Karnataka Politics: ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್‌ ನಿರ್ಧರಿಸುತ್ತೆ, ಪದೇ ಪದೆ ಕೇಳ್ಬೇಡಿ ಎಂದ ಸಿಎಂ

Kannadaprabha News, Ravi Janekal |   | Kannada Prabha
Published : Feb 12, 2026, 07:45 AM IST
Siddaramaiah

ಸಾರಾಂಶ

ನಾಯಕತ್ವ ಬದಲಾವಣೆಯ ಕುರಿತಾದ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ತಾವೂ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬದ್ಧರಾಗಿರುತ್ತೇವೆ ಎಂದು ಸ್ಪಷ್ಟಪಡಿಸಿದ್ದು, ಈ ಬಗ್ಗೆ ಪದೇ ಪದೇ ಪ್ರಶ್ನೆ ಕೇಳದಂತೆ ಮಾಧ್ಯಮಗಳಿಗೆ ಮನವಿ .

ಬೆಂಗಳೂರು (ಫೆ.12): ನಾಯಕತ್ವ ವಿಚಾರದಲ್ಲಿ ಹೈಕಮಾಂಡ್‌ ನಾಯಕರು ತೀರ್ಮಾನ ಮಾಡುತ್ತಾರೆ. ಅದರಂತೆ ನಾನು, ಡಿ.ಕೆ.ಶಿವಕುಮಾರ್‌ ನಡೆದುಕೊಳ್ಳುತ್ತೇವೆ. ಮತ್ತೆ ಮತ್ತೆ ಇದರ ಬಗ್ಗೆಯೇ ಕೇಳಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮದವರಿಗೆ ಹೇಳಿದ್ದಾರೆ.

ಪದೇಪದೆ ಅದೇ ಪ್ರಶ್ನೆ ಕೇಳಬಾರದು

ನಗರದ ಶಕ್ತಿಸೌಧದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ನಾಯಕತ್ವ ಬದಲಾವಣೆ ವಿಚಾರದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಮೂರು ತಿಂಗಳಿಂದ ಬರೀ ಇದೇ ಆಯಿತು. ಬೇರೆ ಏನೂ ಇಲ್ವಾ ಕೇಳೋಕೆ? ಕೇಳಿದ ಪ್ರಶ್ನೆಯನ್ನೇ ಪದೇ ಪದೆ ಕೇಳಬಾರದು ಎಂದರು.

ಹೈಕಮಾಂಡ್ ತೀರ್ಮಾನವೇ ಅಂತಿಮ

ಜತೆಗೆ, ಹೈಕಮಾಂಡ್‌ನವರಿಗೆ ಎಲ್ಲವೂ ಗೊತ್ತಿದೆ. ಅವರು ತೀರ್ಮಾನ ಮಾಡುತ್ತಾರೆ. ಅದರಂತೆ ನಾನೂ ನಡೆಯುತ್ತೇನೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೂ ನಡೆದುಕೊಳ್ಳುತ್ತಾರೆ. ಇದನ್ನು ಈಗಾಗಲೇ ನಾನು ಹಲವು ಬಾರಿ ಹೇಳಿದ್ದೇನೆ. ಮತ್ತೆ ಈ ಪ್ರಶ್ನೆ ಕೇಳಬೇಡಿ ಎಂದರು.

ತಾವು ಅಧಿಕಾರ ಬಿಟ್ಟುಕೊಡುವ ವಿಶ್ವಾಸವಿದೆ ಎಂದು ಡಿ.ಕೆ.ಸುರೇಶ್‌ ಅವರು ಹೇಳಿದ್ದಾರಲ್ವಾ ಎಂಬ ಪ್ರಶ್ನೆಗೆ, ಅವರು ಹೇಳಿದ್ದರೆ ಅವರನ್ನು ಕೇಳಿ. ನನ್ನನ್ನು ಕೇಳಬೇಡಿ. ನಾನು ಹೈಕಮಾಂಡ್‌ ಹೇಳಿದಂತೆ ನಡೆಯುವವನು ಎಂದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಿಜೆಪಿಗ ಮುಖಂಡಗೆ ನೀಡಿದ್ದ ಕರ್ನಾಟಕ ರಾಜ್ಯ ಸಚಿವ ಸ್ಥಾನ ವಾಪಸ್‌!
ಕುಸುಮರೋಗಿಗಳಿಗೆ ಉದ್ಯೋಗ ಮೀಸಲು ಬೇಕು-ಬಾಧಿಸೋದು ಗಂಡು ಮಕ್ಕಳನ್ನೇ!