Muddebihal: ವಿಷಪೂರಿತ ಆಹಾರ ಸೇವನೆ:30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ 

By Ravi Janekal  |  First Published Aug 15, 2023, 10:18 AM IST

ವಿಷಪೂರಿತ ಆಹಾರ ಸೇವಿಸಿ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರು ವಾಂತಿ ಬೇಧಿಯಿಂದ ಅಸ್ವಸ್ಥಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ರಕ್ಕಸಗಿ ಗ್ರಾಮದಲ್ಲಿ ನಡೆದಿದೆ.


ವಿಜಯಪುರ (ಆ.15) : ವಿಷಪೂರಿತ ಆಹಾರ ಸೇವಿಸಿ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರು ವಾಂತಿ ಬೇಧಿಯಿಂದ ಅಸ್ವಸ್ಥಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ರಕ್ಕಸಗಿ ಗ್ರಾಮದಲ್ಲಿ ನಡೆದಿದೆ.

30 ಕ್ಕು ಹೆಚ್ಚು ವಿದ್ಯಾರ್ಥಿನಿಯರು ವಾಂತಿ ಬೇಧಿಯಿಂದ ಅಸ್ವಸ್ಥ. ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ಶಾಲೆಯಲ್ಲಿ ನಡೆದಿರುವ ಘಟನೆ. ಅಡುಗೆ ಮಾಡುವಾಗ ಹಲ್ಲಿ ಬಿದ್ದಿದ್ದು ತಿಳಿಯದೇ ವಿದ್ಯಾರ್ಥಿನಿಯರು ಆಹಾರ ಸೇವಿಸಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದಾರೆ. ತಕ್ಷಣ ವಿದ್ಯಾರ್ಥಿನಿಯರನ್ನು ತಾಲೂಕು ಆಸ್ಪತ್ರೆಗೆ ದಾಖಲೆ ಮಾಡಿ ಚಿಕಿತ್ಸೆ ಮುಂದುವರಿಸಲಾಗಿದೆ.

Latest Videos

undefined

ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿದ 49 ವಿದ್ಯಾ​ರ್ಥಿ​ಗಳು ಅಸ್ವ​ಸ್ಥ

ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ನಾಡಗೌಡ:

ವಿದ್ಯಾರ್ಥಿನಿಯರು ವಿಷಪೂರಿತ ಆಹಾರ ಸೇವನೆಯಿಂದ ಅಸ್ವಸ್ಥಗೊಂಡಿರುವ ಮಾಹಿತಿ ತಿಳಿಯುತ್ತಿದ್ದಂತೆ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ ಮುದ್ದೇಬಿಹಾಳ ಶಾಸಕ ಸಿಎಸ್ ನಾಡಗೌಡ. ಆರೋಗ್ಯ ವಿಚಾರಿಸಿದರು. ಬಳಿಕ ಮಾತನಾಡಿದ ಅವರು,ಯಾರೂ ಗಾಬರಿಯಾಗಬೇಕಿಲ್ಲ ವಿದ್ಯಾರ್ಥಿನಿಯರಿಗೆ ಯಾವುದೇ ಅಪಾಯವಿಲ್ಲ ಆರೋಗ್ಯವಾಗಿದ್ದಾರೆ ಎಂದರು.

ವಸತಿ ನಿಲಯಕ್ಕೆ ತಹಸೀಲ್ದಾರ್ ಭೇಟಿ ನೀಡಿ ಮಾಹಿತಿ ಪಡೆಯಲಿದ್ದಾರೆ. ಅಡುಗೆ ಮಾಡುವಾಗ ಹಲ್ಲಿ ಬಿದ್ದಿತ್ತಾ ಅಥವಾ ಇನ್ನೇನಾದರೂ ಬೆರೆಸಲಾಗಿದೆಯಾ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲಿದ್ದಾರೆ. ಅಡುಗೆ ಮಾಡುವಲ್ಲಿ ನಿರ್ಲಕ್ಷ್ಯ ವಹಿಸಿದವರ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದರು.

 

ಭರ್ಜರಿ ಮದುವೆ ಊಟ ಮಾಡಿದವರಿಗೆ ವಾಂತಿ, ಬೇಧಿ: 50 ಜನರು ಆಸ್ಪತ್ರೆ ದಾಖಲು

click me!