
ಬೆಂಗಳೂರು (ಫೆ.6) : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಅವರ ಮಕ್ಕಳ ಕುರಿತ ಸುದ್ದಿ ವಿಡಿಯೋವನ್ನು ಅನುಮತಿ ಇಲ್ಲದೆ ಯುಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದಡಿ ಎರಡು ಯುಟ್ಯೂಬ್ ಚಾನೆಲ್‌ಗಳ ವಿರುದ್ಧ ಕೇಂದ್ರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸದಾಶಿವನಗರ ನಿವಾಸಿ ಡಿ.ಉಮೇಶ್ ಎಂಬುವವರು ಈ ಸಂಬಂಧ ನೀಡಿದ ದೂರು ಆಧರಿಸಿ ಸೈಬರ್ ಕ್ರೈಂ ಠಾಣೆ ಪೊಲೀಸರು, ‘ಇಂಡಿಯಾ ರಿಪೋಟ್ಸ್‌ರ್’ ಮತ್ತು ‘ಬಿ4ಯುಕನ್ನಡ’ ಹೆಸರಿನ ಯುಟ್ಯೂಬ್ ಚಾನೆಲ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
‘ಇಂಡಿಯಾ ರಿಪೋರ್ಟ್ ಯುಟ್ಯೂಬ್ ಚಾನೆಲ್(India reports youtube channel)ನಲ್ಲಿ ‘ಇವರ ಮಕ್ಕಳು ಮೀಡಿಯಾ ಮುಂದೆ ಬರೋದಿಲ್ಲ ಯಾಕೆ? ಡಿ.ಕೆ.ಶಿವಕುಮಾರ್(DK Shivakumar) ಕುಟುಂಬ/ ಕರ್ನಾಟಕ ಕಾಂಗ್ರೆಸ್/ ಇಂಡಿಯಾ ವರದಿ’ ಎಂಬ ಶೀರ್ಷಿಕೆ ನೀಡಲಾಗಿದೆ. ಮತ್ತೊಂದು ಯುಟ್ಯೂಬ್ ಚಾನೆಲ್ ಬಿ4ಯುಕನ್ನಡದಲ್ಲಿ ‘ಹೂ ಹೀಸ್ ಆಭರಣ ಡಿ.ಕೆ.ಶಿವಕುಮಾರ್-ಕೆಪಿಸಿಸಿ’ ಎಂಬ ಶೀರ್ಷಿಕೆಯ ವಿಡಿಯೋ ಅಪ್‌ಲೋಡ್ ಮಾಡಲಾಗಿದೆ. ಈ ವಿಡಿಯೋದಲ್ಲಿ ಡಿ.ಕೆ.ಶಿವಕುಮಾರ್ ಅವರ ಮಗಳು ಮತ್ತು ಮಗನ ಚಿತ್ರವಿದೆ. ಹೀಗಾಗಿ ಅನುಮತಿ ಇಲ್ಲದೆ ವಿಡಿಯೋವನ್ನು ಯುಟ್ಯೂಬ್‌ಗೆ ಅಪ್‌ಲೋಡ್ ಮಾಡಿರುವ ಅಪರಿಚಿತ ವ್ಯಕ್ತಿಗಳನ್ನು ಪತ್ತೆಹಚ್ಚಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಆ ವಿಡಿಯೋಗಳನ್ನು ಡಿಲೀಟ್ ಮಾಡಿಸಬೇಕು’ ಎಂದು ದೂರಿನಲ್ಲಿ ಕೋರಲಾಗಿದೆ. ಈ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಅಂದರೆ ಕರ್ನಾಟಕ ಪ್ರದೇಶ ಸಿಡಿ ಕಂಪನಿ ಅಧ್ಯಕ್ಷ: ಲಖನ್ ಜಾರಕಿಹೊಳಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ