
ಯಾದಗಿರಿ (ಸೆ.28): ಹುಣಸಗಿ ತಾಲೂಕಿನ ಕೋಳಿಹಾಳ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಭೂಕಂಪದ ಅನುಭವದಿಂದ ಗ್ರಾಮಸ್ಥರು ಭಯಭೀತರಾಗಿ ಮನೆಯಿಂದ ಹೊರಗಡೆ ಬಂದಿದ್ದಾರೆ ಎಂದು ತಿಳಿದು ಬಂದಿದೆ.
ಭಾರಿ ಶಬ್ಧದೊಂದಿಗೆ ನಾಲ್ಕೈದು ಬಾರಿ ಭೂಮಿ ಕಂಪಿಸಿರುವ ಅನುಭವವಾಗಿದೆ. ಜನರು ಭಯಗೊಂಡು ರಾತ್ರಿಯೆಲ್ಲ ಜಾಗರಣೆ ಮಾಡಿದ್ದಾರೆ. ಭೂಕಂಪದಿಂದ ಜನ-ಜಾನುವಾರು ಹಾಗೂ ಮನೆಗಳು ಹಾನಿ ಆಗಿಲ್ಲ ಎಂದು ಕಂದಾಯ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ವಿಜಯಪುರದ ಸಿಂದಗಿಯಲ್ಲಿ ಒಂದೇ ದಿನ ಐದು ಬಾರಿ ಕಂಪಿಸಿದ ಭೂಮಿ, ಜನರಲ್ಲಿ ಆತಂಕ!
ಸ್ಥಳಕ್ಕೆ ತಹಸೀಲ್ದಾರ್ ಎಂ.ಬಸವರಾಜ ಭೇಟಿ ನೀಡಿ, ಭೂಮಿಯ ಆಳದಲ್ಲಿ ಸುಣ್ಣದ ಅಂಶದಲ್ಲಿ ಏರುಪೇರಾಗಿ ಶಬ್ದ ಹೊರಹೊಮ್ಮಿ ಭೂಕಂಪವಾಗಿರುವ ಅನುಭವ ಆಗಿದೆ, ಜನರು ಯಾವುದೇ ಕಾರಣಕ್ಕೆ ಆತಂಕ ಬೇಡ ಎಂದಿದ್ದಾರೆ.
ಇದನ್ನೂ ಓದಿ:
ಭೂಕಂಪ ಸಮಯದಲ್ಲಿ ಜನರು ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಜನರಲ್ಲಿ ಅರಿವು ಮೂಡಿಸಿದರು. ಕಳೆದ ವರ್ಷವೂ ಕೋಳಿಹಾಳದಲ್ಲಿ ನಾಲ್ಕೈದು ಬಾರಿ ಭೂಕಂಪವಾಗಿತ್ತು. ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ