ನಾಯಿಗಳ ಮೇಲೂ ತೆರಿಗೆ ಹೇರಿಕೆಗೆ ಮುಂದಾದ ಸರ್ಕಾರ! ಸಾಕು ನಾಯಿಗೋ, ಬೀದಿ ನಾಯಿಗಳ ಮೇಲೋ?

Kannadaprabha News   | Kannada Prabha
Published : Mar 19, 2026, 06:08 AM IST
Dog Tax Proposal in Karnataka

ಸಾರಾಂಶ

Dog Tax Proposal in Karnataka ಸ್ಥಳೀಯ ಸಂಸ್ಥೆಗಳಲ್ಲಿ ಜಾಹೀರಾತು ಶುಲ್ಕ ವಿಧಿಸುವ ವಿಧೇಯಕದ ಚರ್ಚೆಯ ವೇಳೆ, ನಾಯಿಗಳ ಮೇಲೆ ತೆರಿಗೆ ವಿಧಿಸುವ ಪ್ರಸ್ತಾವನೆಗೆ ಕಾಂಗ್ರೆಸ್ ಸದಸ್ಯ ಡಾ.ಡಿ.ತಿಮ್ಮಯ್ಯ ವಿರೋಧ ವ್ಯಕ್ತಪಡಿಸಿದರು. ಇದಕ್ಕೆ ಉತ್ತರಿಸಿದ ಸಚಿವ ಬೈರತಿ ಸುರೇಶ್ ಅವರು ಹೇಳಿದ್ದೇನು?

ವಿಧಾನ ಪರಿಷತ್ತು (ಮಾ.19) ಸ್ಥಳೀಯ ಸಂಸ್ಥೆಗಳಲ್ಲಿ ಜಾಹೀರಾತು ಶುಲ್ಕ ವಿಧಿಸುವ ವಿಧೇಯಕದ ಚರ್ಚೆಯ ವೇಳೆ ನಾಯಿಗಳ ಮೇಲೆ ತೆರಿಗೆ ವಿಧಿಸುವ ಪ್ರಸ್ತಾವನೆಗೆ ಕಾಂಗ್ರೆಸ್‌ ಸದಸ್ಯ ಡಾ.ಡಿ.ತಿಮ್ಮಯ್ಯ ಅವರು ತೀವ್ರ ವಿರೋಧ ವ್ಯಕ್ತಪಡಿಸಿದರು.

ವಿಧೇಯಕದಲ್ಲಿ ತೆರಿಗೆಯನ್ನು ಸಾಕು ನಾಯಿಗಳು ಅಥವಾ ಬೀದಿ ನಾಯಿಗಳ ಪೈಕಿ ಯಾವುದರ ಮೇಲೆ ವಿಧಿಸುತ್ತಾರೆ ಎನ್ನುವುದಕ್ಕೆ ಸ್ಪಷ್ಟತೆ ಇಲ್ಲ. ಸರ್ಕಾರ ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ‘ಪ್ರಾಣಿಗಳ ಮೇಲೆ ದಯೆ ಇರಲಿ’ ಎಂಬ ಬೋರ್ಡ್‌ ಹಾಕಿದೆ. ಆದರೆ, ಇಲ್ಲಿ ತೆರಿಗೆ ಹಾಕುವುದಕ್ಕೆ ಮುಂದಾಗಿದೆ. ಇದು ಸರಿಯಲ್ಲ. ಅವಕಾಶವಿದ್ದರೆ ನಾಯಿಗಳ ಮೇಲೆ ತೆರಿಗೆ ವಿಧಿಸುವುದನ್ನು ತೆಗೆದು ಹಾಕಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಅವರು, ಕರ್ನಾಟಕ ಮುನ್ಸಿಪಾಲಿಟಿಗಳ ಮತ್ತು ಕೆಲವು ಇತರ ಕಾನೂನು ತಿದ್ದುಪಡಿ ವಿಧೇಯಕ 2026ಕ್ಕೆ ಇನ್ನೂ ನಿಯಮಾವಳಿಗಳನ್ನು ರೂಪಿಸಿಲ್ಲ. ಕೆಳಮನೆಯಲ್ಲಿ ವಿಧೇಯಕ ಅಂಗೀಕಾರವಾಗಿದ್ದು ಮೇಲ್ಮನೆಯಲ್ಲಿ ಅಂಗೀಕಾರವಾದ ಬಳಿಕ ನಿಯಮಾವಳಿಗಳನ್ನು ರೂಪಿಸುತ್ತೇವೆ. ಆ ಸಂದರ್ಭದಲ್ಲಿ ನಾಯಿಗಳ ಮೇಲೆ ತೆರಿಗೆ ವಿಧಿಸಬೇಕೇ ಅಥವಾ ಬೇಡವೇ ಎನ್ನುವ ಕುರಿತು ಎಲ್ಲವನ್ನೂ ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Mangaluru: ಎಂಆರ್‌ಪಿಎಲ್ ಹೊಸ ಮೈಲಿಗಲ್ಲು 1000ನೇ ಪೆಟ್‌ಕೋಕ್ ರೈಲು ಜೆಎಸ್‌ಡಬ್ಲ್ಯೂ ಸಿಮೆಂಟ್‌ಗೆ ರವಾನೆ
Karnataka Rains: ರಾಜ್ಯದಲ್ಲಿ ಆಲಿಕಲ್ಲು ಮಳೆ ಅಬ್ಬರ: ಹಲವು ಜಿಲ್ಲೆಗಳಲ್ಲಿ ಜನರಿಗೆ ಅಚ್ಚರಿ