ಕರ್ನಾಟಕದಲ್ಲಿ ಕ್ಯಾನ್ಸ‌ರ್ ಹೆಚ್ಚಳ, ಕಾರಣ ಕುರಿತು ಅಧ್ಯಯನ ನಡೆಸಿ: ಸಿಎಂ ಸಿದ್ದರಾಮಯ್ಯ

Published : Jan 10, 2025, 09:36 AM ISTUpdated : Jan 10, 2025, 09:37 AM IST
ಕರ್ನಾಟಕದಲ್ಲಿ ಕ್ಯಾನ್ಸ‌ರ್ ಹೆಚ್ಚಳ, ಕಾರಣ ಕುರಿತು ಅಧ್ಯಯನ ನಡೆಸಿ: ಸಿಎಂ ಸಿದ್ದರಾಮಯ್ಯ

ಸಾರಾಂಶ

ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುತ್ತಿವೆ. ಇದಕ್ಕೆ ಕಾರಣ ತಿಳಿಯಲು ಸೂಕ್ತ ಅಧ್ಯಯನ ನಡೆಸುವ ಅಗತ್ಯವಿದೆ. ಸಮಗ್ರ ಅಧ್ಯಯನ ನಡೆಸಿ ವರದಿ ಸಲ್ಲಿಸಿ. ವರದಿ ಬಂದ ಬಳಿಕ ಕ್ಯಾನ್ಸ‌ರ್ ಪ್ರಕರಣಗಳ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಗಮನ ಹರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ 

ಬೆಂಗಳೂರು(ಜ.10): ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚಳವಾಗುವ ಹಿಂದಿನ ಕಾರಣ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಿ. ಕ್ಯಾನ್ಸರ್‌ಗೆ ಅಂತಾರಾಷ್ಟ್ರೀಯ ಗುಣಮಟ್ಟದ ಚಿಕಿತ್ಸೆ ರಾಜ್ಯದಲ್ಲೇ ಲಭ್ಯವಾಗುವಂತೆ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರಿಗೆ ಸೂಚಿಸಿದ್ದಾರೆ. 

ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ನಡೆದ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ಸೂಚನೆ ನೀಡಿದರು. ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುತ್ತಿವೆ. ಇದಕ್ಕೆ ಕಾರಣ ತಿಳಿಯಲು ಸೂಕ್ತ ಅಧ್ಯಯನ ನಡೆಸುವ ಅಗತ್ಯವಿದೆ. ಸಮಗ್ರ ಅಧ್ಯಯನ ನಡೆಸಿ ವರದಿ ಸಲ್ಲಿಸಿ. ವರದಿ ಬಂದ ಬಳಿಕ ಕ್ಯಾನ್ಸ‌ರ್ ಪ್ರಕರಣಗಳ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಗಮನ ಹರಿಸಿ. ಕ್ಯಾನ್ಸರ್ ಚಿಕಿತ್ಸೆಗಾಗಿ ನಮ್ಮ ರಾಜ್ಯದ ಜನ ಬೇರೆ ರಾಜ್ಯ, ದೇಶಗಳಿಗೆ ಹೋಗುವ ಸ್ಥಿತಿ ನಿರ್ಮಾಣವಾಗಬಾರದು. ರಾಜ್ಯದಲ್ಲೇ ಅಂತಾರಾಷ್ಟ್ರೀಯ ಗುಣಮಟ್ಟದ ಚಿಕಿತ್ಸೆ ಲಭ್ಯವಾಗುವಂತೆ ಕ್ರಮ ವಹಿಸಿ ಎಂದು ಸೂಚಿಸಿದರು. 

54ರ ಹರೆಯದ ಸೈಬರ್ ಸೆಕ್ಯೂರಿಟಿ ತಜ್ಞ ಅಮಿತ್ ಯೊರನ್ ಕ್ಯಾನ್ಸರ್‌ಗೆ ಬಲಿ!

ಸಭೆ ಆರಂಭದಲ್ಲಿ ಸಚಿವ ಶರಣಪ್ರಕಾಶ್ ಪಾಟೀಲ ಅವರು 2024-25ನೇ ಸಾಲಿನಲ್ಲಿ ನಮ್ಮ ಇಲಾಖೆಗೆ 4,331 ಕೋಟಿ ರು. ಅನುದಾನ ಒದಗಿಸಲಾಗಿದೆ. ಈವರೆಗೆ 3099 ಕೋಟಿ ರು. ಬಿಡುಗಡೆಯಾಗಿದ್ದು, ಇದರಲ್ಲಿ 3005 ಕೋಟಿ ರು. ವೆಚ್ಚ ಮಾಡಲಾಗಿದೆ. ಬಿಡುಗಡೆ ಮೊತ್ತಕ್ಕೆ ಶೇ. 96.97 ಪ್ರಗತಿ ಸಾಧಿಸಲಾಗಿದೆ ಎಂದು ವಿವರಿಸಿದರು.  ವಿವಿಧ ವೈದ್ಯಕೀಯ ಕಾಲೇಜುಗಳ ನಿರ್ಮಾಣ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು. 

ಇಲಾಖಾ ಕಾಮಗಾರಿಗಳು, ಕಾರ್ಯ ಕ್ರಮಗಳ ಪ್ರಗತಿ ಕುರಿತು ಮಾಹಿತಿ ಪಡೆದ ಮುಖ್ಯಮಂತ್ರಿಗಳು, ಪ್ರಸ್ತುತ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗೆ 400 ಕೋಟಿ ರು. ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ 130 ಕೋಟಿ ರು. ಅನುದಾನ ಒದಗಿಸಲಾಗಿದೆ. ಈ ಕಾಮ ಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಸೂಚಿಸಿದರು. 

ಮದ್ಯಪಾನದಿಂದ 7 ರೀತಿಯ ಕ್ಯಾನ್ಸರ್, 200+ ಕಾಯಿಲೆ! ಇನ್ಮೇಲಾದ್ರೂ ಕುಡಿಯೋದು ಬಿಡ್ರಪ್ಪ!

2023-24ನೇ ಸಾಲಿ ನಲ್ಲಿ ಅನುಮೋದನೆಗೊಂಡಿರುವ ಎಲ್ಲಾ ಕಾಮಗಾರಿಗಳನ್ನು ನಿಗದಿತ ಸಮಯದ ಒಳಗಾಗಿ ಪೂರ್ಣಗೊಳಿಸಬೇಕು. ಗದಗ, ಕೊಪ್ಪಳ, ಕಾರವಾರ, ಕೊಡಗು ಜಿಲ್ಲೆಗಳಲ್ಲಿ ನಿರ್ಮಾಣ ಹಂತದಲ್ಲಿರುವ 450 ಹಾಸಿಗೆ ಸಾಮರ್ಥದ ಆಸ್ಪತ್ರೆಗಳ ನಿರ್ಮಾಣವನ್ನು ತರಿತವಾಗಿ ಪೂರ್ಣಗೊಳಿಸಲು ಸೂಚಿಸಿದರು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ (ಬಿಬಿಎಂಪಿ) ಹೆಚ್ಚು ವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗೆ ಒದಗಿಸಲು ಮತ್ತು ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆ ಅಧಿಕಾರಿನೇಮಕಾತಿಗೆ ಕ್ರಮಕೈಗೊಳ್ಳುವಂತೆ ಇದೇ ವೇಳೆ ಸೂಚನೆ ನೀಡಿದರು. ಸಭೆಯಲ್ಲಿ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಇಲಾಖಾ ಪ್ರಧಾನ ಕಾರ್ಯದರ್ಶಿ ಮೊಹಮದ್ ಮೊಹಿಸಿನ್ ಸೇರಿ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್