
ವಿಧಾನ ಪರಿಷತ್ (ಮಾ.24): ರಾಜ್ಯದ ಗ್ರಾಮೀಣ ಭಾಗದಲ್ಲಿ ಇರುವ ಎಲ್ಲ ಶಾಲೆ, ಅಂಗನವಾಡಿ ಕೇಂದ್ರ ಮತ್ತು ಆಶ್ರಮ ಶಾಲೆಗಳಿಗೆ ಕುಡಿಯವ ನೀರು ಒದಗಿಸಲು ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.
ಜೆಡಿಎಸ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಅವರ ಗಮನ ಸೆಳೆಯುವ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರದ ಜಲಶಕ್ತಿ ಮಂತ್ರಾಲಯದ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ‘ಜಲಜೀವನ ಮಿಷನ್’ನ 100 ದಿನಗಳ ಅಭಿಯಾನದ ಅಡಿ ಕುಡಿಯಲು ಹಾಗೂ ಇತರ ಬಳಕೆಗೆ ನೀರು ಪೂರೈಸುವ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಶುದ್ಧ ನೀರಿನ ಘಟಕಗಳಿಂದ ಶಾಲೆಗೆ ಹಾಗೂ ಅಂಗನವಾಡಿಗಳಿಗೆ ಗ್ರಾಮ ಪಂಚಾಯಿತಿಯಿಂದ ನೀರು ಪೂರೈಸುವಂತೆ ಈಗಾಗಲೇ ಸರ್ಕಾರ ಆದೇಶಿಸಿದೆ ಎಂದರು.
'ವಿಶ್ವನಾಥ್ ಪ್ರೆಸ್ ಮೀಟ್ ಕರೆದು BJP,ಕಾಂಗ್ರೆಸ್, ಜೆಡಿಎಸ್ ಯಾವ್ದೆಂದು ಹೇಳಲಿ' ...
ಒಂದು ವೇಳೆ ಅಂಗನವಾಡಿ ಕೇಂದ್ರ ಖಾಸಗಿ ಕಟ್ಟಡದಲ್ಲಿ ಇದ್ದರೂ ನಳ ನೀರಿನ ವ್ಯವಸ್ಥೆ ಕಲ್ಪಿಸಿ ಅದಕ್ಕೆ ತಗಲುವ ವೆಚ್ಚವನ್ನು ಕಟ್ಟಡ ಮಾಲೀಕರಿಗೆ ಸಲ್ಲಿಸುವ ಬಾಡಿಗೆ ಹಣದಲ್ಲಿ ಪಡೆಯಲು ಸೂಚಿಸಲಾಗಿದೆ. ಕುಡಿಯುವ ನೀರು ಒದಗಿಸಲು ಹಣದ ಕೊರತೆ ಇಲ್ಲ. ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ಜೊತೆಗೆ ಶಾಲೆಗಳಿಗೆ ಶೌಚಾಲಯ ನಿರ್ಮಿಸಲಾಗುವುದು. ನರೇಗಾ ಮೂಲಕ ಶಾಲೆಗಳಿಗೆ ಕಾಂಪೌಂಡ್ ನಿರ್ಮಿಸಲಾಗುವುದು ಎಂದು ಸಚಿವ ಈಶ್ವರಪ್ಪ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ