Shivamogga: ಗಂಟಲಿನಲ್ಲಿ ಸಿಲುಕಿದ ಕೋಳಿ ಮೂಳೆ, ಶಸ್ತ್ರಚಿಕಿತ್ಸೆಯಿಲ್ಲದೆ ಹೊರ ತೆಗೆದ ವೈದ್ಯರು

Published : Sep 12, 2025, 04:17 PM IST
chicken curry without oil

ಸಾರಾಂಶ

ವ್ಯಕ್ತಿಯೊಬ್ಬರು ಕೋಳಿ ಮೂಳೆ ಆಸ್ವಾದಿಸಲು ಹೋಗಿ ಅದು ಅನ್ನನಾಳದಲ್ಲಿ ಸಿಲುಕಿಹಾಕಿಕೊಂಡಿತ್ತು. ಮೂಳೆ ಅನ್ನನಾಳದಲ್ಲಿ ಸಿಲುಕಿಹಾಕಿಕೊಳ್ಳುವ ಮುಂಚೆ ಅದನ್ನು ಚುಚ್ಚಿ ರಕ್ತಸ್ರಾವವಾಗಿಸಿತ್ತು. ರೋಗಿ ಉಸಿರಾಡಲು ಸಹ ಕಷ್ಟ ಪಡುತ್ತಿರುವಾಗ…

ಎಂದಿನಂತೆ ಊಟ ಮಾಡುತ್ತಿರುವ ವ್ಯಕ್ತಿಯೊಬ್ಬರು ಸಾವಿನ ಬಾಗಿಲು ತಟ್ಟಿ ಬಂದಿದ್ದಾರೆ. ಆದರೆ ಸಮಯಕ್ಕೆ ಸರಿಯಾಗಿ ವೈದ್ಯರು ತುರ್ತು ಚಿಕಿತ್ಸೆ ನೀಡಿದ್ದರಿಂದ ರೋಗಿ ಸಾವಿನ ದವಡೆಯಿಂದ ಪಾರಾಗಿದ್ದಾರೆ.

ಹೌದು, ಸುಮಾರು 70 ವರ್ಷದ ವ್ಯಕ್ತಿಯೊಬ್ಬರು ಕೋಳಿ ಮೂಳೆ ಆಸ್ವಾದಿಸಲು ಹೋಗಿ ಅದು ಅನ್ನನಾಳದಲ್ಲಿ ಸಿಲುಕಿಹಾಕಿಕೊಂಡಿತ್ತು. ಮೂಳೆ ಅನ್ನನಾಳದಲ್ಲಿ ಸಿಲುಕಿಹಾಕಿಕೊಳ್ಳುವ ಮುಂಚೆ ಅದನ್ನು ಚುಚ್ಚಿ ರಕ್ತಸ್ರಾವವಾಗಿಸಿತ್ತು. ರೋಗಿ ಉಸಿರಾಡಲು ಸಹ ಕಷ್ಟ ಪಡುತ್ತಿರುವಾಗ ರೋಗಿಯ ಸಂಬಂಧಿಕರು ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ಕರೆ ತಂದಿದ್ದಾರೆ.

ಶಸ್ತ್ರಚಿಕಿತ್ಸೆಯಿಲ್ಲದೆ  ಮೂಳೆ ಹೊರತಗೆದ ವೈದ್ಯರು 

ವೈದ್ಯರು ತುರ್ತಾಗಿ ರೋಗಿಯನ್ನು ಪರೀಕ್ಷಿಸಿ ಸಿಟಿ ಇಮೇಜಿಂಗ್‌ ಪರೀಕ್ಷೆಗೆ ಒಳಪಡಿಸಿದ್ದಾರೆ. ಇದರಲ್ಲಿ ಹರಿತವಾದ ಎಲುಬೊಂದು ಅನ್ನನಾಳವನ್ನು ಹರಿದು ಅಪಾಯಕಾರಿ ರಂಧ್ರ ಉಂಟುಮಾಡಿ, ಗಾಳಿ, ಹಾಗೂ ದ್ರವವು ಎದೆಗೂಡು ಹಾಗೂ ಮೀಡಿಯಾಸ್ಷೀನಮ್‌ಗೆ ಸೋರಿಕೆಯಾಗುತ್ತಿರುವುದು ಕಂಡು ಬಂದಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ವೈದ್ಯರು ಮೂಳೆ ಹೊರತಗೆಯಲು ಶಸ್ತ್ರಚಿಕಿತ್ಸೆಯ ಮೊರೆಹೋಗದೆ, ಕೇವಲ ಲೇಸರ್‌ ಹಾಗೂ ಅತ್ಯಾಧುನಿಕ ಎಂಡೋಸ್ಕೋಪಿಕ್‌ ತಂತ್ರಜ್ಞಾನವನ್ನು ಬಳಸಿಕೊಂಡು ಮೂಳೆಯನ್ನು ಹೊರತೆಗೆದಿದ್ದಾರೆ.

ಚಿಕಿತ್ಸೆಯ ಬಗ್ಗೆ ಮಾತನಾಡಿರುವ ವೈದ್ಯ ಶಿವಕುಮಾರ್‌, “ರೋಗಿ ತೀವ್ರ ಎದೆನೋವು ಮತ್ತು ಉಸಿರಾಟದ ತೊಂದರೆಯೊಂದಿಗೆ ಆಸ್ಪತ್ರೆಗೆ ಬಂದಿದ್ದರು. ಈ ರಂಧ್ರವನ್ನು ಗಮನಿಸಿದರೆ ಶಸ್ತ್ರಚಿಕಿತ್ಸೆ ಅನಿವಾರ್ಯವಾಗಬಹುದಿತ್ತು, ಆದರೆ ರೋಗಿಗೆ ಶಸ್ತ್ರಚಿಕಿತ್ಸೆಯ ಅಪಾಯ ಹೆಚ್ಚು ಇದ್ದುದರಿಂದ ನಾವು ಆಧುನಿಕ ಎಂಡೋಸ್ಕೋಪಿಕ್ ವಿಧಾನವನ್ನು ಆಯ್ಕೆ ಮಾಡಿದೆವು, ಸಾಮಾನ್ಯ ಅನಸ್ತೇಷಿಯಾ ಅಡಿಯಲ್ಲಿ, ತಂಡ ಎಲುಬನ್ನು ಸಣ್ಣ ತುಂಡುಗಳಾಗಿ ಮಾಡಿ ಎಂಡೋಸ್ಕೋಪ್ ತಂತ್ರಜ್ಞಾನದಿಂದ ತೆಗೆದುಹಾಕಿತು. ನಂತರ ರಂಧ್ರವನ್ನು ಲೋಹದ ಕ್ಲಿಪ್‌ಗಳ ಮೂಲಕ ಮುಚ್ಚಲಾಯಿತು.

ಈ ರೀತಿಯ ಪ್ರಕರಣಗಳು ಅತ್ಯಂತ ಸವಾಲಿನವು, ಏಕೆಂದರೆ ಸೋಂಕು ಮತ್ತು ಉಸಿರಾಟ ವೈಫಲ್ಯದ ಅಪಾಯ ಅತ್ಯಂತ ಹೆಚ್ಚಾಗಿರುತ್ತದೆ. ಆದರೆ ತುರ್ತು ಚಿಕಿತ್ಸೆಯಿಂದ ರೋಗಿ ಕೇವಲ ನಾಲ್ಕು ದಿನಗಳಲ್ಲಿ ಸಂಪೂರ್ಣ ಗುಣಮುಖರಾದರು.

ಊಟ ಮಾಡುವಾಗ ಟಿವಿ ನೋಡ್ಬೇಡಿ 

ಊಟ ಮಾಡುವಾಗ ಯಾವತ್ತೂ ಗಮನ ಬೇರೆಡೆ ಇರಬಾರದು. ಟಿವಿ ಅಥವಾ ಸ್ಮಾರ್ಟ್‌ಫೋನ್‌ಗೆ ನೋಡುತ್ತ ಊಟ ಮಾಡುವುದರಿಂದ ಒಂದು ಸಣ್ಣ ತಪ್ಪು ವೈದ್ಯಕೀಯ ತುರ್ತು ಪರಿಸ್ಥಿತಿಯನ್ನೇ ಉಂಟುಮಾಡಬಹುದು” ಎಂದು ಡಾ. ಶಿವಕುಮಾರ್ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತನಿಗೆ ಪರಿಹಾರ ನೀಡದ ಶಿವಮೊಗ್ಗ ಡಿಸಿ ಕಚೇರಿ, ಕಾರು ಜಪ್ತಿಗೆ ಕೋರ್ಟ್ ಆದೇಶ! ಏನಿದು ಪ್ರಕರಣ?
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!