ಕರ್ನಾಟಕದಲ್ಲಿ ಬಿಜಿನೆಸ್ ಮಾಡುವುದಾಗಿ ನೆದರ್ಲ್ಯಾಂಡ್‌ನಿಂದ ಓಡಿಬಂದ ಕಾನ್ಸುಲ್ ಜನರಲ್!

Published : Mar 13, 2025, 07:35 PM ISTUpdated : Mar 13, 2025, 07:50 PM IST
ಕರ್ನಾಟಕದಲ್ಲಿ ಬಿಜಿನೆಸ್ ಮಾಡುವುದಾಗಿ ನೆದರ್ಲ್ಯಾಂಡ್‌ನಿಂದ ಓಡಿಬಂದ ಕಾನ್ಸುಲ್ ಜನರಲ್!

ಸಾರಾಂಶ

ನೆದರ್ಲೆಂಡ್ಸ್‌ನ ಕಂಪನಿಗಳು ಕರ್ನಾಟಕದ ಕೈಗಾರಿಕಾ ಮತ್ತು ಆರ್ & ಡಿ ವಲಯಗಳಲ್ಲಿ ಬಂಡವಾಳ ಹೂಡಿಕೆಗೆ ಆಸಕ್ತಿ ಹೊಂದಿವೆ ಎಂದು ಕಾನ್ಸುಲ್ ಜನರಲ್ ಹೇಳಿದ್ದಾರೆ. ಎನ್ಎಕ್ಸ್ ಪಿ ಸೆಮಿಕಂಡಕ್ಟರ್ಸ್ ಕಂಪನಿಯು ರಾಜ್ಯದಲ್ಲಿ ಆರ್ & ಡಿ ಚಟುವಟಿಕೆಗಳಿಗೆ 1 ಬಿಲಿಯನ್ ಡಾಲರ್ ಹೂಡಿಕೆ ಮಾಡಲು ಆಸಕ್ತಿ ತೋರಿದೆ.

ಬೆಂಗಳೂರು (ಮಾ.13): ರಾಜ್ಯದ ವಿವಿಧ ಕೈಗಾರಿಕಾ ಮತ್ತು ಆರ್ ಅಂಡ್ ಡಿ ವಲಯಗಳಲ್ಲಿ ತಮ್ಮ ದೇಶದ ನಾನಾ ಕಂಪನಿಗಳು ಬಂಡವಾಳ ಹೂಡಿಕೆಗೆ ಆಸಕ್ತಿ ಹೊಂದಿವೆ ಎಂದು ನೆದರ್ಲೆಂಡ್ಸ್‌ ಕಾನ್ಸುಲ್ ಜನರಲ್ ಇವೋಟ್ ಡಿ ವಿಟ್ಸರ್ವ್ಸ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌.ಬಿ. ಪಾಟೀಲ ಅವರನ್ನು ಗುರುವಾರ ಭೇಟಿ ಮಾಡಿ, ವಿಚಾರ ವಿನಿಮಯ ಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಎಂ.ಬಿ. ಪಾಟೀಲ್ ಅವರು, ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಪೂರ್ವಭಾವಿಯಾಗಿ ಕಳೆದ ಡಿಸೆಂಬರ್ ತಿಂಗಳಲ್ಲಿ ಯೂರೋಪ್ ರೋಡ್-ಶೋ ನಡೆಸಲಾಗಿತ್ತು. ಆ ಸಂದರ್ಭದಲ್ಲಿ ಎನ್ಎಕ್ಸ್ ಪಿ ಸೆಮಿಕಂಡಕ್ಟರ್ಸ್ ಕಂಪನಿಯು ಮುಂದಿನ 5 ವರ್ಷಗಳಲ್ಲಿ ರಾಜ್ಯದಲ್ಲಿ ಆರ್ & ಡಿ ಚಟುವಟಿಕೆಗಳಿಗೆ 1 ಬಿಲಿಯನ್ ಡಾಲರ್ ಹೂಡಿಕೆ ಮಾಡುವ ಆಸಕ್ತಿ ತೋರಿತ್ತು. ಈ ಸಂಬಂಧ ಮುಂದಿನ ದಿನಗಳಲ್ಲಿ ಮತ್ತಷ್ಟು ಅನುಸರಣಾ ಸಭೆಗಳನ್ನು ನಡೆಸಲಾಗುವುದು ಎಂದಿದ್ದಾರೆ.

ನೆದರ್ಲೆಂಡ್ಸ್‌ ಕಂಪನಿಗಳು ಭಾರತದಲ್ಲಿ ಮಾಡಿರುವ ಹೂಡಿಕೆಯಲ್ಲಿ ಶೇ.9ರಷ್ಟು ರಾಜ್ಯದಲ್ಲೇ ಆಗಿದೆ. ಫಿಲಿಪ್ಸ್ ಕಂಪನಿಯು ಯಲಹಂಕದ ತನ್ನ ನೂತನ ಕ್ಯಾಂಪಸ್ಸಿಗೆ 50 ಮಿಲಿಯನ್ ಯೂರೋ ಬಂಡವಾಳ ಹೂಡಿದೆ. ನೆದರ್ಲೆಂಡ್ಸ್‌ ದೇಶದ ಕಂಪನಿಗಳಾದ ಶೆಲ್, ಆ್ಯಕ್ಸೋ ನೊಬೆಲ್, ಟಿಎನ್ ಟಿ ಎಕ್ಸ್‌ಪ್ರೆಸ್‌ ಮುಂತಾದ ಕಂಪನಿಗಳು ನಮ್ಮಲ್ಲಿವೆ. ದಾಬಸಪೇಟೆ ಬಳಿ ಅಸ್ತಿತ್ವಕ್ಕೆ ಬರುತ್ತಿರುವ ಕ್ವಿನ್ ಸಿಟಿ ಯೋಜನೆಯಲ್ಲಿ ಹೂಡಿಕೆಗೆ ಇರುವ ಅವಕಾಶಗಳನ್ನು ಕಾನ್ಸುಲ್ ಜನರಲ್ ಗಮನಕ್ಕೆ ತರಲಾಗಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಮಂಡ್ಯದ ಚುನಾವಣೆಯಲ್ಲಿ ಸುಮಲತಾ ವಿರುದ್ಧ ದರ್ಶನ್ ಸ್ಪರ್ಧೆ; ಸ್ಪೋಟಕ ಭವಿಷ್ಯ ನುಡಿದ ಪ್ರಶಾಂತ್ ಕಿಣಿ!

ಜಾಗತಿಕ ಹೂಡಿಕೆದಾರರ ಸಮಾವೇಶದ ನಂತರ ನಾವು ವಿರಮಿಸಿಲ್ಲ. ನಿರಂತರ ಅನುಸರಣ ಸಭೆಗಳನ್ನು ನಡೆಸುತ್ತಿದ್ದೇವೆ. ಒಡಂಬಡಿಕೆ ಮತ್ತು ಹೂಡಿಕೆ ಆಸಕ್ತಿಗಳನ್ನು ನೈಜ ಹೂಡಿಕೆ ಆಗುವಂತೆ ನೋಡಿಕೊಳ್ಳಲು ಆದ್ಯತೆ ನೀಡಿದ್ದೇವೆ ಎಂದು ಸಚಿವ ಪಾಟೀಲ ತಿಳಿಸಿದರು. ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಹಾಜರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ
ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!