ಬೆಂಗಳೂರು: ತಬ್ಲಿಘಿ ಜಮಾತ್‌ಗೆ ಹೋಗಿ ಬಂದವರಿಗೆ ಚಿಕಿತ್ಸೆ ನೀಡಿದ್ದ ವೈದ್ಯನಿಗೆ ಕೊರೋನಾ

By Suvarna NewsFirst Published Apr 11, 2020, 6:21 PM IST
Highlights

ಕೋವಿಡ್ 19 ಮಹಾಮಾರಿಗೆ ಇಡೀ ವಿಶ್ವವೇ ತತ್ತರಿಸಿ ಹೋಗಿದ್ದು, ಮಾರಣಾಂತಿಕ ಕೋವಿಡ್ 19 ವೈರಸ್ ಸೋಂಕು ಪೀಡಿತರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರಿಗೂ ಸೋಂಕು ತಗುಲಿದೆ. ಇದೀಗ ಕರ್ನಾಟಕದಲ್ಲಿ ವೈದ್ಯರೊಬ್ಬರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಬೆಂಗಳೂರು, (ಏ.11):  ದೆಹಲಿಯಿಂದ ಕೊರೋನಾ ಹಚ್ಚಿಕೊಂಡು ಬಂದ ತಬ್ಲೀಘಿಗಳಿಗೆ ಚಿಕಿತ್ಸೆ ನೀಡಿದ್ದ ಬೆಂಗಳೂರಿನ ವೈದ್ಯನಿಗೆ ಸೊಂಕು ತಗುಲಿರುವುದು ದೃಢವಾಗಿದೆ.

ತಬ್ಲೀಘಿಗಳಿಗೆ ಚಿಕಿತ್ಸೆ ನೀಡಿದ್ದ ಬೆಂಗಳೂರಿನ ಶಿಫಾ ಆಸ್ಪತ್ರೆಯ ವೈದ್ಯರಿಗೆ ಕೊರೋನಾ ಸೋಂಕು ತಗುಲಿರುವುದು ವರದಿಯಿಂದ ಖಚಿತವಾಗಿದೆ.

2ನೇ ಹಂತದ ಲಾಕ್‌ಡೌನ್ ವಿಭಿನ್ನ: ಕರ್ನಾಟಕದಲ್ಲಿ ಹೇಗಿರಲಿದೆ..?

ತಬ್ಲೀಘಿ ಜಮಾತ್ ಮಾರ್ಕಜ್ ಧಾರ್ಮಿಕ ಸಭೆಗೆ ಹೋಗಿದ್ದ ಬಂದಿದ್ದವರಿಗೆ ಚಿಕಿತ್ಸೆ ನೀಡಿದ್ದರಿಂದ ವೈದ್ಯನಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಶಿಫಾ ಆಸ್ಪತ್ರೆಯನ್ನು ಸಂಪೂರ್ಣವಾಗಿ ಬಂದ್ ಮಾಡಲು ಬಿಬಿಎಂಪಿ ಮುಂದಾಗಿದೆ.

ಅಲ್ಲದೇ ವೈದ್ಯರಾಗಿರುವ ಕಾರಣ ಅವರು  ಹಲವರಿಗೆ ಚಿಕಿತ್ಸೆ ನೀಡಿದ್ದಾರೆ. ಹೀಗಾಗಿ ಪ್ರಾಥಮಿಕ ಸಂಪರ್ಕಿತರನ್ನ ಪತ್ತೆ  ಮಾಡುವ ಕಾರ್ಯ ಸಹ  ನಡೆಯುತ್ತಿದೆ.

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ.  ವೈದ್ಯ ಸೇರಿದಂತೆ  ಸದ್ಯದ ಮಾಹಿತಿ ಪ್ರಕಾರ ಕರ್ನಾಟಕದಲ್ಲಿ ಒಟ್ಟು 215 ಒರೋನಾ ಕೇಸ್‌ಗಳು ಪತ್ತೆಯಾಗಿದ್ದು, 39 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

click me!