹೋರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಶುಕ್ರವಾರ ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಮಾರ್ಗಸೂಚಿ ಮಾಡಲಿ. ಅದು ಅವರಿಗೂ ಸೇರಿದಂತೆ ಎಲ್ಲರಿಗೂ ಅನ್ವಯವಾಗುವಂತೆ ಮಾಡಲಿ.
ರಾಸಲೀಲೆ ಸಿಡಿ ಕೇಸ್ : ಡಿಕೆಶಿ-ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಶುರುವಾಯ್ತು ಸಂಕಷ್ಟ..!?
ಅವರಿಗೆ ಬೇಕಾದವರಿಗೆ ಅನುಕೂಲವಾಗುವ ರೀತಿಯಲ್ಲಿ ಮಾರ್ಗಸೂಚಿ ಮಾಡುವುದು ಬೇಡ. ಇದು ಪ್ರಜಾಪ್ರಭುತ್ವದ ಹಕ್ಕನ್ನು ಮೊಟಕುಗೊಳಿಸುವ ಪ್ರಯತ್ನ. ಜನರ ಸುರಕ್ಷತೆ ಹಾಗೂ ಒಳ್ಳೆಯದಕ್ಕಾಗಿ ಕಾನೂನು ಮಾಡಲಿ, ನಾವು ಬೇಡ ಎನ್ನುವುದಿಲ್ಲ. ಆದರೆ ಆ ಕಾನೂನನ್ನು ಎಲ್ಲರೂ ಪಾಲಿಸಬೇಕು. ಅವರಿಗೆ ಬೇಕಾದಾಗ ಕಾನೂನು ಸಡಿಲ ಮಾಡುವುದು ಬೇಡವಾದಾಗ ಕಠಿಣ ಮಾಡುವುದು ಸರಿಯಲ್ಲ. ಆ ರೀತಿ ಮಾರ್ಗಸೂಚಿ ಮಾಡಿದರೆ ನಾವು ನಮ್ಮದೇ ಆದ ರಾಜಕೀಯ ಹೋರಾಟ ಮಾಡುತ್ತೇವೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ