ಕಾವೇರಿ ಆರತಿಗೆ ಗೀತೆ ರಚನೆಗೆ ಹಂಸಲೇಖ, ಸಾಧು, ಜನ್ಯಗೆ ಡಿಕೆಶಿ ಮನವಿ

Kannadaprabha News   | Kannada Prabha
Published : May 24, 2025, 10:16 AM IST
Karnataka Dy CM DK Shivakumar (Photo/ANI)

ಸಾರಾಂಶ

ಕಾವೇರಿ ಆರತಿಗಾಗಿ ನದಿಯ ಪರಂಪರೆ, ಜಲ ಶ್ರೀಮಂತಿಕೆಯನ್ನು ಒಳಗೊಂಡ ಗೀತ ರಚನೆ ಮಾಡಿ ಸಂಗೀತ ಸಂಯೋಜನೆ ಮಾಡುವಂತೆ ಖ್ಯಾತ ಸಂಗೀತ ನಿರ್ದೇಶಕರಾದ ಹಂಸಲೇಖ, ಸಾಧುಕೋಕಿಲ ಹಾಗೂ ಅರ್ಜುನ್‌ ಜನ್ಯ ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಪತ್ರ ಬರೆದಿದ್ದಾರೆ.

ಬೆಂಗಳೂರು (ಮೇ.24): ಕಾವೇರಿ ಆರತಿಗಾಗಿ ನದಿಯ ಪರಂಪರೆ, ಜಲ ಶ್ರೀಮಂತಿಕೆಯನ್ನು ಒಳಗೊಂಡ ಗೀತ ರಚನೆ ಮಾಡಿ ಸಂಗೀತ ಸಂಯೋಜನೆ ಮಾಡುವಂತೆ ಖ್ಯಾತ ಸಂಗೀತ ನಿರ್ದೇಶಕರಾದ ಹಂಸಲೇಖ, ಸಾಧುಕೋಕಿಲ ಹಾಗೂ ಅರ್ಜುನ್‌ ಜನ್ಯ ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಪತ್ರ ಬರೆದಿದ್ದಾರೆ. ಮೂವರು ಸಂಗೀತ ನಿರ್ದೇಶಕರಿಗೆ ಪ್ರತ್ಯೇಕವಾಗಿ ಪತ್ರ ಬರೆದಿರುವ ಶಿವಕುಮಾರ್‌ ಅವರು, ರಾಜ್ಯ ಸರ್ಕಾರ ಕಾವೇರಿ ಆರತಿಯನ್ನು ಸಾಂಸ್ಕೃತಿಕವಾಗಿ ಮತ್ತು ಸಾಹಿತ್ಯಾತ್ಮಕವಾಗಿ ಶ್ರೀಮಂತಗೊಳಿಸುವ ಉದ್ದೇಶ ಹೊಂದಿದೆ. ಈ ಹಿನ್ನೆಲೆಯಲ್ಲಿ ಜಾನಪದ ಸೊಬಗು, ಧಾರ್ಮಿಕತೆಯ ಮೆರಗು ಹಾಗೂ ಭಕ್ತಿಭಾವದಿಂದ ಕೂಡಿರುವ ಗೀತೆ ರಚಿಸುವ ಅಗತ್ಯವಿದೆ.

ಆರತಿಯ ಮಹಿಮೆಯನ್ನು ಮೇಳೈಸುವ ಅದ್ಭುತವಾದ ಸಾಹಿತ್ಯ ಮತ್ತು ಸಂಗೀತ ಸಂಯೋಜನೆ ಮಾಡಬೇಕು ಎಂದು ಕೋರಿದ್ದಾರೆ. ಗೀತೆಯು ಬದಲಾದ ಕಾಲಘಟ್ಟಕ್ಕೆ ಹೊಂದಿಕೊಳ್ಳುವಂತೆ, ವರ್ಣರಂಜಿತವಾಗಿ ಮೂಡಿಬರಬೇಕು. ಕಾವೇರಿ ಮಾತೆಯ ಸಂಪೂರ್ಣ ಚಿತ್ರಣ ಕಣ್ಣಿಗೆ ಕಟ್ಟುವಂತಿರಬೇಕು. ಕಾವೇರಿ ಮಾತೆಯ ಪರಂಪರೆ ಉಳಿಸುವ ಜೊತೆಗೆ, ಜಲ ಶ್ರೀಮಂತಿಕೆ ಸಹಿತ ಕಾವೇರಿ ವೈಭವವನ್ನು ದೇಶ-ವಿದೇಶಗಳಿಗೆ ಹಾಡು ಮತ್ತು ಸಂಗೀತದ ಮೂಲಕ ಸಾರುವಂತಿರಬೇಕು ಎಂದು ಗೀತೆಯಲ್ಲಿ ಇರಬೇಕಾದ ಅಂಶಗಳ ಬಗ್ಗೆ ವಿವರಿಸಿದ್ದಾರೆ.

ಕಾವೇರಿ ಆರತಿ ವೇಳೆ ಪ್ರಸಾರ: ರಚನೆಯಾದ ಗೀತೆಯನ್ನು ಧ್ವನಿ ಸುರಳಿ ರೂಪದಲ್ಲಿ ತಂದು, ಆಯ್ದ ಗೀತೆಯನ್ನು ಕಾವೇರಿ ಆರತಿ ಸಂದರ್ಭದಲ್ಲಿ ಪ್ರಸಾರ ಮಾಡಲಾಗುವುದು ಎಂದು ಡಿ.ಕೆ.ಶಿವಕುಮಾರ್ ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಸಮರೋಪಾದಿಯಲ್ಲಿ ಸಿದ್ಧತೆ: ಮಂಡ್ಯದ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿಗಾಗಿ ತೇಲುವ ಸೇತುವೆ, ವೀಕ್ಷಕರ ಗ್ಯಾಲರಿ, ಲೇಸರ್ ಶೋದಂತ ಪ್ರದರ್ಶನ ಏರ್ಪಡಿಸುವುದು ಸೇರಿ ಸಕಲ ಸಿದ್ಧತೆ ಎಲ್ಲ ಇಲಾಖೆಗಳು ಸಮರೋಪಾದಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಕಾವೇರಿ ಆರತಿ ಉನ್ನತ ಮಟ್ಟದ ಸಮಿತಿ ನಿರ್ಧರಿಸಿದೆ. ಕಾವೇರಿ ಆರತಿ ಕುರಿತು ಸರ್ಕಾರ ರಚಿಸಿರುವ ಉನ್ನತ ಮಟ್ಟದ ಸಮಿತಿ ನಡೆಸಿದ ಮೊದಲ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಲಾಯಿತು. ದಸರಾದ ಮೊದಲ ದಿನ ಅ.2ರಂದು ಕಾವೇರಿ ನಡೆಸಬೇಕಿದೆ. ಸಿದ್ಧತೆಗೆ ಸಮಿತಿಗೆ ಕೇವಲ ನೂರು ದಿನಗಳು ಬಾಕಿಯಿದ್ದು ಸಮರೋಪಾದಿಯಲ್ಲಿ ಸಂಬಂಧಪಟ್ಟ ಇಲಾಖೆಗಳು ಸಂಘಟಿತವಾಗಿ ಕಾರ್ಯನಿರ್ವಹಿಸಬೇಕಿದ್ದು, ಮಂದಿನ ಸಭೆಯನ್ನು ಮಂಡ್ಯದಲ್ಲಿ ಆಯೋಜಿಸಲು ತೀರ್ಮಾನಿಸಲಾಯಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್