
ಬೆಂಗಳೂರು (ಜೂ.29): ಕೊರೋನಾ ಮೂರನೇ ಅಲೆಯು ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಬಹುದು ಎಂದು ಹೇಳಲಾಗುತ್ತಿರುವ ಹಿನ್ನೆಲೆಯಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಸರ್ಕಾರದಿಂದಲೇ ಪೌಷ್ಠಿಕ ಆಹಾರ ಒದಗಿಸಲು ಸಿದ್ಧತೆ ನಡೆದಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಜಿಲ್ಲೆಯಲ್ಲೂ ಸಾವಿರದಿಂದ ಮೂರು ಸಾವಿರದವರೆಗೆ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿದ್ದಾರೆ.
ಕೊರೋನಾ 3ನೇ ಅಲೆ: ಮಕ್ಕಳಿಗೇ 95,000 ಬೆಡ್ ಬೇಕು..! ..
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೇ ಅಪೌಷ್ಠಿಕತೆ ಹೊಂದಿರುವ ಸುಮಾರು 1500 ಮಕ್ಕಳಿದ್ದಾರೆ. ಅಪೌಷ್ಠಿಕತೆ ಹೊಂದಿರುವ ಮಕ್ಕಳಿಗೆ ರಾಜ್ಯಾದ್ಯಂತ 2 ತಿಂಗಳು ವಿಟಮಿನ್ ಯುಕ್ತ ಮಾತ್ರೆ, ಹಣ್ಣು, ಹಾಲು, ಡ್ರೈ ಫ್ರೂಟ್ಸ್ ನೀಡಲು ತಯಾರಿ ನಡೆದಿದೆ. ಈ ಸಂಬಂಧ ಮಾಹಿತಿ ಸಂಗ್ರಹಿಸಲಾಗಿದೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ