ನೀರಿನ ದಾಹ ತಣಿಸಲು ಕಂದಾಯ ಇಲಾಖೆ ಮುಂದು; 7000 ಬೋರ್ವೆಲ್‌ ಗುರುತು

Published : Mar 02, 2024, 07:31 AM IST
 ನೀರಿನ ದಾಹ ತಣಿಸಲು ಕಂದಾಯ ಇಲಾಖೆ ಮುಂದು; 7000 ಬೋರ್ವೆಲ್‌ ಗುರುತು

ಸಾರಾಂಶ

ಗ್ರಾಮಗಳು ಹಾಗೂ ನಗರ ಪ್ರದೇಶದ 57 ವಾರ್ಡ್‌ಗಳಲ್ಲಿ ನೀರಿನ ಸಮಸ್ಯೆಯಿದ್ದು, ಅಲ್ಲಿಗೆ ಟ್ಯಾಂಕರ್‌ ಮತ್ತು ಖಾಸಗಿ ಕೊಳವೆಬಾವಿ ಮೂಲಕ ನೀರು ಪೂರೈಸಲಾಗುತ್ತಿದೆ. ಮುಂದಿನ ದಿನಗಳಲ್ಲಿ 7,412 ಗ್ರಾಮಗಳು ಹಾಗೂ 1,115 ವಾರ್ಡ್‌ಗಳಲ್ಲಿ ನೀರಿನ ಸಮಸ್ಯೆ ಎದುರಾಗುವ ಅಂದಾಜಿದ್ದು, ಅಲ್ಲಿ ನೀರು ಪೂರೈಕೆಗಾಗಿ 7 ಸಾವಿರಕ್ಕೂ ಹೆಚ್ಚಿನ ಖಾಸಗಿ ಬೋರ್‌ವೆಲ್‌ಗಳನ್ನು ಗುತ್ತಿಗೆ ಆಧಾರದಲ್ಲಿ ಪಡೆಯುವುದಕ್ಕೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಬೆಂಗಳೂರು (ಮಾ.2) : ರಾಜ್ಯದಲ್ಲಿ ಸದ್ಯ 471 ಗ್ರಾಮಗಳು ಹಾಗೂ ನಗರ ಪ್ರದೇಶದ 57 ವಾರ್ಡ್‌ಗಳಲ್ಲಿ ನೀರಿನ ಸಮಸ್ಯೆಯಿದ್ದು, ಅಲ್ಲಿಗೆ ಟ್ಯಾಂಕರ್‌ ಮತ್ತು ಖಾಸಗಿ ಕೊಳವೆಬಾವಿ ಮೂಲಕ ನೀರು ಪೂರೈಸಲಾಗುತ್ತಿದೆ. ಮುಂದಿನ ದಿನಗಳಲ್ಲಿ 7,412 ಗ್ರಾಮಗಳು ಹಾಗೂ 1,115 ವಾರ್ಡ್‌ಗಳಲ್ಲಿ ನೀರಿನ ಸಮಸ್ಯೆ ಎದುರಾಗುವ ಅಂದಾಜಿದ್ದು, ಅಲ್ಲಿ ನೀರು ಪೂರೈಕೆಗಾಗಿ 7 ಸಾವಿರಕ್ಕೂ ಹೆಚ್ಚಿನ ಖಾಸಗಿ ಬೋರ್‌ವೆಲ್‌ಗಳನ್ನು ಗುತ್ತಿಗೆ ಆಧಾರದಲ್ಲಿ ಪಡೆಯುವುದಕ್ಕೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು ಹಾಗೂ ಸರ್ವೇ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಎದುರಾಗಿರುವ ಬರದಿಂದಾಗಿ ಮಾರ್ಚ್‌ನಿಂದ ಮೇ ತಿಂಗಳವರೆಗೆ ಕುಡಿಯುವ ನೀರಿನ ಸಮಸ್ಯೆ ಉಲ್ಭಣಿಸುವ ಅಂದಾಜಿದೆ. ಹೀಗಾಗಿ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಎಲ್ಲ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ. ಸದ್ಯ 471 ಗ್ರಾಮಗಳಲ್ಲಿ ಹಾಗೂ 57 ವಾರ್ಡ್‌ಗಳಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು, ಖಾಸಗಿ ಬೋರ್‌ವೆಲ್‌ಗಳು ಲಭ್ಯವಿಲ್ಲದ ಕಡೆಗಳಲ್ಲಿ ಟ್ಯಾಂಕರ್‌ ಮೂಲಕ ನೀರು ಪೂರೈಸಲಾಗುತ್ತಿದೆ.

ಡ್ಯಾಂ ಭರ್ತಿ ಇದ್ರೂ ಸ್ಮಾರ್ಟ್ ಸಿಟಿ ಮಂಗಳೂರಲ್ಲಿ ಕುಡಿಯುವ ನೀರಿಗೆ ತತ್ವಾರ!

ಮುಂದಿನ ದಿನಗಳಲ್ಲಿ ರಾಜ್ಯದ 7,412 ಗ್ರಾಮಗಳು ಹಾಗೂ 1,115 ವಾರ್ಡ್‌ಗಳಲ್ಲಿ ನೀರಿನ ಸಮಸ್ಯೆ ಎದುರಾಗುವ ಅಂದಾಜಿದೆ. ಹೀಗಾಗಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆಗೆ ಗ್ರಾಮ ಪಂಚಾಯತಿ ಮತ್ತು ಹೋಬಳಿ ಮಟ್ಟಕ್ಕೆ ಟೆಂಡರ್‌ ಪ್ರಕ್ರಿಯೆ ನಡೆಸುವಂತೆ ಸೂಚಿಸಲಾಗಿದೆ. ಅದೇ ರೀತಿ 7,108 ಖಾಸಗಿ ಬೋರ್‌ವೆಲ್‌ಗಳನ್ನು ಗುರುತಿಸಲಾಗಿದ್ದು, ಅವುಗಳಲ್ಲಿ 3,757 ಬೋರ್‌ವೆಲ್‌ ಮಾಲೀಕರೊಂದಿಗೆ ಈಗಾಗಲೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಹೋಬಳಿ ಮಟ್ಟದಲ್ಲಿ ಮೇವು ಬ್ಯಾಂಕ್‌:

ರಾಜ್ಯದಲ್ಲಿ ಎದುರಾಗುವ ಮೇವಿನ ಸಮಸ್ಯೆ ನೀಗಿಸಲು 25 ಜಿಲ್ಲೆಗಳಲ್ಲಿ ಜಿಲ್ಲಾವಾರು ಮೇವು ಖರೀದಿಗೆ ಟೆಂಡರ್ ಪ್ರಕ್ರಿಯೆ ನಡೆಸಲಾಗಿದೆ. ಉಳಿದ 6 ಜಿಲ್ಲೆಗಳಿಗೆ ಶೀಘ್ರದಲ್ಲಿ ಟೆಂಡರ್‌ ಕರೆಯಲಾಗುವುದು. ಜಿಲ್ಲೆಗೊಂದು ಗೋಶಾಲೆಗಳಿದ್ದು, ಅಲ್ಲಿ ಮೇವು ಶೇಖರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಅದನ್ನು ಹೊರತುಪಡಿಸಿ ಅಗತ್ಯವಿದ್ದರೆ ಹೆಚ್ಚುವರಿ ಗೋಶಾಲೆ ನಿರ್ಮಿಸಲಾಗುವುದು. ಹಾಗೆಯೇ, ಅವಶ್ಯಕತೆಗೆ ತಕ್ಕಂತೆ ಹೋಬಳಿ ಮಟ್ಟದಲ್ಲೂ ಗೋಶಾಲೆ ಮತ್ತು ಮೇವಿನ ಬ್ಯಾಂಕ್‌ ತೆರೆಯಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

 

ಭಾಗಮಂಡಲದಲ್ಲಿ ಕುಡಿಯುವ ನೀರಿಗೆ ಅಡ್ಡಿಪಡಿಸಿದ ಅರಣ್ಯ ಇಲಾಖೆ ವಿರುದ್ಧ, ಸಿಡಿದೆದ್ದ ಗ್ರಾಮ ಪಂಚಾಯಿತಿಗಳು!

861 ಕೋಟಿ ರು. ಮೀಸಲು

ಬರ ನಿರ್ವಹಣೆಗಾಗಿ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಸಕರ ಅಧ್ಯಕತೆಯಲ್ಲಿ ಕಾರ್ಯಪಡೆ ರಚಿಸಲಾಗಿದೆ. ಈವರೆಗೆ ಕಾರ್ಯಪಡೆಗಳು 600ಕ್ಕೂ ಹೆಚ್ಚಿನ ಸಭೆ ನಡೆಸಿದ್ದು, ಅಲ್ಲಿ ಬರ ನಿರ್ವಹಣೆಗೆ ಸಂಬಂಧಿಸಿದ ಹಲವು ವಿಷಯಗಳನ್ನು ಚರ್ಚಿಸಲಾಗಿದೆ. ಹಾಗೆಯೇ, ರಾಜ್ಯಾದ್ಯಂತ ಬರ ನಿರ್ವಹಣೆಗಾಗಿ ಜಿಲ್ಲಾಡಳಿತದ ಖಾತೆಯಲ್ಲಿ 725.92 ಕೋಟಿ ರು. ಹಾಗೂ ತಹಶೀಲ್ದಾರ್ ಖಾತೆಯಲ್ಲಿ 135.40 ಕೋಟಿ ರು. ಸೇರಿದಂತೆ ಒಟ್ಟು 861.32 ಕೋಟಿ ರು. ಅನುದಾನ ಮೀಸಲಿರಿಸಲಾಗಿದೆ. ಆ ಹಣ ಬಳಸಿ ಪ್ರತಿ 15 ದಿನಕ್ಕೊಮ್ಮೆ ನೀರು ಪೂರೈಕೆಗೆ ಬಳಸಿಕೊಳ್ಳುವ ಟ್ಯಾಂಕರ್‌ ಹಾಗೂ ಬೋರ್‌ವೆಲ್‌ ಮಾಲೀಕರಿಗೆ ಬಿಲ್‌ ಪಾವತಿ ಸೇರಿದಂತೆ ಇನ್ನಿತರ ಪರಿಹಾರ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಕೃಷ್ಣ ಬೈರೇಗೌಡ ವಿವರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಲೀಚೆಟ್ ಸಂಸ್ಕರಣಾ ಘಟಕ:ಬೆಂಗಳೂರಲ್ಲಿ ಜಟಿಲವಾಗಿರುವ ಕಸದ ಸಮಸ್ಯೆಗೆ ಕೊನೆಗೂ ಮುಕ್ತಿ !
ಇಂಡಿಗೋ ವಿಮಾನ ರದ್ದು, ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ನೂಕು ನುಗ್ಗಲು, ಟಿಕೆಟ್ ಬೆಲೆ 15ರಿಂದ 80,000ಕ್ಕೆ ಏರಿಕೆ