
ಮಂಗಳೂರು (ನ.8): ಬಹುಕೋಟಿ ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಂಗಳೂರಿನ ರೋಷನ್ ಸಲ್ಡಾನ ಅವರ ಮನೆ ಮತ್ತು ಬ್ಯಾಂಕ್ ಖಾತೆ ಸೇರಿದಂತೆ 2.85 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನ ಜಾರಿ ನಿರ್ದೇಶನಾಲಯ (ಇ.ಡಿ.) ತಾತ್ಕಾಲಿಕ ಮುಟ್ಟುಗೋಲು ಹಾಕಿದೆ.
ಜಾರಿ ನಿರ್ದೇಶನಾಲಯದ ಮಂಗಳೂರು ಉಪವಲಯ ಕಚೇರಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಮುಟ್ಟುಗೋಲು ಹಾಕಿದ್ದಾರೆ.
ರೋಷನ್ ಸಲ್ಡಾನ, ಅವರ ಪತ್ನಿ ಢಫ್ನಿ ನೀತು ಹಾಗೂ ಇತರರ ವಿರುದ್ಧ ದಾಖಲಾದ ಎಫ್‌ಐಆರ್ ಆಧಾರದಲ್ಲಿ ಇ.ಡಿ. ತನಿಖೆಯನ್ನು ಪ್ರಾರಂಭಿಸಿದೆ. ರೋಷನ್ ಸಲ್ಡಾನ್ ಕೋಟಿಗಟ್ಟಲೆ ಸಾಲ ಕೊಡಿಸುವ ಆಮಿಷವೊಡ್ಡಿ 200 ಕೋಟಿಗೂ ಅಧಿಕ ವಂಚನೆ ಮಾಡಿದ್ದರು. ದೇಶದ ಐಷಾರಾಮಿ ವ್ಯಕ್ತಿಗಳು ಹಾಗೂ ಉದ್ಯಮಿಗಳನ್ನು ವಂಚಿಸಿರುವ ಆರೋಪಿ, ನೂರಾರು ಕೋಟಿ ಸಾಲ ತೆಗೆಸಿಕೊಡುವುದಾಗಿ ಹೇಳಿ 5 ರಿಂದ 10 ಕೋಟಿ ರೂಪಾಯಿ ಮುಂಗಡ ಹಣ ಪಡೆದು ಮೋಸ ಮಾಡುತ್ತಿದ್ದ.
ಈ ಪ್ರಕರಣದಲ್ಲಿ ಇಬ್ಬರು ಉದ್ಯಮಿಗಳು ನೀಡಿದ ದೂರಿನ ಆಧಾರದಲ್ಲಿ ಕಳೆದ ಜುಲೈ 17ರಂದು ಮಂಗಳೂರು ಪೊಲೀಸರು ರೋಷನ್ ಸಲ್ಡಾನನನ್ನು ಬಂಧಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ