
ಬೆಂಗಳೂರು(ಸೆ.25): ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ನಿವೃತ್ತ ನ್ಯಾ. ಕೆ.ಎನ್. ಕೇಶವನಾರಾಯಣ ಆಯೋಗ ಸಲ್ಲಿಸಿರುವ ವರದಿ ಹಾಗೂ ಶಿಫಾರಸುಗಳನ್ನು ತಿರಸ್ಕರಿಸಲು ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸುವ ಸಾಧ್ಯತೆಯಿದೆ.
2016ರಲ್ಲಿ ರಾಜ್ಯದಲ್ಲಿ ತೀವ್ರ ವಿವಾದ ಸೃಷ್ಟಿಸಿದ್ದ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಆಗಿನ ಗೃಹ ಸಚಿವರಾಗಿದ್ದ ಕೆ.ಜೆ. ಜಾರ್ಜ್ ಸೇರಿ ಹಲವು ಹಿರಿಯ ಪೊಲೀಸ್ ಅಧಿಕಾರಿಗಳ ಮೇಲೆ ಆರೋಪಗಳು ಕೇಳಿ ಬಂದಿದ್ದವು. ಈ ಪ್ರಕರಣದ ಬಗ್ಗೆ ಸಿಬಿಐ ವಿಚಾರಣೆ ನಡೆಸಿ ಕ್ಲೀನ್‌ಚಿಟ್ ನೀಡಿತ್ತು.
ಇದನ್ನೂ ಓದಿ: ಸರ್ಕಾರಕ್ಕೆ ನುಗ್ಗಲಾರದ ತುತ್ತಾಗಿದೆ ಡಿವೈಎಸ್ಪಿ ಗಣಪತಿ ಕೇಸ್; ಪ್ರಕರಣಕ್ಕೆ ಸಿಕ್ಕಿದೆ ಬಿಗ್ ಟ್ವಿಸ್ಟ್
ಆದರೆ, ಇದೇ ವೇಳೆ 2016ರಲ್ಲಿ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಎಂ.ಕೆ. ಗಣಪತಿ ಪ್ರಕರಣ ವಿಚಾರಣೆ ನಡೆಸಿ ವರದಿ ನೀಡುವಂತೆ ನಿವೃತ್ತ ನ್ಯಾ. ಕೆ.ಎನ್. ಕೇಶವ ನಾರಾಯಣ ಆಯೋಗ ರಚನೆ ಮಾಡಿತ್ತು. ಈ ಆಯೋಗ ಸಲ್ಲಿಸಿರುವ ವರದಿ ಹಾಗೂ ಶಿಫಾರಸುಗಳನ್ನು ತಿರಸ್ಕರಿಸಲು ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡನೆಯಾಗಲಿದೆ. ಹೀಗಾಗಿ ಯಾವ ಶಿಫಾರಸುಗಳನ್ನು ಆಯೋಗ ಮಾಡಿತ್ತು ಎಂಬ ಬಗ್ಗೆ ಕುತೂಹಲ ಮೂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ