ಗುಟ್ಕಾ ಪ್ಯಾಕೆಟ್‌ನಲ್ಲಿ ಡ್ರಗ್ಸ್‌: ಅಗತ್ಯಬಿದ್ದರೆ ಸುಗ್ರೀವಾಜ್ಞೆ ತಂದು ನಿಷೇಧ ಎಂದ ಸಿಎಂ

By Kannadaprabha NewsFirst Published Aug 1, 2020, 7:14 AM IST
Highlights

ಗುಟ್ಕಾ, ಪಾನ್‌ ಮಸಾಲ ಪ್ಯಾಕೆಟ್‌ಗಳಲ್ಲಿ ಮಾದಕ ದ್ರವ್ಯ (ಡ್ರಗ್ಸ್‌) ಮಾರಾಟ ಮಾಡುತ್ತಿರುವ ಪ್ರಕರಣಗಳು ಕಂಡುಬರುತ್ತಿದ್ದು, ಈ ಪದಾರ್ಥಗಳ ಮಾರಾಟ ಮತ್ತು ವಿತರಣೆಯನ್ನು ನಿಷೇಧಿಸುವಂತೆ ರಾಜ್ಯಪಾಲ ವಜೂಭಾಯಿ ವಾಲಾ ಅವರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಬೆಂಗಳೂರು(ಆ.01): ಗುಟ್ಕಾ, ಪಾನ್‌ ಮಸಾಲ ಪ್ಯಾಕೆಟ್‌ಗಳಲ್ಲಿ ಮಾದಕ ದ್ರವ್ಯ (ಡ್ರಗ್ಸ್‌) ಮಾರಾಟ ಮಾಡುತ್ತಿರುವ ಪ್ರಕರಣಗಳು ಕಂಡುಬರುತ್ತಿದ್ದು, ಈ ಪದಾರ್ಥಗಳ ಮಾರಾಟ ಮತ್ತು ವಿತರಣೆಯನ್ನು ನಿಷೇಧಿಸುವಂತೆ ರಾಜ್ಯಪಾಲ ವಜೂಭಾಯಿ ವಾಲಾ ಅವರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಶುಕ್ರವಾರ ತಮ್ಮನ್ನು ಭೇಟಿ ಮಾಡಿದ್ದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ರಾಜ್ಯಪಾಲರು ಈ ಸಲಹೆ ನೀಡಿದರು.

ಸಿಪಿ ಯೋಗೇಶ್ವರ್ ವಿಡಿಯೋ ಬಾಂಬ್: ಕೊನೆಗೂ ವೈರಲ್ ಆಯ್ತು ಡಿಕೆಶಿ ವಿಡಿಯೋ

ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಅಗತ್ಯ ಕಂಡುಬಂದರೆ ಸುಗ್ರೀವಾಜ್ಞೆ ಹೊರಡಿಸುವುದಾಗಿ ತಿಳಿಸಿದರು ಎಂದು ರಾಜಭವನದ ಪ್ರಕಟಣೆ ತಿಳಿಸಿದೆ.

ರಾಜ್ಯದಲ್ಲಿ ಗುಟ್ಕಾ, ಪಾನ್‌ ಮಸಾಲಾ ಹಾಗೂ ತಂಬಾಕು ಪ್ಯಾಕೆಟ್‌ಗಳಲ್ಲಿ ಮಾದಕ ದ್ರವ್ಯ ಮಾರಾಟ ಮಾಡುತ್ತಿರುವ ಪ್ರಕರಣಗಳು ಕಂಡುಬರುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ ರಾಜ್ಯಪಾಲರು, ಇದರಿಂದಾಗಿ ಯುವಕರು ಹಾಗೂ ವಿದ್ಯಾರ್ಥಿಗಳು ಮಾದಕ ವ್ಯಸನಕ್ಕೆ ಒಳಗಾಗುತ್ತಿದ್ದಾರೆ. ಅವರ ಜೀವನಕ್ಕೆ ತೊಂದರೆ ಉಂಟಾಗುತ್ತಿರುವುದರಿಂದ ಈ ಪದಾರ್ಥಗಳ ಮಾರಾಟ ಮತ್ತು ವಿತರಣೆ ನಿಷೇಧಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದರು.

ಕಣ್ಣಿಟ್ಟಿದ್ದೇ ಬೇರೆ, ಸಿಕ್ಕಿದೆ ಬೇರೆ: ಕೊನೆಗೆ ಸಿಕ್ಕದ್ದೇ ಶಿವಾ ಅಂತ ತಂದೆ ಆಶೀರ್ವಾದ ಪಡೆದ ವಿಜಯೇಂದ್ರ

ರಾಜಭವನದಿಂದ ವಾಪಸಾದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಸಂಬಂಧ ಮುಂದಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

click me!