
ಬೆಂಗಳೂರು, (ಸೆ.04): ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆಯ ಪ್ರಕರಣದಲ್ಲಿ ಸಿಸಿಬಿ ಬಲೆಯಲ್ಲಿರುವ ನಟಿ ರಾಗಿಣಿ ದ್ವಿವೇದಿ ಗೆಳೆಯ ರವಿಶಂಕರ್ ಅವರನ್ನ ಕೆಲಸದಿಂದ ಅಮಾನತು ಮಾಡಲಾಗಿದೆ.
ಡ್ರಗ್ಸ್ ದಂಧೆಯ ಪ್ರಕರಣದಲ್ಲಿ ಸಿಸಿಬಿ ವಶದಲ್ಲಿರುವ ರಾಗಿಣಿ ದ್ವಿವೇದಿ ಗೆಳೆಯ ರವಿಶಂಕರ್ ಜಯನಗರದ ಆರ್‌ಟಿಒ ಕಚೇರಿಯಲ್ಲಿ ಎಸ್‌ಡಿಎ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
'ರಾಗಿಣಿ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದರು'; ಕೊನೆಗೂ ಬಾಯ್ಬಿಟ್ಟ ಆಪ್ತ ರವಿಶಂಕರ್..!
ಇದೀಗ ರವಿಶಂಕರ್‌ನನ್ನು ಅಮಾನತ್ತುಗೊಳಿಸುವಂತೆ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸಾರಿಗೆ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಹೀಗಾಗಿ ನಟಿ ರಾಗಿಣಿ ಗೆಳೆಯ ರವಿಶಂಕರ್ ಹುದ್ದೆ ಕಳೆದುಕೊಳ್ಳುವುದು ಖಚಿತವಾಗಿದ್ದು, ಇಂದು (ಶುಕ್ರವಾರ) ಸಂಜೆಯೊಳಗೆ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಲಕ್ಷ್ಮಣ್ ಸವದಿ ಅವರ ಕಚೇರಿಯ ಮೂಲಗಳು ತಿಳಿಸಿವೆ.
"
ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆಯ ಪ್ರಕರಣದಲ್ಲಿ ನಟಿ ರಾಗಿಣಿಯವರನ್ನು ಈಗಾಗಲೇ ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಈ ವೇಳೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ರಾಗಿಣಿ ಅವರ ಮನೆ ಮೇಲೆ ಸಿಸಿಬಿ ದಾಳಿ ನಡೆಸಿ ಅವರನ್ನ ವಶಕ್ಕೆ ಪಡೆದುಕೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ