ರಾಜ್ಯದಲ್ಲಿ 4ನೇ ಶನಿವಾರ ರಜೆ ರದ್ದು : ಯಾರಿಗೆ ಅನ್ವಯ ?

By Suvarna NewsFirst Published Dec 13, 2019, 1:14 PM IST
Highlights

ತಿ ತಿಂಗಳ ನಾಲ್ಕನೇ ಶನಿವಾರದ ದಿನ ಸಾರ್ವತ್ರಿಕ ರಜೆ ಎಂದು ಘೋಷಿಸಿತ್ತು. ಇದೀಗ ಈ ಅಧಿಸೂಚನೆಯನ್ನು ಮಾರ್ಪಡಿಸಿ ಕರ್ನಾಟಕ ಹೈಕೋರ್ಟ್‌, ರಾಜ್ಯದ ಎಲ್ಲಾ ಅಧೀನ ನ್ಯಾಯಾಲಯಗಳು ಹಾಗೂ ಅದಕ್ಕೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ನೌಕರರ ರಜೆ ರದ್ದುಗೊಳಿಸಲಾಗಿದೆ.

ಬೆಂಗಳೂರು [ಡಿ.13]:  ಹೈಕೋರ್ಟ್‌ ಹಾಗೂ ರಾಜ್ಯದ ಎಲ್ಲಾ ಅಧೀನ ನ್ಯಾಯಾಲಯಗಳಿಗೆ ಸಂಬಂಧಿಸಿದ ಕರ್ತವ್ಯಕ್ಕೆ ನಿಯೋಜನೆಯಾಗಿರುವ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ನಾಲ್ಕನೇ ಶನಿವಾರದ ಸಾರ್ವತ್ರಿಕ ರಜೆ ರದ್ದುಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರವು 2019ರ ಜೂನ್‌ ತಿಂಗಳಿಂದ ಅನ್ವಯವಾಗುವಂತೆ ಪ್ರತಿ ತಿಂಗಳ ನಾಲ್ಕನೇ ಶನಿವಾರದ ದಿನ ಸಾರ್ವತ್ರಿಕ ರಜೆ ಎಂದು ಘೋಷಿಸಿತ್ತು.

ಇದೀಗ ಈ ಅಧಿಸೂಚನೆಯನ್ನು ಮಾರ್ಪಡಿಸಿ ಕರ್ನಾಟಕ ಹೈಕೋರ್ಟ್‌, ರಾಜ್ಯದ ಎಲ್ಲಾ ಅಧೀನ ನ್ಯಾಯಾಲಯಗಳು ಹಾಗೂ ಅದಕ್ಕೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ನೌಕರರ ರಜೆ ರದ್ದುಗೊಳಿಸಲಾಗಿದೆ.

2020ನೇ ವರ್ಷದ ಸಾರ್ವತ್ರಿಕ ರಜೆ ಪಟ್ಟಿ ಬಿಡುಗಡೆ: 7 ರಜೆ ನಷ್ಟ!...

ನ್ಯಾಯಾಲಯಗಳ ಅಧಿಕಾರಿಗಳು, ಅಭಿಯೋಜಕರು (ಪ್ರಾಸಿಕ್ಯೂಟರ್‌), ಸರ್ಕಾರಿ ವಕೀಲರು, ಸದರಿ ನ್ಯಾಯಾಲಯಗಳಲ್ಲಿನ ಪ್ರಕರಣಗಳಿಗಾಗಿ ಸಮನ್ವಯಿಸಲು ಹಾಗೂ ನ್ಯಾಯಾಲಯದ ಪ್ರಕರಣಗಳಿಗೆ ಹಾಜರಾಗಲು ನಿಯೋಜಿಸಿರುವ ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ನಾಲ್ಕನೇ ಶನಿವಾರದ ಸಾರ್ವತ್ರಿಕ ರಜೆ ರದ್ದುಗೊಳಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.

ಡಿಸೆಂಬರ್ 13ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

click me!