
ಬೆಂಗಳೂರು(ಏ.08): ಕೊರೋನಾ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಕೋಮು ಭಾವನೆಗೆ ಧಕ್ಕೆ ತರುವಂಥ ಹೇಳಿಕೆಗಳನ್ನು ನೀಡಬಾರದು ಎಂಬ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಸೂಚನೆಯನ್ನು ಎಲ್ಲ ಮುಖಂಡರೂ ಪಾಲಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ.
ಮಂಗಳವಾರ ’ಕನ್ನಡಪ್ರಭ’ದೊಂದಿಗೆ ಮಾತನಾಡಿದ ಅವರು, ‘ಸದ್ಯ ನಮ್ಮ ಗುರಿ ರಾಷ್ಟ್ರವನ್ನು ಕಾಡುತ್ತಿರುವ ಕೊರೋನಾ ಮಹಾಮಾರಿಯನ್ನು ಹೊಡೆದೋಡಿಸುವುದು ಎಂದು ಹೇಳಿದರು. ನಮ್ಮ ಯುದ್ಧ ಕೊರೋನಾ ವಿರುದ್ಧ. ಈ ಹಂತದಲ್ಲಿ ಆ ಗುರಿಯ ಹಾದಿ ತಪ್ಪುವಂಥ ಹೇಳಿಕೆಗಳನ್ನು ಯಾರೂ ನೀಡಬಾರದು. ಇದಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಅಧ್ಯಕ್ಷರು ನೀಡಿರುವ ನಿರ್ದೇಶನವನ್ನು ಪಕ್ಷದ ಜನಪ್ರತಿನಿಧಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಪಾಲಿಸಬೇಕು. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕೈಬಲಪಡಿಸಬೇಕು’ ಎಂದರು.
ಕೊರೋನಾಕ್ಕೆ ಕೋಮು ಬಣ್ಣ ಬೇಡ: ಬಿಜೆಪಿಗರಿಗೆ ನಡ್ಡಾ ಎಚ್ಚರಿಕೆ!
ಅತ್ತ ಬಜೆಇ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಕೂಡಾ ಕೊರೋನಾ ವೈರಸ್ ವಿಚಾರದಲ್ಲಿ ಧರ್ಮವನ್ನು ತರಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ