
ಚಿಕ್ಕಮಗಳೂರು (ಆ.5) : ಇತ್ತೀಚೆಗೆ ದೇವಸ್ಥಾನಗಳಲ್ಲಿ ಡ್ರೆಸ್ ಕೋಡ್ ಅಳವಡಿಸಬೇಕೆಂಬ ಕೂಗು ಎದ್ದಿರುವ ಬೆನ್ನಲ್ಲೇ ಇದೀಗ ಚಿಕ್ಕಮಗಳೂರು ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ಬಿಂಡಿಗ ದೇವೀರಮ್ಮ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಡ್ರೆಸ್ ಕೋಡ್ ಅಳವಡಿಸಲು ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನ ಆಡಳಿತ ಮಂಡಳಿ ಮುಂದಾಗಿದೆ.
ಇನ್ನುಮುಂದೆ ಪಾಶ್ಚಾತ್ಯ ಉಡುಪುಗಳು, ಸ್ಕರ್ಟ್, ಮಿಡಿ, ಸ್ಲೀವ್ ಲೆಸ್ ಡ್ರೆಸ್, ಪ್ಯಾಂಟ್, ಸಾಕ್ಸ್ ಹಾಕಿ ದೇವಾಲಯಕ್ಕೆ ಬರುವಂತಿಲ್ಲ.ಸಾಂಪ್ರಾದಾಯಿಕ ಉಡುಗೆಯಲ್ಲಿ ಆಗಮಿಸಲು ಸೂಚಿಸಲಾಗಿದೆ. ಡ್ರೆಸ್ ಕೋಡ್ ಅಷ್ಟೇ ಅಲ್ಲದೆ ದೇವಾಲಯದ ಆವರಣದೊಳಗೆ ಮೊಬೈಲ್ ಫೋನ್ ಬಳಸುವುದು ನಿಷೇಧಿಸಿದೆ.
Chikkamagaluru; ಬಿಂಡಿಗ ದೇವೀರಮ್ಮನವರ ದೀಪೋತ್ಸವ, ಭಾರಿ ಪ್ರಮಾಣದ ಭಕ್ತರ ನಿರೀಕ್ಷೆ
ಪ್ರತಿವರ್ಷ ದೀಪಾವಳಿ ಹಬ್ಬದ ವೇಳೆ ಲಕ್ಷಾಂತರ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ. ಮಕ್ಕಳಿಂದ ಮುದುಕರವರೆಗೂ ಮಧ್ಯರಾತ್ರಿಯಿಂದಲೇ ಪಿರಮಿಡ್ ಆಕಾರದ ಬೆಟ್ಟ ಹತ್ತಿ ಭಕ್ತ ಸಮರ್ಪಿಸುತ್ತಾರೆ. ಇದುವರೆಗೆ ಡ್ರೆಸ್ ಕೋಡ್ ಇಲ್ಲದ್ದರಿಂದ ಪಾಶ್ಯಾತ್ಯ ಉಡುಪುಗಳು ಧರಿಸಿ ಬರುತ್ತಿದ್ದ ಯುವಕ ಯುವತಿಯರು. .ಇನ್ನುಮುಂದೆ ಸಾಂಪ್ರಾದಾಯಿಕ ಉಡುಪುಗಳಿದ್ದರೆ ಮಾತ್ರ ದರ್ಶನಕ್ಕೆ ಅವಕಾಶ. ಯಾರೇ ಬಂದರೂ ಸಾಂಪ್ರಾದಾಯಿಕ ಉಡುಗೆಯಲ್ಲೇ ಬರಬೇಕು. ದರ್ಶನಕ್ಕೆ ಬಂದು ದೇವಾಲಯದ ಆವರಣದೊಳಗೆ ಪ್ರೀವೆಡ್ಡಿಂಗ್ ಶೂಟ್, ರೀಲ್ಸ್ ಮಾಡುವಂತಿಲ್ಲ ಎಂದು ಸೂಚಿಸಲಾಗಿದೆ.
ನರಕ ಚತುರ್ದಶಿಯಂದು ಅಭ್ಯಂಗ ಸ್ನಾನ ಯಾಕೆ? ಅದರ ಮಹತ್ವ ತಿಳಿಯಿರಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ