
ನವದೆಹಲಿ/ಬೆಂಳೂರು (ಅ.12): ಕರ್ನಾಟಕ ರಾಜ್ಯ ಸೇರಿದಂತೆ ದೇಶದ ಹಲವು ಪ್ರಮುಖ ರಾಜ್ಯಗಳ ರಾಜ್ಯಪಾಲರನ್ನು (Governors) ಬದಲಾವಣೆ ಮಾಡಿ ರಾಷ್ಟ್ರಪತಿ ಭವನದಿಂದ ಮಹತ್ವದ ಆದೇಶ ಹೊರಡಿಸಲಾಗಿದೆ. ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಮಾಜಿ ಸಂಸದೆ ಡಾ. ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ.
ಕರ್ನಾಟಕದ ಹೊಸ ರಾಜ್ಯಪಾಲೆಯಾಗಿ ನೇಮಕಗೊಂಡಿರುವ ಡಾ. ಸುಧಾ ಯಾದವ್ ಅವರು ಹರಿಯಾಣ ರಾಜ್ಯದವರು. ಮೂರು ಬಾರಿ ಭಾರತೀಯ ಜನತಾ ಪಕ್ಷದ (BJP) ಸಂಸದೆಯಾಗಿ ಸೇವೆ ಸಲ್ಲಿಸಿರುವ ಇವರು, ಹರಿಯಾಣದ ಮಹೇಂದ್ರಗಢ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಆಡಳಿತಾತ್ಮಕ ಮತ್ತು ರಾಜಕೀಯ ಅನುಭವ ಹೊಂದಿರುವ ಅವರನ್ನು ಪ್ರಮುಖ ರಾಜ್ಯವಾದ ಕರ್ನಾಟಕಕ್ಕೆ ರಾಜ್ಯಪಾಲೆಯನ್ನಾಗಿ ನೇಮಿಸಿರುವುದು ಮಹತ್ವ ಪಡೆದುಕೊಂಡಿದೆ. ಇವರು ಹುತಾತ್ಮ ಬಿಎಸ್‌ಎಫ್ (BSF) ಯೋಧ ಸುಖ್‌ಬೀರ್ ಸಿಂಗ್ ಅವರ ಪತ್ನಿಯಾಗಿದ್ದಾರೆ.
ಕರ್ನಾಟಕದ ಜೊತೆಗೆ ದೇಶದ ಇತರೆ ರಾಜ್ಯಗಳಿಗೂ ಹೊಸ ರಾಜ್ಯಪಾಲರನ್ನು ನೇಮಕ ಮಾಡಲಾಗಿದ್ದು, ಪ್ರಮುಖ ಬದಲಾವಣೆಗಳ ವಿವರ ಹೀಗಿದೆ:
ಕರ್ನಾಟಕದ ರಾಜ್ಯಪಾಲರು: ಡಾ. ಸುಧಾ ಯಾದವ್ (ನೂತನ ನೇಮಕ)
ಕೇರಳದ ರಾಜ್ಯಪಾಲರು: ಸಿಕ್ಕಿಂನ ರಾಜ್ಯಪಾಲರಾಗಿದ್ದ ಓಂ ಪ್ರಕಾಶ್ ಮಾಥುರ್ ಅವರನ್ನು ಕೇರಳದ ರಾಜ್ಯಪಾಲರಾಗಿ ವರ್ಗಾವಣೆ ಮಾಡಲಾಗಿದೆ.
ರಾಜೇಂದ್ರ ವಿಶ್ವನಾಥ್ ಅರ್ಲೇಕರ್: ಕೇರಳದ ರಾಜ್ಯಪಾಲರ ಜವಾಬ್ದಾರಿಯಿಂದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಬಿಡುಗಡೆಗೊಳಿಸಲಾಗಿದ್ದು, ಅವರು ತಮಿಳುನಾಡು ರಾಜ್ಯಪಾಲರಾಗಿ ಎಂದಿನಂತೆ ಮುಂದುವರಿಯಲಿದ್ದಾರೆ.
ಒಡಿಶಾದ ರಾಜ್ಯಪಾಲರು: ಬ್ರಜ್ ಮೋಹನ್ ರಾಮ್ ಅವರನ್ನು ಒಡಿಶಾ ರಾಜ್ಯದ ರಾಜ್ಯಪಾಲರಾಗಿ ನೇಮಿಸಲಾಗಿದೆ.
ಉತ್ತರಾಖಂಡದ ರಾಜ್ಯಪಾಲರು: ಡಾ. ಧಲ್ ಸಿಂಗ್ ಬಿಸೆನ್ ಅವರನ್ನು ಉತ್ತರಾಖಂಡದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.
ಸಿಕ್ಕಿಂನ ರಾಜ್ಯಪಾಲರು: ದುಷ್ಯಂತ್ ಗೌತಮ್ ಅವರನ್ನು ಸಿಕ್ಕಿಂ ರಾಜ್ಯದ ನೂತನ ರಾಜ್ಯಪಾಲರಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.
ಕೇಂದ್ರ ಸರ್ಕಾರದ ಈ ಹೊಸ ನೇಮಕಾತಿಗಳು ಹಾಗೂ ರಾಜ್ಯಪಾಲರ ಸ್ಥಳಾಂತರವು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದು, ಶೀಘ್ರದಲ್ಲೇ ನೂತನ ರಾಜ್ಯಪಾಲರು ತಮ್ಮ ಅಧಿಕಾರವನ್ನು ಸ್ವೀಕರಿಸಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ